LATEST NEWS
ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್
Published
2 months agoon
By
NEWS DESK2ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಡಿಸೆಂಬರ್ 10 ರಿಂದ 15 ರವರೆಗೆ ನಡೆಯಲಿದೆ.
ವಿರಾಸತ್ 30 ವರ್ಷಗಳನ್ನು ಪೂರೈಸುತ್ತಿದ್ದು ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ಆಳ್ವಾಸ್ ವಿರಾಸತ್-2024ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಆಳ್ವಾಸ್ ವಿರಾಸತ್-2024 ಡಿಸೆಂಬರ್ 10ರ ಮಂಗಳವಾರದಿಂದ ಪ್ರಾರಂಭವಾಗಿ ಡಿಸೆಂಬರ್ 15ರ ಭಾನುವಾರ ಮುಕ್ತಾಯಗೊಳ್ಳಲಿದೆ. ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು. ವೈಭವೋಪೇತವಾಗಿ ಜರುಗಲಿದೆ. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ ಭಾನುವಾರವನ್ನು ಕೇವಲ ವಸ್ತುಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.
ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು ಸಂಸ್ಥೆಯು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2014ಕ್ಕೆ ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮೋಹನ್ ಆಳ್ವ ವಿನಂತಿಸಿದ್ದಾರೆ.
DAKSHINA KANNADA
ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ
Published
11 minutes agoon
12/12/2024ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.
2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :
ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.
Ancient Mangaluru
ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !
Published
26 minutes agoon
12/12/2024By
NEWS DESK3ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.
DAKSHINA KANNADA
ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ
Published
29 minutes agoon
12/12/2024ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.
ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್ ಡಿ’ ಸೋಜಾ ತಿಳಿಸಿದರು.
ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್.ಆರ್.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!
ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ.
LATEST NEWS
ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
ಆರ್ಬಿಐ ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ !!
ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ವಿಚ್ಛೇದನ ನೀಡದೆ ಎರಡನೇ ಮದುವೆ; ಮಂಟಪದಲ್ಲೇ ಮೊದಲ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ
Trending
- BIG BOSS4 days ago
ಚೈತ್ರಾ ಕಣ್ಣೀರು, ಐಶ್ವರ್ಯ ಆಕ್ಟಿವಿಟಿ ರೂಮ್….ಎಲಿಮಿನೆಟ್ ಆಗಿದ್ದು ?
- BIG BOSS5 days ago
BBK11: ಈ ವಾರ ಬಿಗ್ಬಾಸ್ ಮನೆಯಲ್ಲಿ ಕಾದಿದ್ಯಾ ಬಿಗ್ ಟ್ವಿಸ್ಟ್; ಎಲಿಮಿನೇಷನ್ ಇರೋದು ಡೌಟ್
- BIG BOSS5 days ago
ಬಿಗ್ಬಾಸ್ ನಿರ್ಧಾರಗಳಿಗೆ ರೆಸ್ಪೆಕ್ಟೇ ಇಲ್ಲ -ಇಬ್ಬರು ಸ್ಪರ್ಧಿಗಳಿಗೆ ಕಿಚ್ಚ ಖಡಕ್ ಕ್ಲಾಸ್
- BANTWAL6 days ago
ಬಂಟ್ವಾಳ: ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ