Connect with us

LATEST NEWS

ವರದಕ್ಷಿಣೆ ಕಿರುಕುಳ ತಾಳಲಾರದೆ ಸಬರಮತಿ ನದಿ ಪಾಲಾದ ಯುವತಿ ಆಯಿಷಾ.!

Published

on

ವರದಕ್ಷಿಣೆ ಕಿರುಕುಳ ತಾಳಲಾರದೆ ಸಬರಮತಿ ನದಿ ಪಾಲಾದ ಯುವತಿ ಆಯಿಷಾ.!

ಗುಜರಾತ್: ಪತಿಯ ಮನೆಯವರ ವರದಕ್ಷಿಣೆಯ ಕಿರುಕುಳವನ್ನು ಸಹಿಸಲಾಗದೇ ಯುವತಿಯೋರ್ವಳು ನದಿ ತೀರದಲ್ಲಿ ನಿಂತು ವೀಡಿಯೋ ಚಿತ್ರೀಕರಣ ನಡೆಸಿ ತನ್ನ ಮಾತುಗಳನ್ನು ದಾಖಲಿಸಿದ ಬಳಿಕ ಆತ್ಮಹತ್ಯೆಗೈದ ದಾರುಣ ಘಟನೆ ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿರುವ ಸಬರಮತಿ ನದಿ ತೀರದಲ್ಲಿ ನಡೆದಿದೆ.ಆತ್ಮಹತ್ಯೆಗೈದ ಯುವತಿಯನ್ನು ಆಯಿಶಾ ಎಂದು ಗುರುತಿಸಲಾಗಿದೆ. ಆಯಿಶಾ 2018ರಲ್ಲಿ ರಾಜಸ್ಥಾನದ ಆರಿಫ್‌ ಖಾನ್‌ ಎಂಬಾತನನ್ನು ಮದುವೆಯಾಗಿದ್ದಳು,

ಮದುವೆಯ ಬಳಿಕ ಅತ್ತೆ, ಗಂಡ ಹಾಗೂ ಮನೆಯವರಿಂದ ವರದಕ್ಷಿಣೆ ತರುವಂತೆ ಕಿರುಕುಳ ಪ್ರಾರಂಭವಾಗಿತ್ತು ಹಾಗೂ ಹಿಂಸಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತಾದಂತೆ ಆಕೆ ವತ್ವಾ ಪೊಲೀಸ್‌ ಠಾಣೆಯಲ್ಲಿ ಅವರೆಲ್ಲರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದಳು ಎಂದು ತಿಳಿದು ಬಂದಿದೆ.

ಆಕೆಯ ವೀಡಿಯೋದಲ್ಲಿ, “ಅಪ್ಪಾ.. ನೀವು ಯಾವಾಗ ಈ ಕೇಸ್‌ ಕುರಿತು ಹೋರಾಡುತ್ತೀರಿ? ನನ್ನನ್ನು ಹೋರಾಡಲು ಜಗಳವಾಡಲು ಬಿಡಬೇಡಿ. ನನಗೆ ಜಗಳವಾಡಲು ಇಷ್ಟವಿಲ್ಲ

ಆರಿಫ್‌ ಗೆ ಸ್ವಾತಂತ್ರ್ಯ ಬೇಕು ಎಂದಾದರೆ ಸರಿ.. ಅವನು ಸ್ವತಂತ್ರನಾಗಿದ್ದಾನೆ. ನಾನು ತುಂಬಾ ಸಂತೋಷವಾಗಿದ್ದೇನೆ. ನಾನು ಅಲ್ಲಾಹನನ್ನು ಭೇಟಿಯಾಗಲು ತೆರಳುತ್ತಿದ್ದೇನೆ.

ನಾನು ಅಲ್ಲಾಹನಲ್ಲಿ ಎಲ್ಲವನ್ನೂ ಹೇಳುತ್ತೇನೆ. ನಾನೇನು ತಪ್ಪು ಮಾಡಿದ್ದೆ? ನನಗೆ ಉತ್ತಮ ಪೋಷಕರು ಸಿಕ್ಕಿದ್ದಾರೆ. ಉತ್ತಮ ಸ್ನೇಹಿತರು ಸಿಕ್ಕಿದ್ದಾರೆ. ಆದರೆ ನನ್ನ ವಿಧಿ ಸರಿಯಾಗಿಲ್ಲವಷ್ಟೇ” “ನನಗೇನೂ ಹೇಳಲಿಕ್ಕಿಲ್ಲ. ಸರ್ವಶಕ್ತ ದೇವರು ನನಗೆ ಸಣ್ಣ ಜೀವನವನ್ನು ದಯಪಾಲಿಸಿದ್ದಾನೆ.

ಯಾವ ಪ್ರೀತಿ ನಿಮಗೆ ದಕ್ಕುವುದಿಲ್ಲವೋ, ಅದನ್ನು ಅನ್ವೇಷಿಸಿ ಅದರ ಹಿಂದೆ ಹೋಗಬೇಡಿ, ಆ ಪ್ರೀತಿ ಮದುವೆಯ ಬಳಿಕವೂ ಸಿಗುವುದಿಲ್ಲ” ಸಬರಮತಿ ನದಿಯ ತೀರಿದಲ್ಲಿ ನಿಂತು “ಇದೊಂದು ಪ್ರೀತಿಯುತ ನದಿ. ಇದು ನನ್ನನ್ನು ಸೆಳೆದುಕೊಳ್ಳುತ್ತದೆ ಎಂದು ನಾನು ನಂಬುತ್ತೇನೆ.

ನಾನು ಗಾಳಿಯಂತೆ, ತೇಲಲು ಬಯಸುತ್ತೇನೆ. ನಾನಿಂದು ಸಂತೋಷವಾಗಿದ್ದೇನೆ. ನಿಮ್ಮ ಪ್ರಾರ್ಥನೆಯಲ್ಲಿ ನನ್ನನ್ನೂ ಸೇರಿಸಿಕೊಳ್ಳಿ. ನಾನು ಸ್ವರ್ಗಕ್ಕೋ, ನರಕಕ್ಕೋ ಎಂದು ನನಗಿನ್ನೂ ತಿಳಿದಿಲ್ಲ” ಎಂದು ಆಕೆ ವೀಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.

ನದಿಗೆ ಹಾರಿ ಆತ್ಮಹತ್ಯೆ ಮಾಡುವ ಮುನ್ನ ಆಯಿಶಾ ತನ್ನ ತಂದೆ ತಾಯಿಗೆ ಕರೆ ಮಾಡಿದ್ದಳು ಎನ್ನಲಾಗಿದೆ. “ಇಲ್ಲಿಯವರೆಗೆ ಏನೆಲ್ಲಾ ನಡೆಯಿತೋ ಅದು ಸಾಕಾಗಿದೆ. ಇನ್ನು ಮುಂದೆ ನನಗೆ ಸಹಿಸಲು ಸಾಧ್ಯವಿಲ್ಲ.

ಆರಿಫ್‌ ಗೆ ಸ್ವಾತಂತ್ರ್ಯ ಬೇಕಂತೆ. ನಾನು ಆತನಿಗೆ ಸ್ವಾತಂತ್ರ್ಯ ನೀಡುತ್ತೇನೆ” ಎಂದು ಆಕೆ ಹೇಳಿದ್ದಾಗಿ ವರದಿಯಾಗಿದೆ.  ನಾನು ಈಗಾಗಲೇ ಆರಿಫ್‌ ಗೆ ಕರೆ ಮಾಡಿದ್ದೇನೆ.

ನಿನಗೇನು ಮಾಡಬೇಕು ಎಂದು ಅನಿಸುತ್ತದೆಯೋ ಅದನ್ನು ಮಾಡು ಎಂದು ಆತ ಹೇಳಿದ್ದಾನೆ. ನಾನು ವೀಡಿಯೋ ಮಾಡುತ್ತಿದ್ದೇನೆ. ಆರಿಫ್‌ ನನ್ನು ಪೊಲೀಸರು ಬಂಧಿಸಬೇಕು.

ನಾನು ಈಗಾಗಲೇ ವೀಡಿಯೋ ಮಾಡಿದ್ದೇನೆ. ನಾನು ಇದೀಗ ಧುಮುಕುತ್ತಿದ್ದೇನೆ” ಎಂದು ಆಕೆ ತಾಯಿಯ ಬಳಿ ಹೇಳಿದ್ದಾಗಿ ತಿಳಿದು ಬಂದಿದೆ.

ಈಜುಗಾರರು ಮತ್ತು ಅಗ್ನಿಶಾಮಕ ದಳದ ಪ್ರತಿನಿಧಿಗಳು ಆಕೆಯನ್ನು ರಕ್ಷಿಸಲು ಪ್ರಯತ್ನಿಸಿ, ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು ಎಂದು ತಿಳಿದು ಬಂದಿದೆ. ಸದ್ಯ ಈ ಕುರಿತು ಆಕೆಯ ಪತಿ ಆರಿಫ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!

Published

on

ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.


ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :

ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.

ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.

ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ

ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!

ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.

ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.

Continue Reading

LATEST NEWS

Trending