Connect with us

LATEST NEWS

ಅನುಕಂಪದ ಆಧಾರದಲ್ಲಿ ತಹಸೀಲ್ದಾರ್‌ ಆಗಿದ್ದ ಪುತ್ತೂರಿನ ಅಜಿತ್‌ಕುಮಾರ್ ರೈ 500 ಕೋಟಿ ಬೇನಾಮಿ ಆಸ್ತಿ ಒಡೆಯ..!

Published

on

ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ದಕ್ಷಿಣ ಕನ್ನಡದ ಪುತ್ತೂರು ಮೂಲಕ ಪ್ರಸ್ತುತ ಬೆಂಗಳೂರಿನ ಕೆ ಆರ್ ಪುರ ತಹಸೀಲ್ದಾರ್‌ ಅಜಿತ್‌ ಕುಮಾರ್ ರೈ ಅನುಕಂಪದ ಆಧಾರದಲ್ಲಿ ಹುದ್ದೆ ಗಿಟ್ಟಿಸಿದ್ದು ಬರೋಬ್ಬರಿ 500 ಕೋಟಿ ಬೇನಾಮಿ ಆಸ್ತಿಯ ಒಡೆಯನಾಗಿದ್ದಾನೆ.

ಮಂಗಳೂರು : ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ದಕ್ಷಿಣ ಕನ್ನಡದ ಪುತ್ತೂರು ಮೂಲಕ ಪ್ರಸ್ತುತ ಬೆಂಗಳೂರಿನ ಕೆ ಆರ್ ಪುರ ತಹಸೀಲ್ದಾರ್‌ ಅಜಿತ್‌ ಕುಮಾರ್ ರೈ ಅನುಕಂಪದ ಆಧಾರದಲ್ಲಿ ಹುದ್ದೆ ಗಿಟ್ಟಿಸಿದ್ದು ಬರೋಬ್ಬರಿ 500 ಕೋಟಿ ಬೇನಾಮಿ ಆಸ್ತಿಯ ಒಡೆಯನಾಗಿದ್ದಾನೆ.

ಅಜಿತ್ ಕುಮಾರ್ ರೈ

ಹಿರಿಯ ಅಧಿಕಾರಿಗಳಲ್ಲಿ ಒಬ್ಬನಾಗಿದ್ದ ಈತ ತಹಸೀಲ್ದಾರ್ ಹುದ್ದೆಗೆ ಕಳಂಕ ತಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳ ವಲಯದಲ್ಲಿ ಕೆಟ್ಟ ಹೆಸರು ತಂದಿದ್ದಾನೆ ಎನ್ನುವ ಆಕ್ರೋಶ ಕರಾವಳಿಯಲ್ಲೂ ಕೇಳಿ ಬಂದಿದೆ.

ಮೂಲತಃ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಸಾಗು ನಿವಾಸಿಯಾಗಿರುವ ಅಜಿತ್‌ಕುಮಾರ್‌ ರೈ ತಂದೆ ಆನಂದ ಸೊರಕೆ ಅವರು ಭೂಮಾಪನಾ ಇಲಾಖೆಯಲ್ಲಿ ಸರ್ವೇಯರ್‌ ಆಗಿದ್ದರು.

ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ಅವರು ತಮ್ಮ 50ನೇ ವರ್ಷದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರು.

ಹೀಗಾಗಿ ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಪ್ರಥಮ ದರ್ಜೆ ಕ್ಲರ್ಕ್‌ ಹುದ್ದೆ ಸಿಕ್ಕಿತ್ತು.

ಬಳಿಕ ಕಂದಾಯ ನಿರೀಕ್ಷಕರಾಗಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಜಿತ್‌, ಉಪತಹಸೀಲ್ದಾರ್ ಆಗಿ , ತಹಸೀಲ್ದಾರ್‌ ಆಗಿ ನೇಮಕವಾಗಿದ್ದರು.

ತಂದೆ  ಬಳಿ ಮನೆ ಮತ್ತು ತೋಟ ಹೊಂದಿದ್ದು, ಇದೇ ಜಾಗದಲ್ಲಿ ಅಜಿತ್‌ ಹೊಸ ಮನೆ ಕೂಡಾ ನಿರ್ಮಿಸಿದ್ದು, ಇಲ್ಲಿ ಈಗ ತಾಯಿ ಮಾತ್ರ ವಾಸವಿದ್ದಾರೆ.

ಅಜಿತ್‌ ಬಂಧನವಾಗುತ್ತಿದ್ದಂತೆ ಸಾಗು ನಿವಾಸಕ್ಕೆ ಬಂದ ಲೋಕಾಯುಕ್ತ ಪೊಲೀಸರು ಅಲ್ಲೂ ಕೂಡಾ ತಪಾಸಣೆ ನಡೆಸಿದ್ದಾರೆ.

ಇವರ ಇನ್ನೊಬ್ಬ ಸಹೋದರ ಆಶಿತ್ ರೈ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ಅಜಿತ್‌ ಹೆಸರಿನಲ್ಲಿದ್ದ 150 ಎಕರೆಗೂ ಹೆಚ್ಚು ಬೇನಾಮಿ ಆಸ್ತಿ ದಾಖಲೆ ವಶಪಡಿಸಲಾಗಿದೆ.

ವಿಲಾಸಿ ಜೀವನ ನಡೆಸುತ್ತಿದ್ದ ಅಜಿತ್‌ಕುಮಾರ ಬ್ಯಾಂಕಾಕ್ ಸೇರಿದಂತೆ ಹಲವು ದೇಶಗಳಿಗೆ ಪ್ರವಾಸಿ ಹೋಗಿ ಬಂದಿದ್ದ.

ಈಗ ಈತನ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ. ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಈತನ ಸಹಕಾರ ನಗರದ ಮನೆಯಲ್ಲಿ ದುಬಾರಿ ಮೌಲ್ಯದ ಸುಮಾರು 50 ಕೈಗಡಿಯಾರ ಪತ್ತೆಯಾಗಿದೆ.

ಸುಮಾರು 18 ಲೀಟರ್ ವಿದೇಶಿ ಮದ್ಯದ ಬಾಟಲಿಗಳು ಸಿಕ್ಕಿವೆ. ಮನೆಯಲ್ಲಿ 750 ಗ್ರಾಂ ಚಿನ್ನಾಭರಣ, ದುಬಾರಿ ಬೆಲೆಯ ಮೂರು ರಾಡೊ ವಾಚು, ವಿದೇಶಿ ಬ್ರಾಂಡ್‌ನ ಸುಮಾರು 50 ವಾಚುಗಳು ಸಿಕ್ಕಿದ್ದು ಇದರ ಮೌಲ್ಯ 60 ಲಕ್ಷ ರೂಪಾಯಿಗಲಾಗಿದೆ.


ದುಬಾರಿ ಮೌಲ್ಯದ ವಾಹನಗಳನ್ನು ಹೊಂದಿದ್ದ ಅಜಿತ್‌ ಬಳಿ ಲ್ಯಾಂಡ್ ಕ್ರೂಸರ್‌, ವೋಲ್ವೋ 360, ಥಾರ್‌ ಜೀಪು, ಫಾರ್ಚೂನರ್‌ ಸೇರಿ 9 ವಾಹನಗಳಿವೆ.

ಜೊತೆಗೆ ಮೂರು ರಾಯಲ್ ಎನ್‌ಫೀಲ್ಡ್‌, ಸ್ಕೂಟಿ ಪತ್ತೆಯಾಗಿದೆ.

ಎಲ್ಲಾ ವಾಹನಗಳ ಕೊನೆಯ ನಂಬರ್‌ 1368 ಆಗಿರುವುದು ವಿಶೇಷ. ವಾಹನಗಳನ್ನು ಆರೋಪಿಯ ಆಸ್ತಿಯಲ್ಲಿ ಜಮಾವಣೆ ಮಾಡಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಜಿತ್‌ನನ್ನು ಲೋಕಾಯುಕ್ತ ಕಚೇರಿಯಲ್ಲಿ ನಿರಂತರವಾಗಿ ತನಿಖೆಗೆ ಒಳಪಡಿಸಲಾಗಿದೆ.

ಆದರೆ ಯಾವುದೇ ದಾಖಲೆ ಪತ್ರಗಳ ಬಗ್ಗೆ ಈತ ಯಾವುದೇ ಮಾಹಿತಿ ಬಾಯ್ಬಿಡುತ್ತಿಲ್ಲ. ಈತನ ಬೇನಾಮಿಗಳಾದ ಸಹೋದರ ಆಶಿತ್ ರೈ, ಆಪ್ತರಾದ ಕೃಷ್ಣಪ್ಪ, ನವೀನ್, ಹರ್ಷವರ್ಧನ್‌, ಪ್ರವೀಣ್‌ಗೆ ನೊಟೀಸ್‌ ನೀಡಿ ವಿಚಾರಣೆಗೆ ಕರೆತರಲು ಸಿದ್ಧತೆ ನಡೆದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

LATEST NEWS

Trending