Connect with us

    BANTWAL

    ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

    Published

    on

    ಬಂಟ್ವಾಳ: ತನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುವ ಮೂಲಕ ಪ್ರತಿಯೊಬ್ಬರೂ ದೇಶಕಟ್ಟುವ ಕಾರ್ಯದಲ್ಲಿ ಪರೋಕ್ಷವಾಗಿ ಭಾಗವಹಿಸಬಹುದಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.


    ಅವರು ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಮಾತನಾಡಿ ‘ವಿದ್ಯುತ್ ನಮ್ಮ ಪ್ರಗತಿಯ ಅತೀ ಪ್ರಮುಖ ವಿಚಾರವಾಗಿದ್ದು, ಬಂಟ್ವಾಳದಲ್ಲಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ತರಲಾಗಿದೆ.

    ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯಡಿ 12 ಕೋಟಿ ವೆಚ್ಚದಲ್ಲಿ ಬಂಟ್ವಾಳ ದ ಅರ್ಬಿಗುಡ್ಡೆ ಎಂಬಲ್ಲಿ 2×8 MVA , 33/11 ಕೆ.ವಿ‌ ಗ್ಯಾಸ್ ಇನ್ಸುಲೇಟೆಡ್ ವಿದ್ಯುತ್ ಉಪಕೇಂದ್ರದ ಸ್ಥಾಪನೆ ಮಾಡಿದ ಪರಿಣಾಮ ಸುಮಾರು 20,000 ಫಲಾನುಗಳಿಗೆ ಅನುಕೂಲವಾಗಿದ್ದು, ಬಂಟ್ವಾಳದಲ್ಲಿ ವಿದ್ಯುತ್ ಕಡಿತದಂತಹ ಅನೇಕ ಸಮಸ್ಯೆ ಗಳು ನಿವಾರಣೆ ಆಗಿದೆ.

    ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಯಡಿ 6.11 ಕೋಟಿ ವೆಚ್ಚದಲ್ಲಿ 873 ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ’ ಎಂದು ಅವರು ಹೇಳಿದರು.

    ಸೌಭಾಗ್ಯ ಯೋಜನೆಯಡಿಯಲ್ಲಿ ರೂ.3.41 ಕೋಟಿ ವೆಚ್ಚದಲ್ಲಿ 955 ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬೆಳಕು ಯೋಜನೆಯ ಮೂಲಕ ತಾಲೂಕಿನ ಅನೇಕ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ರೂ.39.18 ಲಕ್ಷ ವೆಚ್ಚದಲ್ಲಿ 94 ಮನೆಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಅವರು ತಿಳಿಸಿದರು.

    ಮುಖ್ಯ ಅತಿಥಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಮಾತನಾಡಿ , ಅಜಾದ್ ಕಿ.ಅಮೃತ್ ಮಹೋತ್ಸವ ಕಾರ್ಯಕ್ರಮ ದೇಶ ಪ್ರೇಮವನ್ನು ಹೆಚ್ಚಿಸುವ ಹಾಗೂ ಸರಕಾರದ ಯೋಜನೆಗಳನ್ನು ಜನರ ಮುಂದಿಡಲು ರೂಪಿಸಿದ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು.

    ಜಿಲ್ಲೆಯ ಹಂತದಲ್ಲಿ ಮೆಸ್ಕಾಂ ಅಧಿಕಾರಿಗಳ ಹಾಗೂ ತಾಲೂಕಿನ ಅಧಿಕಾರಿಗಳ ಜೊತೆಗೆ ಸಿಬ್ಬಂದಿ ಗಳ ಹೊಂದಾಣಿಕೆಯ ಕೆಲಸ ಕಾರ್ಯಗಳಿಂದ ಗ್ರಾಮ ಗ್ರಾಮಗಳು ಸಂಪೂರ್ಣ ವಿದ್ಯುತ್ ಕರಣಗೊಂಡರೆ ನಿಮ್ಮ ಸೇವೆ ಸಾರ್ಥಕ ವಾಗುತ್ತದೆ , ಶೋಷಣೆಯಿಲ್ಲದೆ, ಮನೆಬೆಳಗುವ ಕೆಲಸ ಮಾಡಿದರೆ ಇದೇ ನಿಮ್ಮ ದೇಶ ಸೇವೆ ಎಂದರು.

    ರಾಜ್ಯದಲ್ಲಿ ಅತೀ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಇತರರಿಗೆ ರಪ್ತು ಮಾಡುವ ಮೂಲಕ ಹೆಗ್ಗಳಿಕೆ ಗೆ ಪಾತ್ರ ವಾಗಿದೆ’ ಎಂದು ತಿಳಿಸಿದರು.

    ಬಡ ಕುಟುಂಬ ಕತ್ತಲಲ್ಲಿ ಬದುಕಬಾರದು ಎಂಬ ನಿಟ್ಟಿನಲ್ಲಿ ಸ್ವಾತಂತ್ರ್ಯದ ಹೊಸ ಕಲ್ಪನೆ ಯನ್ನು ಕೊಡುವ ಪ್ರಯತ್ನ ಮಾಡಿದರೆ ಅಜಾದ್ ಕಿ ಅಮೃತ್ ಮಹೋತ್ಸವ ಕಾರ್ಯಕ್ರಮಕ್ಕೆ ಬೆಲೆ ಬರುತ್ತದೆ ಎಂದು ಅವರು ಹೇಳಿದರು.

    ಮೆಸ್ಕಾಂ ಎಂ.ಡಿ.ಪ್ರಸಾಂತ್ ಕುಮಾರ್ ಮಿಶ್ರ, ಜಿ.ಪಂ.ಸಿ.ಒ.ಕುಮಾರ್, ಜಿಲ್ಲಾ ನೊಡಲ್ ಅಧಿಕಾರಿ ಚಿತ್ತರಂಜನ್, ತಹಶಿಲ್ದಾರ್ ಸ್ಮಿತಾರಾಮು, ತಾಂತ್ರಿಕ ನಿರ್ದೇಶಕಿ ಪದ್ಮಾವತಿ ಡಿ. ಮತ್ತಿತರರು ಉಪಸ್ಥಿತರಿದ್ದರು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending