Wednesday, October 20, 2021

ಇಂದಿನಿಂದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ – ಧರ್ಮಸ್ಥಳದಲ್ಲಿ ಎಲ್ಲಾ ಸೇವೆ ಸ್ಥಗಿತ…!

ಮಂಗಳೂರು : ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಮತ್ತೆ ಕೊರೊನಾ 2 ನೇ ಅಲೆಯ ತೀವ್ರತೆ ಹೆಚ್ಚಾಗುತ್ತಿರುವುದರಿಂದ ಇಂದಿನಿಂದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ದೇವಸ್ಥಾನಗಳ ಆಡಳಿತ ಮಂಡಳಿಗಳು ಜಿಲ್ಲಾಡಳಿತದ ಆದೇಶದ ಮೇರೆಗೆ ತುರ್ತಾಗಿ ಈ ನಿರ್ಧಾರ ಕೈಗೊಂಡಿವೆ.

ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 4 ( ನಾಳೆಯಿಂದ)  ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ನೆರೆಯ ಕೇರಳ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಕಾರಣದಿಂದ ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು  ಸರ್ಕಾರದ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...