DAKSHINA KANNADA
ಗಡಿಗ್ರಾಮಗಳ ಹೆಸರು ಬದಲಾವಣೆ: ಅಂತಹ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದ ಶಾಸಕ ಎಕೆಎಮ್ ಅಶ್ರಫ್
Published
4 years agoon
By
Adminಮಂಗಳೂರ: ಗಡಿಗ್ರಾಮಗಳ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಿಎಸ್‌ವೈ ಹೇಳಿಕೆ ನಂತರ ಮಂಜೇಶ್ವರದ ಸ್ಥಳೀಯ ಶಾಸಕ ಎಕೆಎಮ್ ಅಶ್ರಫ್ ಫೇಸ್‌ಬುಕ್‌ಲ್ಲಿ ಪ್ರತಿಕ್ರಿಯಿಸಿ ಅಂತಹ ಯಾವುದೇ ಸುತ್ತೋಲೆಯನ್ನು ಕೇರಳ ಸರ್ಕಾರ ಹೊರಡಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಸುದೀರ್ಘ ಸ್ಪಷ್ಟನೆ ನೀಡಿರುವ ಅವರು, ಹೆಸರು ಬದಲಾವಣೆ ಬಗ್ಗೆ ಈ ಬಗ್ಗೆ ಕೇರಳ ಮುಖ್ಯ ಮಂತ್ರಿ ಅವರ ಕಛೇರಿಯನ್ನು ಮತ್ತು ಅವರ ಪಿ.ಎ ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಲಾಯಿತು. ಕಾಸರಗೋಡು ಜಿಲ್ಲಾಧಿಕಾರಿ ಅವರಲ್ಲಿ ಪೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಈ ಎಲ್ಲಾ ಮಾಹಿತಿ ಪ್ರಕಾರ ಸ್ಥಳ ನಾಮ ಬದಲಾವಣೆ ಬಗ್ಗೆ ಹೊರ ಬರುವ ವಿಚಾರಗಳು ವಾಸ್ತವ ವಿರುದ್ಧ. ಇಂತಹ ಯಾವುದೇ ಸುತ್ತೋಲೆ ಕೇರಳ ಸರಕಾರ ಹೊರಡಿಸಲಿಲ್ಲ.ಅಂತಹ ಯಾವುದೇ ಯೋಚನೆಯು ಸರಕಾರದ ಮುಂದಿಲ್ಲ. ಆದರೆ ರೇಶನ್ ಕಾರ್ಡ್ ನಲ್ಲಿ ಸಾಪ್ಟ್ ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ. ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅಧಿಕೃತವಾಗಿ ಯಾವುದೇ ಸುತ್ತೋಲೆ ಇಲ್ಲದೆ ಕೇವಲ ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳ ಆಧಾರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಕುಮಾರಸ್ವಾಮಿ ಮಾಡಿರುವ ಟ್ವೀಟ್,ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿದ ಹೇಳಿಕೆ ಜನರಲ್ಲಿ ಗೊಂದಲ ಉಂಟುಮಾಡಿದೆ ಎಂದು ಆರೋಪಿಸಿದ್ದಾರೆ.
ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ, ಸರಕಾರದ ಅದೇಶವೆನಾದರೂ ಬಂದರೆ ಆದರ ವಿರುದ್ದದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ. ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.
BANTWAL
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ
Published
13 hours agoon
09/01/2025By
NEWS DESK2ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.
DAKSHINA KANNADA
ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ
Published
13 hours agoon
09/01/2025By
NEWS DESK3ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ 9 ದೋಣಿಗಳನ್ನು ವಶಪಡಿಸಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಬ್ಲಮೊಗರು ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿದ್ದ ಸುಮಾರು 13.5 ಲಕ್ಷ ರೂಪಾಯಿ ಮೌಲ್ಯದ 9 ಬೋಟು, 2 ಯಂತ್ರ, 3 ಗ್ಯಾಸ್ ಸಿಲಿಂಡರ್, 13 ಪ್ಲಾಸ್ಟಿಕ್ ಬಕೆಟ್ ಗಳನ್ನು ವಶಪಡಿಸಲಾಯಿತು.
ಇದನ್ನೂ ಓದಿ: ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್, ಸಿಬ್ಬಂದಿಗಳು ಇದ್ದರು.
DAKSHINA KANNADA
ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ
Published
14 hours agoon
09/01/2025By
NEWS DESK3ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾ*ಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.
ಕಾವ್ಯಶ್ರೀ ಎಂಬುವವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸು*ಟ್ಟು ನೋವುಂಟು ಮಾಡಿದ್ದರು.
ಇದನ್ನೂ ಓದಿ: ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ನೀರಾಟಕ್ಕಿಳಿದ ನಾಲ್ವರಲ್ಲಿ ಮೂವರು ಸಾವು, ಓರ್ವನ ರಕ್ಷಣೆ
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ದ ದೂರು ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.