MANGALORE
ಶ್ರೀ ಪೊಳಲಿ ಕ್ಷೇತ್ರದಲ್ಲಿ ಇಂದಿನಿಂದ ಅಖಂಡ ಭಜನಾ ಸಪ್ತಾಹ
ಬಂಟ್ವಾಳ: ತಾಲೂಕಿನ ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ಮಹಾಮಾತೆಯ ಸನ್ನಿಧಿಯಲ್ಲಿ ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿಯ ವತಿಯಿಂದ ಆಗಸ್ಟ್ 3ರಿಂದ 10ರ ವರೆಗೆ ಜರುಗಲಿರುವರ ಅಖಂಡ ಭಜನಾ ಸಪ್ತಾಹಕ್ಕೆ ವೇದಮೂರ್ತಿ ಕೋಡಿ ಮಜಲು ಅನಂತ ಪದ್ಮನಾಭ ಉಪಾಧ್ಯಾಯ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.
ಶ್ರೀ ಕ್ಷೇತ್ರದ ಮಾಧವ ಭಟ್, ನಾರಾಯಣ ಭಟ್, ಪರ್ದಕಂಡ ಮಾಧವ ಭಟ್, ತಂತ್ರಿ ವೆಂಕಟೇಶ, ಗಿರೀಶ್ ತಂತ್ರಿ, ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಬಿ ನಾಗರಾಜ ಶೆಟ್ಟಿ, ಪೆರ್ಮಂಕಿ ಗುತ್ತು ಚಂದ್ರಹಾಸ ಶೆಟ್ಟಿ, ಪವನ್ ಕುಮಾರ್, ನಂದರಾಜ ರೈ ಮೊದಲಾದವರು ಉಪಸ್ಥಿತರಿದ್ದರು. ಭಜನಾ ಮಂಡಳಿತ ವೆಂಕಟೇಶ ನಾವಡ, ಬಾಬುರಾವ್, ಕುಮಾರ ದೇವಾಡಗ, ರಾಮಚಂದ್ರ ದೇವಾಡಿಗ, ರಾಜೇಶ್, ಪ್ರೀತೇಶ್, ನವೀನ, ಸೇಸಪ್ಪ, ಗಗನ್ ಹರೀಶ ತೋಡಬಳ, ಮೋಹನದಾಸ ಮಾತೃ ಮಂಡಳಿಯ ಸದಸ್ಯೆಯರು ಮೊದಲಾದವರಿದ್ದರು.
DAKSHINA KANNADA
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.
ಇ ಮೇಲ್ ಮೂಲಕ ಬಂತು ಬೆದರಿಕೆ :
ಕಳೆದ ಎಪ್ರಿಲ್ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.
ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ
ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ವಿವರಿಸಿದ್ದಾರೆ.
ಇ ಮೇಲ್ ನಲ್ಲಿ ಏನಿದೆ ?
ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.
DAKSHINA KANNADA
ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ
ಉಪ್ಪಿನಂಗಡಿ : ಕೋವಿಶೀಲ್ಡ್ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.
ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.
ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!
ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.
DAKSHINA KANNADA
ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ
ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.
ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.
ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.
ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.
ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.
- DAKSHINA KANNADA1 day ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS6 days ago
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM3 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY2 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು