DAKSHINA KANNADA
‘ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ಶುದ್ಧ ಸುಳ್ಳು’ ಎಂದ ಕಂಬಳ ಓಟಗಾರ ಶ್ರೀನಿವಾಸ್ ಗೌಡ
ಮಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ಶುದ್ಧ ಸುಳ್ಳು. ನಾನು ನಕಲಿ ದಾಖಲೆ ಸೃಷ್ಟಿಸಲು ಸಾಧ್ಯವಿಲ್ಲ. ಎಲ್ಲಾ ಕಂಬಳದಲ್ಲಿ ಲೈವ್ ಮಾಡಲಾಗುತ್ತಿದ್ದು, ಪಾರದರ್ಶಕತೆ ಇರುತ್ತದೆ.
ಅಲ್ಲದೆ ಟೈಮಿಂಗ್ಸ್ ತೋರಿಸುವ ಪರದೆಯೂ ಇರುತ್ತದೆ. ಹೀಗಿರುವಾಗ ನಾನು ದಾಖಲೆಗಳನ್ನು ಹೇಗೆ ನಕಲಿ ಮಾಡಲು ಸಾಧ್ಯ. ಭ್ರಷ್ಟಾಚಾರ ಎಲ್ಲಿ ಮಾಡಿದ್ದೇನೆ ಎಂದು ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಓಟಗಾರ ಶ್ರೀನಿವಾಸ ಗೌಡ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಚ್ಚೂರು ಲೋಕೇಶ್ ಶೆಟ್ಟಿ ಮಾಡಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದ ಸಂಗತಿ.
ಆರೋಪ ಮಾಡಿರುವ ಹಿನ್ನೆಲೆಯಲ್ಲಿ ನಾನು ಅವರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ದೂರು ನೀಡಲಿದ್ದೇನೆ.
ಅಲ್ಲದೆ ಮಾನನಷ್ಟ ಮೊಕದ್ದಮೆಯನ್ನೂ ಹೂಡಲಿದ್ದೇನೆ ಎಂದರು. ಕಂಬಳ ನಡೆದು ಇಷ್ಟು ದಿನಗಳ ಬಳಿಕ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪವನ್ನು ಮಾಡುವ ಅವರು ಇಷ್ಟು ದಿನ ಎಲ್ಲಿಗೆ ಹೋಗಿದ್ದರು ? ಕಂಬಳ ಕ್ರೀಡೆಯಲ್ಲಿ ಹಲವು ಮಂದಿ ಓಟಗಾರರು ಇದ್ದಾರೆ.
ಆದರೆ ಕೇವಲ ನನ್ನ ಒಬ್ಬನನ್ನೇ ಟಾರ್ಗೆಟ್ ಮಾಡಿಕೊಂಡು ಇಂತಹ ನೀಚ ಕೆಲಸಕ್ಕೆ ಇಳಿದಿದ್ದಾರೆ ಎಂದರು. ಲೋಕೇಶ್ ಶೆಟ್ಟಿ ಫಿಲ್ಮ್ ಮಾಡುತ್ತೇನೆ ಅಂದಾಗ ನಾನು ಒಪ್ಪಿರಲಿಲ್ಲ. ಈ ಕೋಪ ಅವರಿಗೆ ಇದೆ. ಕಂಬಳದಲ್ಲಿ ಕೋಣ ಓಡಿಸುವುದು ಮಾತ್ರ ನಮ್ಮ ಕೆಲಸ.
ಕಂಬಳ ಓಟದ ಸಮಯ, ರಿಸಲ್ಟ್ ಹೇಳೋದು ತೀರ್ಪುಗಾರರು. ಹೀಗಿರುವಾಗ ನಾನು ಅದರಲ್ಲಿ ಹೇಗೆ ವಂಚನೆ ಮಾಡಿರಲು ಸಾಧ್ಯ ಎಂದು ಪ್ರಶ್ನಿಸಿದರು.
ಶ್ರೀನಿವಾಸ ಗೌಡ ಅವರು ಅತ್ಯುತ್ತಮ ಕಂಬಳ ಓಟಗಾರನಾಗಿದ್ದು, ನಮ್ಮ ಕೋಣಗಳನ್ನು ಓಡಿಸುವ ಮೂಲಕ ನಮ್ಮೆಲ್ಲರಿಗೂ ಜೊತೆಗೆ ಕಂಬಳಕ್ಕೂ ಮಾನ್ಯತೆ ತಂದು ಕೊಟ್ಟಿದ್ದಾರೆ.
ಕಂಬಳ ಸಮಿತಿ ಅವರ ಮೇಲೆ ಸುಳ್ಳು ಆರೋಪ ಮಾಡಬಾರದು. ಅವರ ವಿರುದ್ಧ ಮಾಡಿರುವ ಆರೋಪದ ಸತ್ಯಾಸತ್ಯತೆ ಚರ್ಚೆಗೆ ಬರಲು ನಾವು ಸದಾ ಸಿದ್ಧ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಂಬಳ ಕೋಣದ ಯಜಮಾರು, ಸಂಘಟಕರು ನುಡಿದರು. 2020ರ ಫೆಬ್ರವರಿ 1ರಂದು ಐಕಳ ಕಂಬಳದಲ್ಲಿ 100 ಮೀಟರ್ ದೂರವನ್ನು 9.55 ಸೆಕೆಂಡ್ ನಲ್ಲಿ ಕ್ರಮಿಸಿದ್ದ ಶ್ರೀನಿವಾಸ ಗೌಡ ದಾಖಲೆ ಮಾಡಿದ್ದರು.
2009ರಲ್ಲಿ ಉಸೇನ್ ಬೋಲ್ಟ್ 100 ಮೀಟರ್ ಓಟವನ್ನು 9.58 ಸೆಕೆಂಡ್ ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು.
ಸುದ್ದಿಗೋಷ್ಠಿಯಲ್ಲಿ ಕಂಬಳ ಸಂಘಟಕರಾದ ಹರ್ಷವರ್ಧನ್ ಪಡಿವಾಳ್, ಶಕ್ತಿ ಪ್ರಸಾದ್ ಶೆಟ್ಟಿ, ಸಚ್ಚಿನ್ ಅಡಪ, ರಶ್ಮಿತ್ ಶೆಟ್ಟಿ ಮೊದಲಾದವರಿದ್ದರು.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM5 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?