Connect with us

    LATEST NEWS

    ALERT : `ಮೊಬೈಲ್’ ಬಿಸಿಯಾಗಿ `ಸ್ಪೋಟ’ಗೊಳ್ಳುವುದರ ಹಿಂದಿವೆ ಈ ಕಾರಣಗಳು!

    Published

    on

    ಸ್ಮಾರ್ಟ್‌ಫೋನ್ ಬಳಸುವ ಸಂದರ್ಭಗಳಲ್ಲಿ ಕೆಲವೊಮ್ಮೆ ಡಿವೈಸ್‌ ಅತಿಯಾಗಿ ಬಿಸಿಯಾಗಲು ಆರಂಭಿಸುತ್ತದೆ. ಫೋನ್‌ನಲ್ಲಿ ಮಾತನಾಡುವಾಗ ಅಥವಾ ಇಂಟರ್ನೆಟ್‌ ಬಳಸುವ ಸಂದರ್ಭದಲ್ಲಿ ಫೋನ್‌ ಬಿಸಿಯಾಗುತ್ತದೆ. ಕೆಲವೊಮ್ಮೆ ವಿಪರೀತ ಹೀಟ್‌ನಿಂದ ಫೋನ್‌ ಬ್ಲಾಸ್ಟ್‌ ಕೂಡ ಆಗಬಹುದು. ಹಾಗಾಗಿ ಮೊಬೈಲ್‌ ಈ ರೀತಿ ಬಿಸಿಯಾಗಲು ಕಾರಣವೇನು ಎಂಬುದನ್ನು ತಿಳಿದುಕೊಳ್ಳಬೇಕು.

    ನಕಲಿ ಚಾರ್ಜರ್‌ಬಳಕೆ

    ನಕಲಿ ಚಾರ್ಜರ್‌ ಬಳಸಿ ಸ್ಮಾರ್ಟ್‌ಫೋನ್‌ಗಳನ್ನು ಎಂದಿಗೂ ಚಾರ್ಜ್‌ ಮಾಡಬಾರದು. ಯಾವಾಗಲೂ ಒರಿಜಿನಲ್‌ ಚಾರ್ಜರ್‌ಗಳನ್ನೇ ಬಳಸಿ. ನಕಲಿ ಚಾರ್ಜರ್‌ ಬಳಸುವುದರಿಂದಲೂ ಸ್ಮಾರ್ಟ್‌ಫೋನ್ ಹೆಚ್ಚು ಬಿಸಿಯಾಗುತ್ತದೆ.

    ಫೋನ್‌ಗೆ ಬೇಕು ವಿಶ್ರಾಂತಿ

    ನಿರಂತರವಾಗಿ ಫೋನ್ ಬಳಸುವುದರಿಂದ ಅದು ಬಿಸಿಯಾಗಬಹುದು. ಬೇಸಿಗೆಯಲ್ಲಿ ಫೋನ್ ತೀರಾ ಬಿಸಿಯಾದರೆ ಅದು ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ. ಅಗತ್ಯವಿಲ್ಲದೇ ಇದ್ದಾಗ ಫೋನ್‌ ಅನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಬಹುದು.

    ಸೆಟ್ಟಿಂಗ್‌ಗಳಲ್ಲಿ ಮಾಡಿ ಬದಲಾವಣೆ

    ಸ್ಕ್ರೀನ್‌ನ ಬ್ರೈಟ್‌ನೆಸ್‌ ಅನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ. ಇದರಿಂದ ಬ್ಯಾಟರಿ ಬಳಕೆ ಕಡಿಮೆಯಾಗುತ್ತದೆ. ಪರಿಣಾಮ ಫೋನ್‌ ಕೂಡ ಹೆಚ್ಚು ಬಿಸಿಯಾಗುವುದಿಲ್ಲ.

    ಶಾಖದಿಂದ ರಕ್ಷಿಸಿ

    ಶಾಖದಿಂದ ತಪ್ಪಿಸಿಕೊಳ್ಳಲು ನಮಗೆ ನೆರಳು ಬೇಕು. ಅದೇ ರೀತಿ ಫೋನ್‌ ಕೂಡ ಬಯಸುವುದು ಇದನ್ನೇ. ನೇರ ಸೂರ್ಯನ ಬೆಳಕಿನಲ್ಲಿ ಫೋನ್‌ ಇಡಬೇಕು. ಏಕೆಂದರೆ ವಿಪರೀತ ಬಿಸಿಲಿನಲ್ಲಿ ಫೋನ್‌ ಬಿಸಿಯಾಗಬಹುದು. ಮನೆಯಲ್ಲಿ ಫೋನ್‌ ಅನ್ನು ಬಿಸಿಲು ಬೀಳುವ ಕಿಟಕಿ ಬಳಿ, ಕಂಬಳಿ ಅಡಿಯಲ್ಲಿ ಇಡಬೇಡಿ.

    ಮೊಬೈಲ್ ಕವರ್ ಅಪಾಯಕಾರಿ

    ಮೊಬೈಲ್ ಕವರ್ ನಮ್ಮ ಫೋನ್ ಅನ್ನು ಸುರಕ್ಷಿತವಾಗಿರಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಚಳಿಗಾಲದಲ್ಲಿ ಇದನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಆದರೆ ಬೇಸಿಗೆಯಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಬಳಸಿ. ಮನೆಯಲ್ಲಿ ಅಥವಾ ಕಚೇರಿಯಲ್ಲಿ ಫೋನ್ ಬಳಸುತ್ತಿರುವಾಗ ಕವರ್ ತೆಗೆದುಬಿಡಿ. ಏಕೆಂದರೆ ಕವರ್‌ ಇದ್ದರೆ ಫೋನ್‌ ಮತ್ತಷ್ಟು ಬಿಸಿಯಾಗುತ್ತದೆ.

    International news

    ರೋಹಿತ್ ಬಿಟ್ಟು, ಕೊಹ್ಲಿ ಆಟೋಗ್ರಾಫ್ ಪಡೆದಿದ್ದೇಕೆ ಆಸ್ಟ್ರೇಲಿಯಾ ಪ್ರಧಾನಿ ?

    Published

    on

    ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.


    ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.

    ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು ! 

    ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.

    ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.

    Continue Reading

    LATEST NEWS

    ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಜೇನು ದಾಳಿ : 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    Published

    on

    ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

    ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.

    Continue Reading

    LATEST NEWS

    ಗೂಗಲ್ ಮ್ಯಾಪ್ ನಂಬಿ ಅವಾಂತರ ; ಕಾಲುವೆಗೆ ಬಿ*ದ್ದ ಕಾರು !!

    Published

    on

    ಮಂಗಳೂರು/ಬರೇಲಿ: ಜಿಪಿಎಸ್ ಮ್ಯಾಪ್ ಮೂಲಕ ಸಾಗಿದ ಕಾರು ಕಾಲುವೆಗೆ ಬಿ*ದ್ದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಆದರೆ ಟಾಟಾ ಕಾರು ಈ ಪ್ರಯಾಣಿಕರ ಜೀವ ಉಳಿಸಿದ ಘಟನೆ ಬರೇಲಿಯ ಪಿಲಿಭಿತ್ ಹೆದ್ದಾರಿಯಲ್ಲಿ ನಡೆದಿದೆ.

    ಎಲ್ಲೇ ಹೋಗಬೇಕಿದ್ದರೂ ದಾರಿಯಲ್ಲಿ ಸಿಕ್ಕವರನ್ನು ಕೇಳುವ ಪ್ರಶ್ನೆ ಇಲ್ಲ. ಗೂಗಲ್ ಮ್ಯಾಪ್ ಹಾಕಿದರೆ ಸಾಕು. ಹತ್ತಿರದ ಮಾರ್ಗ, ಕ್ರಮಿಸಬೇಕಾದ ದೂರ, ಸಮಯ ಎಲ್ಲವನ್ನು ಹೇಳುತ್ತೆ. ಆದರೆ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದ್ದಂತೆ ಜೀವನ ಸುಲಭವಾಗಬೇಕಿತ್ತು. ಆದರ ಬದಲಾಗಿ ಅ*ಪಾಯವೇ ಹೆಚ್ಚಾಗುತ್ತಿದೆ. ಕಾರಣ ಇದೇ ಜಿಪಿಎಸ್ ಮಾರ್ಗ ನಂಬಿ ತೆರಳುತ್ತಿರುವ ಪ್ರಯಾಣಿಕರು ಅಪಘಾತಕ್ಕೀಡಾಗುತ್ತಿರುವ ಘಟನೆಯೂ ಹೆಚ್ಚಾಗುತ್ತಿದೆ. 10 ದಿನಗಳ ಹಿಂದೆ ಮದುವೆ ಹೊರಟ ಕಾರು ಸೇತುವೆ ಮೇಲಿಂದ ಬಿದ್ದ ಮೂವರು ಪ್ರಾ*ಣಕ್ಕೆ ಕುತ್ತು ತಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರ್ಘಟನೆ ಸಂಭವಿಸಿದೆ.

    ಟಾಟಾ ಟಿಗೋರ್ ಕಾರಿನಲ್ಲಿ ಮೂವರು ಪ್ರಯಾಣ ಆರಂಭಿಸಿದ್ದಾರೆ. ದಾರಿ ಗೊತ್ತಿಲ್ಲದ ಕಾರಣ ಜಿಪಿಎಸ್ ಮ್ಯಾಪ್ ಆನ್ ಮಾಡಿ ವಿಳಾಸ ಹಾಕಿದ್ದಾರೆ. ಬಳಿಕ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಸಾಗಿದ್ದಾರೆ. ಆದರೆ ಬರ್ಕಾಪುರ ಗ್ರಾಮದ ಬಳಿ ಬರುತ್ತಿದ್ದಂತೆ ರಸ್ತೆ ಕಾಮಗಾರಿಗಳು ಎದುರಾಗಿದೆ. ಹೀಗಾಗಿ ರಸ್ತೆ ಸಂಚಾರ ಬದಲಿಸಲಾಗಿತ್ತು. ಆದರೆ ಗೂಗಲ್ ಮ್ಯಾಪ್ ಮಾತ್ರ ನೇರವಾಗಿ ಸಾಗಲು ಸೂಚಿಸಿದ ಕಾರಣ ಅದೇ ದಾರಿಯಲ್ಲಿ ಸಾಗಿದ ಕೆಲವೇ ಕ್ಷಣದಲ್ಲಿ ಕಾಲಾಪುರ ಕಾಲುವೆಗೆ ಕಾರು ಉರುಳಿ ಬಿದ್ದಿದೆ. ವೇಗವಾಗಿ ಸಾಗುತ್ತಿದ್ದ ಕಾರಣ ಅ*ಪಘಾತದ ಪ್ರಮಾಣ ಹೆಚ್ಚಾಗಿದೆ. ಟಾಟಾ ಮೋಟಾರ್ಸ‌ನ ಗರಿಷ್ಠ ಸುರಕ್ಷತೆಯ ಟಾಟಾ ಟಿಗೋರ್ ಸೆಡಾನ್ ಕಾರಾಗಿದ್ದ ಕಾರಣ ಪ್ರಯಾಣಿಕರ ಬದುಕುಳಿದಿದ್ದಾರೆ. ಸಣ್ಣ ಪುಟ್ಟ ಗಾ*ಯಗಳಾಗಿದ್ದರೂ ಮೂವರು ಪ್ರಯಾಣಿಕರ ಜೀ*ವಕ್ಕೆ ಯಾವುದೇ ಅಪಾಯವಾಗಿಲ್ಲ.

     

    ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

     

    ಅ*ಪಘಾತ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಮೂವರುು ಪ್ರಯಾಣಿಕರನ್ನು ಕಾರಿನಿಂದ ಹೊರತೆಗೆದಿದ್ದಾರೆ. ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಗಂ*ಭೀರ ಗಾ*ಯಗಳಿಲ್ಲದ ಕಾರಣ ಮೂವರು ಪ್ರಯಾಣಿಕರು ತಪಾಸಣೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಕಾರನ್ನು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ. ಗೂಗಲ್ ಮ್ಯಾಪ್ ನೀಡಿದ ತಪ್ಪು ಸೂಚನೆಯಿಂದ ಕಾರು ಕಾಲುವೆಗೆ ಮ*ಗುಚಿ ಬಿ*ದ್ದಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.

    Continue Reading

    LATEST NEWS

    Trending