Wednesday, October 20, 2021

ಕ್ಯಾಪಿಟಲ್‌ ಹೊಟೇಲ್‌ನಲ್ಲಿ ಮರುಕಳಿಸಲಿದೆ ಇತಿಹಾಸ: ಹೊಸ ಸಿಎಂ ಹೆಸರು ಬಹುತೇಕ ಫೈನಲ್‌

ಬೆಂಗಳೂರು: ಬಿಎಸ್‌ವೈ ರಾಜೀನಾಮೆ ನಂತರ ಹೊಸ ಸಿಎಂ ಯಾರು ಎಂಬ ಕುತೂಹಲ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇದರಲ್ಲಿ ಇತಿಹಾಸವೊಂದು ಮರುಕಳುಸುತ್ತಿದೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ಯಡಿಯೂರಪ್ಪನವರು ಸದಾನಂದ ಗೌಡರನ್ನು ಶಾಸಕರ ಚುನಾವಣೆ ಮೂಲಕ ಇದೇ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ಹೊಸ ಸಿಎಂ ಆಗಿ ಘೋಷಿಸಿದರು. ತದನಂತರ ಗೌಡರ ಬಗ್ಗೆ ಅಸಮಾಧಾನ ಹೊಂದಿ ಜಗದೀಶ್‌ ಶೆಟ್ಟರ್‌ ಅನ್ನು ಹೊಸ ಸಿಎಂ ಆಗಿ ನೇಮಕಗೊಳಿಸಿದ್ದರು.


ಇಂದು ಸಹ ಸಂಜೆ 7.30ಕ್ಕೆ ಇದೇ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗದ ಸಭೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಧ್ಯರಾತ್ರಿಯವರೆಗೂ ಈ ಸಭೆ ಮುಂದುವರೆಯಲಿದ್ದು, ಈ ವೇಳೆ ಬೆಂಗಳೂರಿಗೆ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್‌, ಅರುಣ್‌ ಸಿಂಗ್‌ ಸೇರಿ ಮೂವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಸಭೆಯಲ್ಲಿ ಬಹುತೇಕ ಸಿಎಂ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಸದ್ಯ ದೆಹಲಿ ಮಟ್ಟದಲ್ಲಿ ಹೊಸ ಸಿಎಂ ಹೆಸರು ಬಹುತೇಕ ಫೈನಲ್‌ ಆಗಿದೆ ಎಂಬ ಮಾಹಿತಿ ಇದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...