ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಕೊಚ್ಚಿ : ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಕೇರಳದ ವಯನಾಡ್ ಮೂಲದ ಶಫಿ ಮೊಹಮ್ಮದ್ ಬಂಧಿತ ಆರೋಪಿಯಾಗಿದ್ದಾನೆ. ಶಫಿ ಬಹ್ರೇನ್- ಕೋಝಿಕೋಡ್ – ಕೊಚ್ಚಿಯ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ.
ಚಿನ್ನವನ್ನು ಕರಗಿಸಿ ಪೇಸ್ಟ್ ಮಾಡಿ ತನ್ನ ಕೈಗಳಿಗೆ ಕಟ್ಟಿಕೊಂಡಿದ್ದ. ಪೂರ್ತಿ ತೋಳಿನ ಶರ್ಟ್ ಧರಿಸಿ, ಬಂಗಾರ ಕಾಣದಂತೆ ಮುಚ್ಚಿಟ್ಟುಕೊಳ್ಳಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಆತನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಈ ಅಕ್ರಮ ಚಿನ್ನದ ಕೃತ್ಯ ಬೆಳಕಿಗೆ ಬಂದಿದ್ದು ಆತನಿಂದ ಒಟ್ಟು 1487 ಗ್ರಾಂ ಚಿನ್ನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.