Tuesday, August 16, 2022

ರಾಕಿಭಾಯ್‌ಗೆ ವಿಶ್‌ ಮಾಡಿದ ಪುಷ್ಪ…… ಪುಷ್ಪರಾಜ್‌

ಬೆಂಗಳೂರು: ‘ಕೆಜಿಎಫ್- 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಈ ಮಧ್ಯೆ ‘ಭಾರತದ ಚಿತ್ರರಂಗದ ಧ್ವಜವನ್ನು ಇನ್ನೂ ಎತ್ತರದಲ್ಲಿ ಹಾರಿಸಿದ್ದಕ್ಕಾಗಿ’ ಎಲ್ಲರಿಗೂ ಧನ್ಯವಾದಗಳು ಎಂದು ಯಶ್‌ಗೆ ನಟ ಅಲ್ಲು ಅರ್ಜುನ್ ವಿಶ್‌ ಮಾಡಿದ್ದಾರೆ.


ಭಾರತದ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಕಲೆಕ್ಷನ್ ಮಾಡುತ್ತ, ಹೊಸ ಹೊಸ ದಾಖಲೆಗಳನ್ನು ಬರೆಯುತ್ತ ಮುನ್ನುಗ್ಗುತ್ತಿದೆ.

ಅದರಲ್ಲೂ ಹಿಂದಿ ಚಿತ್ರರಂಗದಲ್ಲಿ ಹಿಂದಿಯೇತರ ಸಿನಿಮಾ ಮೊದಲ ದಿನ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆ ‘ಕೆಜಿಎಫ್ 2’ ಚಿತ್ರದ್ದು ಹೀಗೆ ಒಂದಾದ ಮೇಲೊಂದು ದಾಖಲೆ ಬರೆಯುತ್ತಿರುವ ಈ ಸಿನಿಮಾವನ್ನು ಸಿನಿಮಾ ತಾರೆಯರು ಕೂಡ ಕೊಂಡಾಡುತ್ತಿದ್ದಾರೆ.

ಇದೀಗ ತೆಲುಗು ನಟ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಕೂಡ ಮೆಚ್ಚಿಕೊಂಡಿದ್ದಾರೆ. ಉತ್ತಮ ಸಿನಿಮಾಗಳನ್ನು ಅಲ್ಲು ಅರ್ಜುನ್ ಮೊದಲಿನಿಂದಲೂ ಹೊಗಳುತ್ತಾರೆ. ಈ ಬಾರಿ ಕೆಜಿಎಫ್ 2 ಬಗ್ಗೆಯೂ ಅವರು ಒಳ್ಳೆಯ ಮಾತುಗಳನ್ನಾಡಿದ್ದಾರೆ.


ಕೆಜಿಎಫ್: ಚಾಪ್ಟರ್ 2′ ಸಿನಿಮಾ ನೋಡಿ ಟ್ವೀಟ್ ಮಾಡಿರುವ ಅಲ್ಲು ಅರ್ಜುನ್, ‘ಕೆಜಿಎಫ್: ಚಾಪ್ಟರ್ 2 ಚಿತ್ರತಂಡಕ್ಕೆ ದೊಡ್ಡ ಶುಭಾಶಯಗಳು. ಯಶ್ ಅವರ ತೀವ್ರತೆಯುಳ್ಳ ನಟನೆ ಅದ್ಭುತವಾಗಿದೆ. ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಅತ್ಯುತ್ತಮವಾಗಿದೆ.

ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ ಮತ್ತು ಭುವನ್ ಗೌಡ ಅವರ ಛಾಯಾಗ್ರಹಣ ಅದ್ಭುತವಾಗಿದೆ. ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವಪೂರ್ವಕ ನಮನಗಳು. ಪ್ರಶಾಂತ್ ನೀಲ್ ಕಡೆಯಿಂದ ಒಂದು ಅದ್ಭುತ ಪ್ರದರ್ಶನ ಮೂಡಿಬಂದಿದೆ. ಅವರ ಆಲೋಚನೆಗೆ ನನ್ನ ಗೌರವಪೂರ್ವಕ ನಮನಗಳು.

ಒಂದು ಅದ್ಭುತ ಸಿನಿಮಾ ಅನುಭವ ನೀಡಿದ್ದಕ್ಕಾಗಿ ಮತ್ತು ಭಾರತದ ಚಿತ್ರರಂಗದ ಧ್ವಜವನ್ನು ಇನ್ನೂ ಎತ್ತರದಲ್ಲಿ ಹಾರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ.
ಅಲ್ಲು ಅರ್ಜುನ್ ನಿರ್ದೇಶಕ ಪ್ರಶಾಂತ್ ನೀಲ್‌ ಪ್ರತಿಕ್ರಿಯೆ ನೀಡಿದ್ದಾರೆ ‘ಧನ್ಯವಾದಗಳು ಅಲ್ಲು ಅರ್ಜುನ್ ಅವರೇ. ಇದು ನಮಗೆ ಬಹಳ ದೊಡ್ಡದು. ನಿಮ್ಮ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು..’ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ನಂಬರ್ 1: ಧ್ವಜಾರೋಹಣ ಭಾಷಣದಲ್ಲಿ ಸಿಎಂ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ.‘ನಾಡಿನ ಸಮಸ್ತ ಜನತೆಗೆ 76ನೇ...

ಬಿ.ಸಿ ರೋಡಿನ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ ರೋಡಿನ ವಿಜಯಲಕ್ಮೀ ಗ್ರೂಪ್ ವತಿಯಿಂದ ಬಾನೆತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು.20×30 ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ...

ಉಡುಪಿ ಜಿಲ್ಲಾಡಳಿತದಿಂದ ‘ಆಜಾದಿ ಕಾ ಅಮೃತ್‌ ಮಹೋತ್ಸವ’

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್‌ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ...