Connect with us

DAKSHINA KANNADA

ಬೀದಿ ಬದಿ ವ್ಯಾಪಾರಿಗಳಿಗೆ ಕಿರುಕುಳ ಆರೋಪ -ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Published

on

ಮಂಗಳೂರು: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರ್ಯೋತ್ಸವದ ಸಂದರ್ಭದಲ್ಲಿ ಅನ್ಯಧರ್ಮದ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಣೆ ಮಾಡಿರುವುದು, ದೇವಳದ ಹೊರಭಾಗದಲ್ಲಿ ಅಂಗಡಿಗಳನ್ನು ಹೊಂದಿರುವ ಹಿಂದೂ ವ್ಯಾಪಾರಿಗಳ ಅಂಗಡಿ ಮೇಲೆ ಭಗವಾದ್ವಜ ಹಾಕಿರುವುದು, ಬೀದಿ ಬದಿ ವ್ಯಾಪಾರಿಗಳಿಗೆ ದಿನನಿತ್ಯ ಕಿರುಕುಳ ನೀಡುತ್ತಿರುವ ಪಾಲಿಕೆ ಆಡಳಿತದ ವಿರುದ್ಧ ಇಂದು ಸಮಾನ ಮನಸ್ಕ ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರಿಗೆ ಮನವಿ ಸಲ್ಲಿಸಿ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಹೋರಾಟಗಾರ ಮುನೀರ್ ಕಾಟಿಪಳ್ಳ ಅವರು, ಹಲವು ಸಮಸ್ಯೆಗಳನ್ನು ಬಡ ಅನ್ಯಧರ್ಮದ ವ್ಯಾಪಾರಿಗಳು ಎದುರಿಸುತ್ತಿದ್ದು, ಜೀವನ ನಿರ್ವಹಣೆ , ವ್ಯಾಪಾರ ಮಾಡಲಾಗದ ಸ್ಥಿತಿ ಎದುರಾಗಿದೆ. ಅದಕ್ಕೆ ಪೂರಕವೆಂಬಂತೆ ಜಿಲ್ಲಾಡಳಿತ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಕಮಿಷನರ್ ಅವರು ಕೂಡಾ ತಲೆದೂಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೂ  ಸಂಘಟನೆಗಳ ಜೊತೆಗೆ ಸೇರಿ ಸ್ಥಳೀಯ ಬಿಜೆಪಿ ನಾಯಕರು, ಹಿಂಬಾಲಕರು ಕೂಡಾ ಹಿರಿಯ ಅಧಿಕಾರಿಗಳಿಗೆ ಒತ್ತಡ ಹಾಕಿ ಅವರ ಪರ ಕೆಲಸ ಮಾಡಿಸುವ ಸ್ಥಿತಿ ಎದುರಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರು ಈ ಬಗ್ಗೆ ಜಿಲ್ಲಾಧಿಕಾರಿ , ನಗರ ಪೊಲೀಸ್ ಕಮಿಷನರ್ ಅವರ ಜೊತೆಗೆ ಮಾತುಕತೆ ನಡೆಸಿ ಬಡ ವ್ಯಾಪಾರಿಗಳಿಗೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ನುಡಿದರು.

ಇದೇ ಸಂದರ್ಭ ಉಸ್ತುವಾರಿ ಸಚಿವರು ಸಾರ್ವಜನಿಕರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುನೀರ್ ಕಾಟಿಪಳ್ಳ ಅವರು, ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂಧರ್ಭದಲ್ಲಿ ಬಿಜೆಪಿ ಪರಿವಾರದ ಕುತಂತ್ರವನ್ನು ನಾವು ಸೋಲಿಸಿದ್ದೇವೆ. ಶರಣ್‌ ಪಂಪ್ವೆಲ್‌ ತಮ್ಮ ಹಿಂಬಾಲಕರ ಮೂಲಕ ಕೇವಲ ಹಿಂದುಗಳಿಗೆ ಮಾತ್ರ ಅಲ್ಲಿ ಅವಕಾಶ ನೀಡುತ್ತಿರುವುದು ಸರಿಯಲ್ಲ. ಅವರನ್ನು ಬಂಧಿಸಿ ಅವರ ಪುಂಡಾಟಗಳಿಗೆ ಕಡಿವಾಣ ಹಾಕುವಂತೆ ನಾವು ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ್ದೇವೆ ಎಂದರು. ಧರ್ಮದ ಆಧಾರದಲ್ಲಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುವ ಕೆಲಸವನ್ನು ಅವರು ನಿಲ್ಲಿಸಬೇಕು ಎಂದು ನುಡಿದರು.

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending