Connect with us

    LATEST NEWS

    ನಕ್ಸಲ್ ವಿಕ್ರಂಗೌಡ ಶ*ವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ!

    Published

    on

    ಉಡುಪಿ : ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬ*ಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶ*ವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ.

    ಹೌದು ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಗ್ರಾಮಕ್ಕೆ ವಿಕ್ರಂ ಗೌಡನ ಶ*ವ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಶ*ವ ಸಾಗಣೆ ವೇಳೆ ಆಂಬುಲೆನ್ಸ್ ಪಲ್ಟಿಯಾಗಿದೆ.

    ಮೋಸ್ಟ ವಾಂಟೆಡ್ ವಿಕ್ರಂ ಗೌಡ ಅಂಡ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕುಟುಂಬಸ್ಥರಿಗೆ ವಿಕ್ರಂ ಗೌಡನ ಮೃ*ತ ದೇಹವನ್ನು ತೆಗೆದುಕೊಂಡು ಹೆಬ್ರಿಕೋಡ್ಲು ಗ್ರಾಮಕ್ಕೆ ಕುಟುಂಬಸ್ಥರು ತೆರಳಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಕ್ರಂ ಗೌಡನ ಅಂ*ತ್ಯಸಂ*ಸ್ಕಾರ ನೆರವಿರುವ ಸಾಧ್ಯತೆ ಇದೆ. ವಿಕ್ರಂ ಗೌಡನ ನಿವಾಸದ ಆವರಣದಲ್ಲಿಯೇ ಆತನ ಅಂತ್ಯ ಸಂ*ಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸಂಸದ ಕ್ಯಾ. ಚೌಟ ಅವರ “ಬ್ಯಾಕ್ ಟು ಊರು” ಪರಿಕಲ್ಪನೆಗೆ ಮತ್ತೊಂದು ಯಶಸ್ಸು

    Published

    on

    ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ ” ಬ್ಯಾಕ್ ಟು ಊರು” ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸುವ ಜತೆಗೆ ತನ್ನ ಜಾಗತಿಕ ಕಚೇರಿಯನ್ನೂ ಮಂಗಳೂರಿಗೆ ಸ್ಥಳಾಂತರಿಸುವುದಕ್ಕೆ ಆಸಕ್ತಿ ತೋರಿದೆ.

    ಈ ಹಿನ್ನಲೆಯಲ್ಲಿ ಇಂದು ಈಟ್ಯಾಗ್ ಗ್ರೂಪ್ ಹಾಗೂ ಮಂಗಳೂರು ಎಸ್ ಇ ಝೆಡ್ ಜತೆ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಒಪ್ಪಂದ ಪತ್ರ(ಇಒಐ)ಕ್ಕೆ ಸಹಿ ಹಾಕಲಾಯಿತು.

    ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈಟ್ಯಾಗ್ ಕಂಪೆನಿಯ ನಿರ್ದೇಶಕ ಪ್ರಕಾಶ್ ಪಿರೇರಾ ಹಾಗೂ ಎಸ್ಇಝೆಡ್’ನ ಸಿಇಒ ಸೂರ್ಯನಾರಾಯಣ ಅವರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಬಂಡವಾಳ ಹೂಡಿಕೆಗೆ ಪೂರಕವಾದ ಒಡಂಬಡಿಕೆ(ಎಂಒಯು)ಗೆ ಪರಸ್ಪರ ಸಹಿ ಹಾಕಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ದೇಶ-ವಿದೇಶದಲ್ಲಿರುವ ಮಂಗಳೂರು ಮೂಲದ ಉದ್ಯಮಿಗಳನ್ನು ನಮ್ಮೂರಿಗೆ ಕರೆತರುವ ಭಾಗವಾಗಿ “ಬ್ಯಾಕ್ ಟು ಊರು” ಪರಿಕಲ್ಪನೆ ಆರಂಭಿಸಿದ್ದು, ಇದಕ್ಕೆ ಇಷ್ಟು ಬೇಗ ದೊಡ್ಡ ಮಟ್ಟದ ಯಶಸ್ವಿ ಸಿಗುತ್ತದೆಂದು ಭಾವಿಸಿರಲಿಲ್ಲ. ‘ಬ್ಯಾಕ್ ಟು ಊರು’ ಕಲ್ಪನೆಯಡಿ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡಿಕೆ ಮುಂದಾಗಿರುವ ಎರಡನೇ ಕಂಪನಿ ಇದಾಗಿದೆ. ಈಟ್ಯಾಗ್ ಕಂಪೆನಿಯು ಸುಸ್ಥಿರ ಇಂಧನ ಹಾಗೂ ಇವಿ ತಂತ್ರಜ್ಞಾನ ಅಭಿವೃದ್ಧಿಗೆ ಮಂಗಳೂರಿನಲ್ಲಿ 300 ಕೋಟಿ ಬಂಡವಾಳ ಹೂಡಿಕೆ ಮಾಡುವ ಜತೆಗೆ ಜಾಗತಿಕ ಕಚೇರಿಯನ್ನೂ ನಮ್ಮೂರಿಗೆ ಶಿಫ್ಟ್ ಮಾಡಲು ಆಸಕ್ತಿ ತೋರಿಸಿರುವುದು ಬಹಳ ಸಂತಸ ತಂದಿದೆ. ಅಲ್ಲದೆ, ಭಾರತವನ್ನು ಸುಸ್ಥಿರ ಇಂಧನ ಉತ್ಪಾದನೆ ಹಾಗೂ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ವಿಶ್ವಕ್ಕೆ ಲೀಡರನ್ನಾಗಿ ಪರಿವರ್ತಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಯತ್ನಕ್ಕೆ ಇದು ಇನ್ನಷ್ಟು ಉತ್ತೇಜನ ನೀಡಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

    ಇದನ್ನೂ ಓದಿ: ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

    ಈ ಹೂಡಿಕೆಯು ಮಂಗಳೂರು ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಜಾಗತಿಕ ಪಾಲುದಾರಿಕೆಗೆ ನೆಚ್ಚಿನ ತಾಣವಾಗಿ ಬದಲಾಗುತ್ತಿರುವುದನ್ನು ಒತ್ತಿ ಹೇಳುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇಕ್-ಇನ್ ಇಂಡಿಯಾದಡಿ ಹಲವಾರು ಕಂಪನಿಗಳಿಗೆ ಉತ್ತೇಜನ ನೀಡುತ್ತಿದ್ದಾರೆ. ಇದೀಗ ಈಟ್ಯಾಗ್ ಕಂಪೆನಿಯು ಬ್ಯಾಕ್ ಟು ಊರಿಗೆ ಬರುತ್ತಿರುವುದು ಮೋದಿ ಅವರ ಮೇಕ್-ಇನ್ ಇಂಡಿಯಾಕ್ಕೆ ‘ಕುಡ್ಲ’ದ ಕೊಡುಗೆಯಾಗಿದೆ. ಆ ಮೂಲಕ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನಾವೀನ್ಯತೆಯ ಉದ್ಯಮ ಸ್ಥಾಪಿಸುವುದಕ್ಕೆ ಮುಂದೆ ಬರುವ ಕಂಪೆನಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಪೂರಕ ವಾತಾವರಣವನ್ನು ಸೃಷ್ಟಿಸುವುದಕ್ಕೆ ತನ್ನ ಬದ್ಧತೆಯನ್ನು ತೋರಿಸುತ್ತಿದೆ ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟರು.

    ಬ್ಯಾಕ್ ಟು ಊರು ಪರಿಕಲ್ಪನೆಗೆ ಹೊಸ ರೂಪ ನೀಡಿ ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರುವುದಕ್ಕೆ ಎಲ್ಲ ಪ್ರಯತ್ನಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ಈ ಬಗ್ಗೆ ಈಗಾಗಲೇ ಕೆನರಾ ಚೇಂಬರ್ ಜತೆಗೂ ಮಾತುಕತೆ ನಡೆಸಿದ್ದು, ಅವರು ಕೂಡ ಈ ಅಭಿಯಾನದಲ್ಲಿ ಕೈಜೋಡಿಸುವುದಕ್ಕೆ ಆಸಕ್ತಿ ತೋರಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ಕೂಡಲೇ ಬೆಂಗಳೂರು, ಪುಣೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿರುವ ನಮ್ಮ ಪ್ರದೇಶದ ಉದ್ಯಮಿಗಳ ಜತೆ ಸಂಪರ್ಕ ಸಾಧಿಸಿ ‘ಬ್ಯಾಕ್ ಟು ಊರು’ ಅಭಿಯಾನದಡಿ ಮಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಪ್ರೋತ್ಸಾಹಿಸಲಾಗುವುದು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

    ಈಟ್ಯಾಗ್ ಕಂಪೆನಿ ನಿರ್ದೇಶಕ ಪ್ರಕಾಶ್ ಪಿರೇರಾ ಮಾತನಾಡಿ, “ನಮ್ಮ ಕಂಪೆನಿ ಮಂಗಳೂರಿನ ಎಸ್ಇಝೆಡ್ ನಲ್ಲಿ ಸುಸ್ಥಿರ ಇಂಧನ ಮತ್ತು ಇವಿ ಕ್ಷೇತ್ರಗಳಿಗೆ ಅತ್ಯಾಧುನಿಕ ಪರಿಹಾರಗಳನ್ನು ಅಭಿವೃದ್ದಿಪಡಿಸುವ ಸಂಶೋಧನೆ ಹಾಗೂ ಉತ್ಪಾದನ ಘಟಕವನ್ನು ಸ್ಥಾಪಿಸಲಿದೆ. ಮಂಗಳೂರಿನಲ್ಲಿ ಜಾಗತಿಕ ಕಚೇರಿ ಪ್ರಾರಂಭಿಸುವ ಮೂಲಕ 2026ರ ವೇಳೆಗೆ ನಮ್ಮ ಉತ್ಪಾದನಾ ಘಟಕ ಪ್ರಾರಂಭಿಸಲಾಗುವುದು. ವಾರ್ಷಿಕ 110 ಮಿಲಿಯನ್ ಡಾಲರ್ ಮೌಲ್ಯದ ಉತ್ಪನ್ನವನ್ನು ರಫ್ತು ಮಾಡುವ ಗುರಿ ಇದೆ.

    ಅಲ್ಲದೆ ಇಲ್ಲಿನ ಘಟಕದಲ್ಲಿ ವಿಶೇಷ ಚೇತನರಿಗೆ ಶೇ.10ರಷ್ಟು ಉದ್ಯೋಗಾವಕಾಶ ನೀಡಲಿದ್ದು, ಅದರಲ್ಲಿಯೂ ಮೂಗ-ಕಿವುಡರಿಗೆ ತರಬೇತಿ ಕೊಟ್ಟು ಉದ್ಯೋಗ ನೀಡಲಾಗುವುದು. ಮಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ವಿಪುಲ ಅವಕಾಶಗಳಿದ್ದು, ಈಟ್ಯಾಗ್ ಗ್ರೂಪ್’ಗೆ ಈ ಅವಕಾಶ ಕಲ್ಪಿಸಿದ ಎಸ್ಇಝೆಡ್’ನ ಪ್ರಮುಖರು ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

    ಈ ವೇಳೆ ಮಾತನಾಡಿದ ಎಸ್ಇಝೆಡ್ ಸಿಇಒ ಸೂರ್ಯನಾರಾಯಣ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದು,”ಮೊದಲನೆಯ ಇಒಐ ಸಹಿ ಮಾಡಿದ ಕೆಲವೇ ವಾರಗಳಲ್ಲಿ ಇದೀಗ ಮತ್ತೊಂದು ದೊಡ್ಡ ಮಟ್ಟದ ಹೂಡಿಕೆಗೆ ಸಂಬಂಧಿಸಿದಂತೆ ಎರಡನೇ ಇಒಐಗೆ ಸಹಿ ಹಾಕುತ್ತಿದ್ದೇವೆ. ಮಂಗಳೂರಿನಲ್ಲಿಎಸ್ಇಝೆಡ್’ನಲ್ಲಿ ಮತ್ತಷ್ಟು ಕಂಪನಿಗಳ ಹೂಡಿಕೆ ಆಕರ್ಷಿಸಲು ಇದು ಪ್ರೇರಣೆಯಾಗಲಿದೆ ಎಂದರು.

    ಈ ವೇಳೆ ಇಟಿಎಜಿ ಎನರ್ಜಿಟೆಕ್ನಿಕ್ ಸಿಇಒ ಶ್ರೀಮತಿ ಜ್ಯೋತಿ ಪಿರೇರಾ ಎಸ್ಇಝೆಡ್ ಸಿಎಫ್ಒ ರಮೇಶ್ ಕುಮಾರ್ ಮತ್ತು ಸಿಎ ನಿತಿನ್ ಜೆ ಶೆಟ್ಟಿ ಸೇರಿದಂತೆ ಈಟ್ಯಾಗ್ ಕಂಪೆನಿಯ ಪ್ರಮುಖರು ಹಾಗೂ ಎಂಎಸ್ಇಜೆಡ್ ಅಧಿಕಾರಿಗಳು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

    Published

    on

    ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್‌ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ.

    ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ ಶಸ್ತ್ರ ಚಿಕಿತ್ಸಾ ಫಲಿತಾಂಶ ಹಾಗೂ ವೇಗವಾಗಿ ಚೇತರಿಕೆಗೆ ದಾರಿ ಮಾಡಿಕೊಡುತ್ತದೆ. ಈ ಹಿಂದೆಯೂ ಹಲವು ತಂತ್ರಜ್ಞಾನಗಳನ್ನು ಮೊದಲು ಮಂಗಳೂರಿಗೆ ಪರಿಚಯಿಸಿದ ಎಜೆ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ಇದೀಗ ಪರಿಚಯಿಸಿರುವ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ತಂತ್ರಜ್ಞಾನ ಕೂಡ ಎಜೆ ಆಸ್ಪತ್ರೆಯ ಗರಿಮೆಯನ್ನು ಹೆಚ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

    ಇದನ್ನೂ ಓದಿ : ಇಸ್ರೋದಿಂದ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ದಿನಗಣನೆ; ಜ.29ಕ್ಕೆ 100ನೇ ಉಪಗ್ರಹ ಉಡಾವಣೆ

    ಪತ್ರಿಕಾಗೋಷ್ಠಿಯಲ್ಲಿ ಡಾ.ಸುದೀಪ್ ಶೆಟ್ಟಿ, ಡಾ.ಮಯೂರ್ ರೈ, ಡಾ.ಮಿಥುನ್ ಶೆಟ್ಟಿ ಉಪಸ್ಥಿತರಿದ್ದರು.

    Continue Reading

    LATEST NEWS

    ಇಸ್ರೋದಿಂದ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ದಿನಗಣನೆ; ಜ.29ಕ್ಕೆ 100ನೇ ಉಪಗ್ರಹ ಉಡಾವಣೆ

    Published

    on

    ಮಂಗಳೂರು/ ನವದೆಹಲಿ : ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಅಣಿಯಾಗಿದೆ. ಜನವರಿ 29 ರಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ‌ದ 100 ನೇ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆದಿದೆ.  ಜನವರಿ 29 ರಂದು ಬೆಳಿಗ್ಗೆ 6.23ಕ್ಕೆ ಶ್ರೀಹರಿಕೋಟಾದಿಂದ 2,250 ಕೆಜಿ ನ್ಯಾವಿಗೇಷನ್ ಉಪಗ್ರಹವನ್ನು ಜಿಎಸ್‌ಎಲ್‌ವಿ – ಎಫ್‌ 15 ರ ಮೂಲಕ ಕಳುಹಿಸಲು ಸಜ್ಜಾಗಿರುವ ಬಗ್ಗೆ ಇಸ್ರೋ ಮಾಹಿತಿ ನೀಡಿದೆ.

    ಇದು ಜಿಎಸ್‌ಎಲ್‌ವಿ ಉಡಾವಣಾ ವಾಹನದ  17ನೇ ಹಾರಾಟವಾಗಲಿದ್ದು, 19 ನಿಮಿಷಗಳಲ್ಲಿ ಉಪಗ್ರಹವನ್ನು ಕಕ್ಷೆಗೆ ಕೂರಿಸುವ ಯೋಜನೆ ರೂಪಿಸಲಾಗಿದೆ.  ಈ ಕಾರ್ಯಾಚರಣೆಯ ಅಡಿ ಎನ್‌ವಿಎಸ್‌ – 02 ಉಪಗ್ರಹವನ್ನು ಉಡಾವಣೆ ಮಾಡಲಾಗುವುದು. ಇದು ಭಾರತದ ಪ್ರಾದೇಶಿಕ ನ್ಯಾವಿಗೇಷನ್ ವಿದ್ ಇಂಡಿಯನ್ ಕಾನ್‌ಸ್ಟೆಲೇಷನ್(NavIc) ಸಿಸ್ಟಮ್‌ನ್ನು ಮತ್ತಷ್ಟು ಬಲಪಡಿಸಲಿದೆ.

    ಇದನ್ನೂ ಓದಿ : “ಅವನು ನನ್ನ ಕ್ರಷ್” : ವಿವಾಹಿತ ನಟನ ಮೇಲೆ 19 ವರ್ಷದ ಸ್ಟಾರ್ ನಟಿ ಲವ್

    ನ್ಯಾವಿಗೇಶನ್ ವಿದ್ ಇಂಡಿಯನ್ ಕಾನ್‌ಸ್ಟೆಲೇಷನ್ (NavIc) ಭಾರತದ ಸ್ವತಂತ್ರ ಪ್ರಾದೇಶಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆಯಾಗಿದೆ. ಭಾರತದ ಬಳಕೆದಾರರಿಗೆ ನಿಖರವಾದ ಸ್ಥಾನ, ವೇಗ ಮತ್ತು ಸಮಯ (PVT) ಸೇವೆಯನ್ನು ಒದಗಿಸುವ ಜೊತೆಗೆ ಮಿಲಿಟರಿ ಮತ್ತು ಇತರೆ ನ್ಯಾವಿಗೇಷನ್ ಆಧಾರಿತ ಸೇವೆ ಒದಗಿಸಲಿದೆ.

    Continue Reading

    LATEST NEWS

    Trending