Connect with us

ಚೀನಾದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್: 324 ಭಾರತೀಯರನ್ನ ಕರೆತಂದ ಏರ್ ಇಂಡಿಯಾ

Published

on

ನವದೆಹಲಿ: ಕೊರೋನಾ ವೈರಸ್‌ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚೀನಾದಲ್ಲಿ ನೆಲೆಸಿದ್ದ 324 ಭಾರತೀಯರನ್ನು ನವದೆಹಲಿಗೆ ಕರೆತರಲಾಗಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಏರ್ ಇಂಡಿಯಾ ಪ್ಯಾರಾಮೆಡಿಕಲ್‌ನ ಐವರು ವೈದ್ಯರು ಸೇರಿದಂತೆ ಒಟ್ಟು 324 ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ.

ಚೀನಾದಿಂದ ಕರೆತಂದಿರುವ ಭಾರತೀಯರನ್ನು 14 ದಿನಗಳ ಕಾಲ ನವದೆಹಲಿ ಹಾಗೂ ಮನೇಸರ್‌ನ ಪ್ರತ್ಯೇಕ ಕೇಂದ್ರಗಳಲ್ಲಿ ಇರಿಸಿ ಅವರಲ್ಲಿ ಕೊರೋನಾ ವೈರಸ್‌ ಸೋಂಕಿತ ಯಾವುದೇ ಲಕ್ಷಣಗಳು ಕಂಡು ಬರದಿದ್ದಲ್ಲಿ ಮಾತ್ರ ಅಲ್ಲಿಂದ ಅವರನ್ನು ಅವರ ಮನೆಗಳಿಗೆ ಕಳುಹಿಸಲಾಗುವುದು. ಹಾಗೆಯೇ ಚೀನಾಕ್ಕೆ ತೆರಳಿರುವ ಪೈಲೆಟ್‌ಗಳು, ಎಂಜಿನಿಯರ್‌ಗಳು, ಸಹಾಯಕರು, ಏರ್ ಇಂಡಿಯಾ ಸಿಬ್ಬಂದಿ ಮತ್ತು ವೈದ್ಯರು ಭಾರತಕ್ಕೆ ಹಿಂದಿರುಗಿದ ಬಳಿಕ ಅವರನ್ನು ಕೂಡಾ ಒಂದು ವಾರ ಕಾಲ ಪ್ರತ್ಯೇಕವಾಗಿ ಇರಿಸಲಾಗುವುದು.

ಈಗಾಗಲೇ ಚೀನಾದಲ್ಲಿ ಪತ್ತೆಯಾದ ಈ ಕೊರೋನಾ ವೈರಸ್‌ ಬೇರೆ ಬೇರೆ ದೇಶದಲ್ಲಿ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಈವರೆಗೆ 259 ಜನ ಕೊರೋನಾ ವೈರಸ್ ಗೆ ಬಲಿಯಾಗಿದ್ದು, 11,791 ಜನರಲ್ಲಿ ಸೊಂಕು ಪತ್ತೆಯಾಗಿಯಾಗಿದೆ.

ಇಂತಹ ತುರ್ತು ಪರಿಸ್ಥಿತಿಯಲ್ಲಿ ಕರ್ತವ್ಯ ಮೇರೆಗೆ ಚೀನಾದಲ್ಲಿದ್ದ ಭಾರತೀಯರನ್ನು ನವದೆಹಲಿಗೆ ಕರೆದಿಂದ ಏರ್‌ ಇಂಡಿಯಾ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಭಾರತದಲ್ಲೂ ಕೊರೋನಾ ವೈರಸ್‌ ಸೋಂಕು ಕಾಲಿಟ್ಟಿದ್ದು ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.

Click to comment

Leave a Reply

Your email address will not be published. Required fields are marked *

bengaluru

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Published

on

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending