LATEST NEWS
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ಬರೆಯಲು ಅವಕಾಶ : ಸಚಿವ ವಿ.ಸೋಮಣ್ಣ
ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಎನ್‌ಎಚ್‌ಎಐ ಮತ್ತು ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ರಾಜ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ(ಆ.4) ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ‘ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ’ (ಜಿಡಿಸಿಇ) ಬರೆಯಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಕನ್ನಡದಲ್ಲಿಯೂ ಅವಕಾಶ ಇರಬೇಕು ಎಂದು ಒತ್ತಾಯ ಮಾಡಲಾಗಿತ್ತು. ಹೀಗಾಗಿ ಪರೀಕ್ಷೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದರು.
ಇದನ್ನೂ ಓದಿ : ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ, ವಿಕೃ*ತಿ ಮೆರೆದ ಪತಿ
ಅಂತೆಯೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ. ಲೋಕೊ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ತಂದಿದ್ದರು. ಕನ್ನಡದಲ್ಲಿಯೂ ಸುತ್ತೋಲೆ ಹೊರಡಿಸಲು ತಿಳಿಸಿದ್ದೇನೆ. ಸೀಮಿತ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆ (ಎಲ್‌ಡಿಸಿಇ) ಸೇರಿದಂತೆ ರೈಲ್ವೆಯ ಎಲ್ಲಾ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ನುಡಿದರು.
kerala
ವಿದ್ಯಾರ್ಥಿ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ; ಶಿಕ್ಷಕ ಅರೆಸ್ಟ್
ಮಂಗಳೂರು/ಕೇರಳ : ಶಿಕ್ಷಕನೊಬ್ಬ ವಿದ್ಯಾರ್ಥಿಯ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ಎಳೆದ ಅಪರೂಪದ ದುರ್ಘಟನೆ ಉತ್ತರ ಕೇರಳದಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಮದರಸಾ ಮೂಲದ ಶಿಕ್ಷಕನು ಬಾಲಕನ ಖಾ*ಸಗಿ ಭಾ*ಗಕ್ಕೆ ಮೆಣಸಿನ ಪುಡಿ ಹಚ್ಚಿ ಬಳಿಕ . ಐರನ್ ಬಾಕ್ಸ್ ನಿಂದ ಬರೆ ಎಳೆದಿದ್ದಾನೆ ಎಂದಿದ್ದಾರೆ. ಆರೋಪಿ ಮಲಪ್ಪುರಂ ಜಿಲ್ಲೆಯ ತಾನೂರ್ ಮೂಲದ ಉಮೈರ್ ಅಶ್ರಫಿ ಎಂದು ಗುರುತಿಸಲಾಗಿದೆ.
ಈ ಘಟನೆಯ ಕುರಿತು ವಿದ್ಯಾರ್ಥಿಯು ಪೊಲೀಸರಿಗೆ ದೂರು ನೀಡಿದ್ದು, ತನಿಖೆಯ ವೇಳೆ ಅಶ್ರಫಿ ಕೇರಳ ರಾಜ್ಯದಿಂದ ಪರಾರಿಯಾಗಿರುವುದು ತಿಳಿಯಿತು. ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಅಡಗಿಕೊಂಡಿದ್ದ ಆತನಿಗಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ತಮಿಳುನಾಡಿನ ಕೊಯಮತ್ತೂರಿನಿಂದ ಅಶ್ರಫಿ ತನ್ನ ತವರು ಜಿಲ್ಲೆಗೆ ಮರಳಲಿದ್ದಾನೆ ಎಂಬ ಸುಳಿವಿನ ಮೇರೆಗೆ ಪೊಲೀಸ್ ತಂಡ ಗುರುವಾರ (ನ.7) ತಾನೂರಿನಲ್ಲಿ ಬೀಡುಬಿಟ್ಟಿದ್ದು, ಶೋಧ ಕಾರ್ಯ ನಡೆಸಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಅಶ್ರಫಿಯನ್ನು ಕೊನೆಗೂ ಬಂಧಿಸಲಾಯಿತು.
ಇದನ್ನೂ ಓದಿ : ಪುಟ್ಟ ಮಗುವಿನ ಕೈ ಮುರಿದ ಕ್ರೂ*ರಿ ಟೀಚರ್ !!
ಶಿಕ್ಷಕನ ಬಂಧನದ ಬಳಿಕ, ಕನ್ನವಂ ಪೊಲೀಸರು ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. ಯಾಕಾಗಿ ಹಾಗೆ ಮಾಡಿದ? ಅವನ ಉದ್ದೇಶವೇನು? ಎಂಬುವುದು ತನಿಖೆಯ ಬಳಿಕ ತಿಳಿದು ಬರಬೇಕಷ್ಟೇ. ಆತನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಶುಕ್ರವಾರ (ನ.8) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
LATEST NEWS
ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ, ಭರವಸೆಗಳೇನು ಗೊತ್ತಾ?
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ನಿರ್ಣಯ ಪತ್ರವನ್ನು ಬಿಡುಗಡೆ ಮಾಡಿದ ಅಮಿತ್ ಶಾ, ಇದು ಮಹಾರಾಷ್ಟ್ರದ ಆಶಯಗಳ ನಿರ್ಣಯ ಪತ್ರ ಎಂದು ಹೇಳಿದರು.
ಇದರಲ್ಲಿ ರೈತರ ಬಗ್ಗೆ ಗೌರವ ಮತ್ತು ಬಡವರ ಕಲ್ಯಾಣವಿದೆ. ಇದರೊಳಗೆ ಹೆಣ್ಣಿನ ಸ್ವಾಭಿಮಾನ ಅಡಗಿದೆ. ಇದು ಮಹಾರಾಷ್ಟ್ರದ ಭರವಸೆಯ ಪ್ರಣಾಳಿಕೆಯಾಗಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬವಾಂಕುಲೆ, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಮಾತನಾಡಿದ ಫಡ್ನವೀಸ್, ಇದು ಮಹಾರಾಷ್ಟ್ರದ ಸಂಪೂರ್ಣ ಅಭಿವೃದ್ಧಿಗೆ ಸಂಕಲ್ಪವಾಗಿದೆ. ನಿರ್ಣಯ ಪತ್ರವು ಅಭಿವೃದ್ಧಿ ಹೊಂದಿದ ಮಹಾರಾಷ್ಟ್ರದ ಮಾರ್ಗಸೂಚಿಯಾಗಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದ 25 ಲಕ್ಷ ಯುವಕರಿಗೆ ಉದ್ಯೋಗ ಒದಗಿಸಲಿದೆ.
10 ಖಾತರಿಗಳು ರೈತರ ಸಾಲ ಮನ್ನಾ 25 ಲಕ್ಷ ಉದ್ಯೋಗಗಳು ವಿದ್ಯಾರ್ಥಿಗಳಿಗೆ ಮಾಸಿಕ 10000 ರೂ ಲಾಡ್ಲಿ ಯೋಜನೆಯಲ್ಲಿ 2100 ರೂ 30 ರಷ್ಟು ವಿದ್ಯುತ್ ಬಿಲ್‌ಗಳಲ್ಲಿ ರಿಯಾಯಿತಿ ವೃದ್ಧಾಪ್ಯ ವೇತನ 2100 ರೂ. 25000 ಮಹಿಳಾ ಪೊಲೀಸರ ನೇಮಕಾತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15000 ರೂ. 45 ಸಾವಿರ ಹಳ್ಳಿಗಳಲ್ಲಿ ರಸ್ತೆ ಜಾಲ ಶೆಟ್ಕರಿ ಸಮ್ಮಾನ್ ತಿಂಗಳಿಗೆ 15000 ರೂ.
ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಉತ್ಸುಕವಾಗಿದೆ.
LATEST NEWS
ಇಂಜಿನ್ – ಕೋಚ್ ನಡುವೆ ಅಪ್ಪಚ್ಚಿಯಾದ ರೈಲ್ವೆ ಉದ್ಯೋಗಿ
ಮಂಗಳೂರು/ಬಿಹಾರ : ಇಂಜಿನ್ – ಕೋಚ್ ನಡುವೆ ಸಿಲುಕಿ ರೈಲ್ವೆ ಪೋರ್ಟರ್ ಮೃ*ತಪಟ್ಟಿರುವ ಘಟನೆ ಬಿಹಾರದ ಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ನಡೆದಿದೆ. ಅಮರ್ ಕುಮಾರ್ ರಾವ್(25) ಮೃ*ತ ದುರ್ದೈ*ವಿ. ಇವರು ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಲಕ್ನೋ-ಬರೌನಿ ಎಕ್ಸ್‌ಪ್ರೆಸ್ (ಸಂಖ್ಯೆ: 15204) ಲಕ್ನೋ ಜಂಕ್ಷನ್‌ನಿಂದ ಆಗಮಿಸುತ್ತಿದ್ದಂತೆ ಬರೌನಿ ಜಂಕ್ಷನ್‌ನ 5 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾವ್ ಮೃ*ತಪಟ್ಟಿದ್ದಾರೆ. ರೈಲಿನ ಬೋಗಿ ಜೋಡಿಸುವಾಗ ರೈಲಿನ ಇಂಜಿನ್ ಅನಿರೀಕ್ಷಿತವಾಗಿ ಹಿಮ್ಮುಖವಾಗಿ ಚಲಿಸಿದ್ದು, ಬೋಗಿಗಳ ನಡುವೆ ಅವರು ಸಿ*ಲುಕಿದ್ದಾರೆ. ಪರಿಣಾಮ ಅವರ ದೇ*ಹ ಅಪ್ಪ*ಚ್ಚಿಯಾಗಿದೆ.
ಇದನ್ನೂ ಓದಿ : ನನ್ನ ಸಾ*ವಿಗೆ ರಶ್ಮಿ ಟೀಚರ್ ಕಾರಣ…ಡೆ*ತ್ ನೋಟ್ ಬರೆದಿಟ್ಟು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿ!
ಈ ಭ*ಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಬೊಬ್ಬೆ ಹಾಕಿದ್ದಾರೆ. ರೈಲು ಚಾಲಕ ರೈಲಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
- LATEST NEWS3 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್
- FILM4 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS5 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS6 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್