Connect with us

    BELTHANGADY

    ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ ನಲ್ಲಿ ಆಳ್ವಾಸ್ ಸಾಧನೆ-ಆಳ್ವಾಸ್ ಭವಾನಿಗೆ ಕಂಚಿನ ಪದಕ

    Published

    on

    ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ ಲಾಂಗ್‌ಜಪ್‌ನಲ್ಲಿ ಆಳ್ವಾಸ್ ಕಾಲೇಜಿನ ಭವಾನಿ ಯಾದವ್  ಕಂಚಿನ ಪದಕ ಪಡೆದಿದ್ದಾರೆ.

    ಮೂಡುಬಿದಿರೆ:  ಚೀನಾದ ಚಾಂಗುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ – 20 ಲಾಂಗ್‌ಜಂಪ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ದಾಖಲೆ ಬರೆದಿದ್ದಾರೆ.

    ಭವಾನಿ ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಿತ ಕ್ರೀಡಾ ದತ್ತು ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರು ವಿಶ್ವವಿದ್ಯಾಲಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.

    ಜಾಗತಿಕ ವಿಶ್ವ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಕ್ರೀಡಾಪಟು ಪದಕ ಪಡೆದಿದ್ದಾರೆ.

    ಆ ಮೂಲಕ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಅಥ್ಲೀಟ್‌ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

    ಕಳೆದ ಜು.ನಲ್ಲಿ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಲಾಂಗ್‌ಜಂಪ್‌ನಲ್ಲಿ 6.44 ಮೀಟರ್ ಸಾಧನೆಯೊಂದಿಗೆ ಕಂಚಿನ ಪದ ತಮ್ಮದಾಗಿಸಿಕೊಂಡಿದ್ದರು.

    ಚೀನಾದ ಚಾಂಗುನಲ್ಲಿ ಜು. 28ರಿಂದ ಆ. 8ರ ವರೆಗೆ ನಡೆದ ಶ್ವವಿದ್ಯಾಲಯಗಳ ಕ್ರೀಡಾಕೂಟ- 2021ರಲ್ಲಿ (ವರ್ಲ್ಡ್ ಯುನಿವರ್ಸಿ 221) ದೇಶದ 85 ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಆಳ್ವಾಸ್ ದತ್ತು ಯೋಜನೆಯ 8 ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

    ಪದಕ ಪಡೆದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿನಂದಿಸಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending