Connect with us

    DAKSHINA KANNADA

    ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ; ವಿಶೇಷ ಸರಕಾರಿ ಅಭಿಯೋಜಕರಾಗಿ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ

    Published

    on

    ಪುತ್ತೂರು : ಪುತ್ತೂರಿನ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ.

    ಪ್ರಸ್ತುತ ಜಾರಿ ನಿರ್ದೇಶನಾಲಯ (ಇಡಿ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯವಾದಿಗಳಾದ ಮಹೇಶ್ ಕಜೆ  ಇವರನ್ನು ನೇಮಕ ಮಾಡಲಾಗಿದೆ.  ಈಗಾಗಲೇ ಸರಕಾರಿ ಅಭಿಯೋಜಕಿ ಜಯಂತಿಯವರು ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣೆಯಾಗುವಂತೆ ಮಾಡಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು : ಖಾಸಗಿ ಬಸ್ಸಿಗೆ ‘ಇಸ್ರೇಲ್‌’ ಹೆಸರು; ತೀವ್ರ ಆಕ್ಷೇಪದ ಬಳಿಕ ‘ಜೆರುಸಲೇಂ’ ಎಂದು ಹೆಸರಿಟ್ಟ ಮಾಲಕ

    Published

    on

    ಮಂಗಳೂರು: ‘ಇಸ್ರೇಲ್ ಟ್ರಾವೆಲ್ಸ್’ ಎಂಬ ಹೆಸರು ಮುಲ್ಕಿ-ಮೂಡುಬಿದಿರೆ ಸಂಚರಿಸುವ ಖಾಸಗಿ ಬಸ್ಸಿಗೆ ಇಟ್ಟಿದಕ್ಕೆ ಅಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಆ ಹೆಸರನ್ನೇ ಬದಲಾಯಿಸಲಾಗಿದೆ.


    ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್ ಕಟೀಲು ಅವರು ಮಂಗಳೂರಿನಲ್ಲಿ ಬಸ್ ಖರೀದಿಸಿ ಅದಕ್ಕೆ ‘ಇಸ್ರೇಲ್ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದರು. ಇತ್ತೀಚಿಗೆ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಉಂಟಾಗಿದ್ದ ಹಿನ್ನಲೆಯಲ್ಲಿ ಕೆಲವರು ‘ಇಸ್ರೇಲ್ ಟ್ರಾವೆಲ್ಸ್’ ಹೆಸರಿಗೆ ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದರು.
    ಈ ಬಗ್ಗೆ ಪ್ರತಿಕ್ರಿಯಿಸಿದ ಲೆಸ್ಟರ್ “ಇಸ್ರೇಲ್ನಲ್ಲಿ ಕೆಲಸ ಮಾಡಿದ ಹಾಗೂ ಆ ದೇಶದ ವ್ಯವಸ್ಥೆಯನ್ನು ನೋಡಿ ಅಭಿಮಾನದಿಂದ ಬಸ್ಸಿಗೆ ಇಸ್ರೇಲ್ ಹೆಸರಿಟ್ಟಿದ್ದೆ. ಇದಕ್ಕೆ ಆಕ್ಷೇಪ ವ್ಯಕ್ತವಾದುದರಿಂದ ಬೇಸರವಾಗಿ ಬಸ್ ಹೆಸರು ಬದಲಿಸಿದ್ದೇನೆ. ಜೇರುಸಲೆಂ ಪವಿತ್ರ ಭೂಮಿ. ಅದು ಇಸ್ರೇಲ್‌ನಲ್ಲಿ ಇದೆ” ಎಂದರು.
    ‘ಇಸ್ರೇಲ್ ಟ್ರಾವೆಲ್ಸ್’ ಹೆಸರಿಗೆ ವಿರೋಧ ವ್ಯಕ್ತವಾಗಿರುವುದು, ಪೊಲೀಸರ ಗಮನಕ್ಕೆ ಬಂದಿದ್ದು, ಮುಂದೆ ದ್ವೇಷ ಹೊರಡುವುದು ಬೇಡವೆಂಬ ಕಾರಣಕ್ಕೆ ಪೊಲೀಸರು ಬಸ್‌ನ ಮಾಲಿಕನಿಗೆ ಹೆಸರು ಬದಾಲಾಯಿಸಲು ಸೂಚನೆ ನೀಡಿದ್ದರು. ಹಾಗಾಗಿ ಲೆಸ್ಟರು ‘ಜೇರುಸಲೆಂ ಟ್ರಾವೆಲ್ಸ್’ ಎಂದು ಹೆಸರಿಟ್ಟಿದ್ದಾರೆ.

    Continue Reading

    DAKSHINA KANNADA

    ಮಾಜಿ ಶಾಸಕ ಮೋಯಿದ್ದೀನ್ ಬಾವ ಸಹೋದರ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಮಮ್ತಾಜ್ ಅಲಿ ಕಾರು ಪತ್ತೆ

    Published

    on

    ಕೂಳೂರು: ಮಾಜಿ ಶಾಸಕ ಮೋಯಿದ್ದೀನ್ ಬಾವ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6 ರ ರವಿವಾರ ಬೆಳಿಗ್ಗೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.
    ಈ ಹಿನ್ನಲೆಯಲ್ಲಿ, ಅವರು ನದಿಗೆ ಹಾರಿರಬಹುದು ಅಥವಾ ಯಾರಾದರು ಎಸೆದಿರಬಹುದು ಎಂಬ ಶಂಕೆಯಿಂದ ನದಿಯಲ್ಲಿ ಎ.ಸ್.ಡಿ.ಆರ್.ಎಫ್. ಅಗ್ನಿಶಾಮಕ ದಳದ ತಂಡದವರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರು ಪತ್ತೆಯಾದ ಸ್ಥಳಕ್ಕೆ ಮಾಜಿ ಶಾಸಕ ಮೋಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ.


    ಘಟನೆ ಸಂಭವಿಸುವ ಮೊದಲು, ಮಮ್ತಾಜ್ ಅಲಿ ಮಗಳಿಗೆ ವಾಟ್ಸಾಪ್ ಮೂಲಕ ‘ಇನ್ನು ಹಿಂತಿರುಗಿ ಬರುವುದಿಲ್ಲ’ ಎಂಬ ಸಂದೇಶ ರವಾನಿಸಿರುವುದು ಆತಂಕಕ್ಕೆ ಕಾರಣವಾಗಿದೆ.
    ಸ್ಥಳಕ್ಕೆ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಆಗಮಿಸಿ ಪರಿಶೀಲನೆ ನಡೆಸಿದ್ದು, “ಮಮ್ತಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲೂ ಕಾರ್ ಚಲಾಯಿಸಿಕೊಂಡು ಬಂದಿದ್ದರು. 5 ಗಂಟೆ ಸುಮಾರಿಗೆ ಕೂಳೂರು ಸೇತುವೆಯಲ್ಲಿ ಕಾರು ಅಪಘಾತವಾದ ಸ್ಥಿತಿಯಲ್ಲಿ ಕಂಡಿದ್ದು, ಅವರು ನಾಪತ್ತೆಯಾಗಿದ್ದಾರೆ.

    ಅವರ ಮಗಳು ಈ ಕುರಿತು ಪೊಲೀಸರ ಬಳಿ ಮಾಹಿತಿ ನೀಡಿದ್ದಾರೆ” ಎಂದರು.
    ನದಿಗೆ ಹಾರಿರುವ ಬಗ್ಗೆ ಸಂಶಯವಿದ್ದು ಶೋಧಕಾರ್ಯ ನಡೆಸಿದ್ದು, ಎಫ್.ಎಸ್.ಎಲ್ ಅಧಿಕಾರಿಗಳು ಆಗಮಿಸಿ ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿ ದೊರಕಿದ್ದು,ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    Continue Reading

    DAKSHINA KANNADA

    ಅಡವಿಯಲ್ಲಿ ಮಾನವನನ್ನು ಹೋಲುವ ದೈತ್ಯ ಪ್ರಾಣಿ ಪತ್ತೆ..!?

    Published

    on

    ಮಂಗಳೂರು (ನ್ಯೂಯಾರ್ಕ್‌ ಪೋಸ್ಟ್‌ ವರದಿ ) : ಉತ್ತರ ಅಮೆರಿಕಾದ ಜಾನಪದ ಹಿನ್ನಲೆಯುಳ್ಳ ಮನುಷ್ಯನನ್ನು ಹೋಲುವ ದೊಡ್ಡ ಪಾದದ ಜೀವಿಯನ್ನು ಕಾಡಿನಲ್ಲಿ ನೋಡಿರುವುದಾಗಿ ಬಹಳಷ್ಟು ಜನ ಹೇಳಿಕೊಂಡಿದ್ದರು. ಆದ್ರೆ ಇದುವರೆಗೂ ಇದನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ರೆ ಇದೀಗ ವ್ಯಕ್ತಿಯೊಬ್ಬರು ತಾನು ಓಕ್ಲಾಹಾಮಾದ ಲಾಟನ್‌ನಲ್ಲಿರುವ ಪ್ಯಾರಲಲ್ ಅಡವಿಯಲ್ಲಿ ಈ ಪ್ರಾಣಿಯನ್ನು ನೋಡಿದ್ದಾಗಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿರುವ ವ್ಯಕ್ತಿ ಇದು ನನ್ನ ಜೀವನದ ಭಯಾನಕ ಕ್ಷಣ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


    ನ್ಯೂಯಾರ್ಕ್‌ ಪೋಸ್ಟ್‌ ಈ ಕುರಿತಾದ ಒಂದು ವರದಿಯನ್ನು ಪ್ರಕಟಿಸಿದ್ದು, ಅದರಲ್ಲಿ ಈ  ದೊಡ್ಡ ಪಾದದ ಪ್ರಾಣಿ ಕಂಡು ಬಂದ ಬಗ್ಗೆ ಬರೆಯಲಾಗಿದೆ. ಪೋಸ್ಟ್‌ ಮಾಡಿರುವ ವಿಡಿಯೋದಲ್ಲಿ ದೈತ್ಯಾಕಾರದ ಮಾನವನನ್ನು ಹೋಲುವ ಪ್ರಾಣಿಯೊಂದು ಮರದ ಬುಡದಲ್ಲಿ ಕುಳಿತು ಅಲ್ಲಿನ ಹೂವನ್ನು ಕೀಳುತ್ತಿರುವ ದೃಶ್ಯ ಸೆರೆಯಾಗಿದೆ. ಕೇವಲ ಒಂಬತ್ತು ಸೆಕೆಂಡ್ ಮಾತ್ರ ಈ ದೃಶ್ಯ ಕಂಡು ಬಂದಿದೆ. ಇಷ್ಟೇ ಅಲ್ಲದೆ ನ್ಯೂಯಾರ್ಕ್‌ ಪೋಸ್ಟ್ ಈ ಹಿಂದೆ ಇಂತಹ ಪ್ರಾಣಿ ಕಂಡು ಬಂದ ಕ್ಷಣ ಹಾಗೂ ಅದರ 16 ಇಂಚಿನ ಪಾದದ ಹೆಜ್ಜೆ ಗುರುತಿನ ಚಿತ್ರವನ್ನು ಪೋಸ್ಟ್ ಮಾಡಿದೆ.

    ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯನ್ನು ಹುಟ್ಟು ಹಾಕಿದ್ದು, ನಿಜವಾಗಿಯೂ ಇಂತಹ ಒಂದು ಜೀವಿ ಇದೆಯಾ ಎಂಬ ಗೊಂದಲ ಸೃಷ್ಟಿಸಿದೆ. ಅನೇಖರು ಅಮೆರಿಕಾದ ಪೌರಾಣಿಕ ಹಿನ್ನಲೆ ಉಳ್ಳ ಜನಪದಲ್ಲಿ ಸೇರಿಕೊಂಡಿರುವ ಈ ಜೀವಿ ಈಗಲೂ ಇದೆ ಎಂದು ವಾದ ಮಂಡಿಸಿದ್ದಾರೆ. ಇನ್ನೂ ಕೆಲವರು ಇದೊಂದು ಅಸ್ಪಷ್ಟ ವಿಡಿಯೋ ಆಗಿದ್ದು ಇದು ನಂಬಿಕೆಗೆ ಅರ್ಹವಾಗಿಲ್ಲ ಎಂದಿದ್ದಾರೆ. ಹಾಗೇ ಇನ್ನೂ ಕೆಲವರು ನಾವೂ ಇದನ್ನು ನೋಡಿದ್ದು, ದೃಶ್ಯ ಸೆರೆ ಹಿಡಿದಿಲ್ಲ ಎಂದಿದ್ದಾರೆ.


    ಮನುಷ್ಯಂತೆ ದೇಹ ರಚನೆ ಹೊಂದಿರುವ ದೈತ್ಯಾಕಾರದ ಮೈಮೇಲೆ ರೋಮಗಳನ್ನು ಹೊಂದಿರುವ ಜೀವಿ ಇಂದಿಗೂ ಅರಣ್ಯ ಪ್ರದೇಶದಲ್ಲಿ ಇದೆ ಎಂದು ಅಮೆರಿಕಾದ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ. ಈ ಜೀವಿಯ ಬಗ್ಗೆ ಅನೇಕ ಕಥೆಗಳಿದ್ದು, ಇದಕ್ಕೆ ವೈಜ್ಞಾನಿಕ ಪುರಾವೆಗಳೂ ಸಿಕ್ಕಿದೆ ಎಂದು ಹೇಳಾಗಿದೆ. ಆದ್ರೆ ಈಗ ಹರಿದಾಡುತ್ತಿರುವ ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದೆ.

    ವಿಡಿಯೋ ವೀಕ್ಷಿಸಲು ಕ್ಲಿಕ್‌ ಮಾಡಿ :

    Continue Reading

    LATEST NEWS

    Trending