Saturday, November 27, 2021

ನಕ್ಸಲರೊಂದಿಗೆ ಸಂಬಂಧ ಆರೋಪ: ವಿಠ್ಠಲ ಮಲೆಕುಡಿಯ ಸೇರಿ ಇಬ್ಬರು ನಿರ್ದೋಷಿ-ತೀರ್ಪು

ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಇದೆ ಎಂಬ ಆರೋಪದಲ್ಲಿ ಬಂಧಿತನಾದ ವಿಠ್ಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ವಿಠ್ಠಲ ಮಲೆಕುಡಿಯ ಹಾಗೂ ಆತನ ತಂದೆಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.


ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠ್ಠಲ ಮಲೆಕುಡಿಯ, ಅವರ ತಂದೆ ಲಿಂಗಣ್ಣ ಮಲೆಕುಡಿಯ ನಿರ್ದೋಷಿಗಳು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ತೀರ್ಪು ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿಯಾಗಿದ್ದ ವಿಠ್ಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳವು ಬಂಧಿಸಿತ್ತು.

ನಂತರ ನ್ಯಾಯಾಲಯಕ್ಕೆ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ವಿಠಲ ಮಲೆಕುಡಿಯ ಅವರನ್ನು 6ನೇ ಆರೋಪಿಯನ್ನಾಗಿ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು 7ನೇ ಆರೋಪಿಯನ್ನಾಗಿಸಲಾಗಿತ್ತು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲ ನಿವಾಸಿಗಳನ್ನ ಒಕ್ಕಲೆಬ್ಬಿಸುವುದರ ವಿರುದ್ಧ ಹೋರಾಟ ನಡೆಸುತ್ತಿದ್ದ ವಿಠಲ್ ಮಲೆಕುಡಿಯ ಅವರಿಗೆ ನಕ್ಸಲ್ ನಂಟಿದೆ ಎಂದು ಬಂಧಿಸಿದ್ದ ನಕ್ಸಲ್ ನಿಗ್ರಹ ಪಡೆ ವೇಣೂರು ಪೊಲೀಸರಿಗೆ ಒಪ್ಪಿಸಿತ್ತು.

ಬಂಧನ ಸಮಯದಲ್ಲಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು. ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಜೈಲು ಸಿಬ್ಬಂದಿಗೆ ಪುತ್ತೂರು ತ್ವರಿತ ನ್ಯಾಯಾಲಯ ನಿರ್ದೇಶನ ನೀಡಿತ್ತು. ಜೈಲಿನಲ್ಲಿದ್ದ ಸಮಯದಲ್ಲಿ ಪರೀಕ್ಷೆಗೆ ಹಾಜರುಪಡಿಸಿದ್ದ ಪೊಲೀಸರು, ಕೈಕೊಳ ತೊಟ್ಟು ಪರೀಕ್ಷೆ ಬರೆದಿದ್ದರು. ವಕೀಲ ದಿನೇಶ್ ಹೆಗ್ಡೆ ನ್ಯಾಯಾಲಯದಲ್ಲಿ ಉಚಿತವಾಗಿ ವಾದ ಮಂಡಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...