Connect with us

DAKSHINA KANNADA

ಲೈಂಗಿಕವಾಗಿ ಬಳಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಆರೋಪ ; ಕಡಬ ಠಾಣಾ ಕಾನ್ಸ್‌ಟೇಬಲ್‌ ಶಿವರಾಜ ಬಂಧನ..!

Published

on

ಕಡಬ : ಲೈಂಗಿಕ ದೌರ್ಜನ್ಯ ನಡೆಸಿ ಯುವತಿಯನ್ನು ಗರ್ಭಿಣಿಯಾಗಿಸಿ ಬಳಿಕ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆ ಕಾನ್ಸ್‌ಟೇಬಲ್‌ ಶಿವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವತಿ ಮನೆಗೆ ಸಮನ್ಸ್, ತನಿಖೆಯ ನೆಪವೊಡ್ಡಿ ಭೇಟಿ ನೀಡುತ್ತಿದ್ದ ಬಂಧಿತ ಆರೋಪಿ ಶಿವರಾಜ್ ಅಪ್ರಾಪ್ತೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಆಕೆಯೊಂದಿಗೆ ಸಲುಗೆಯಿಂದ ಇದ್ದು ಬಳಿಕ ಲೈಂಗಿಕವಾಗಿ ಬಳಸಿ ನಂತರ ಯುವತಿ ಗರ್ಭವತಿಯಾಗುವಂತೆ ಮಾಡಿದ್ದನು.

ಕಾನ್ಸ್‌ಟೇಬಲ್‌, ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿ ಗೃಹಬಂಧನದಲ್ಲಿ ಇರಿಸಿದ್ದಾನೆಂದು ಯುವತಿ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಪುತ್ತೂರು ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಅವರು ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಶಿವರಾಜನನ್ನು ಬಂಧಿಸುವಂತೆ ಸೂಚನೆ ನೀಡಿದ್ದರು .

ಇದೀಗ ಪೊಲೀಸ್ ಸಿಬ್ಬಂದಿ ಶಿವರಾಜ್ ನನ್ನು ವಶಕ್ಕೆ ಪಡೆದಿರುವ ಕಡಬ ಪೊಲೀಸರು, ಆತನ ವಿರುದ್ಧ ಐಪಿಸಿ 506, ಪೋಕ್ಸೋ ಆ್ಯಕ್ಟ್ 2012 ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending