Friday, May 27, 2022

ಅಮೇರಿಕಾದ ವಿವಿಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದ ಖಾವಂದರು

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಮೇರಿಕಾದ ವೆಲ್ ನೆಸ್ ವಿಶ್ವ ವಿದ್ಯಾಲಯದಿಂದ ಇಂದು ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಆಚಾರ್ಯ ಪದವಿಯೊಂದಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಜಾಗತಿಕ ಮಟ್ಟದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕ್ಷೇತ್ರದಲ್ಲಿ ಖಾವಂದರು ಸೇವೆ, ಸಾಧನೆಯನ್ನು ಗುರುತಿಸಿ ಈ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ” ನಾವೆಲ್ಲರೂ ಇಂದು ಸಮ ಮನಸ್ಕರಾಗಬೇಕು. ವಿಶ್ವ ಕಲ್ಯಾಣವೇ ನಮ್ಮ ಗುರಿಯಾಗಬೇಕು.

ಸಮಸ್ತ ಮಾನವ ಕಲ್ಯಾಣ ಹಾಗೂ ಸಂತೋಷವೇ ಎಲ್ಲಾ ಸೇವೆಗಳ ಮುಖ್ಯ ಉದ್ದೇಶ. ವೈದ್ಯಕೀಯ ಚಿಕಿತ್ಸೆಯಲ್ಲಿ ವಿವಿಧ ಪದ್ಧತಿಗಳ ಮಧ್ಯೆ ಸ್ಪರ್ಧೆ ಸಲ್ಲದು. ಪರಸ್ಪರ ಪೂರಕವಾಗಿ ಚಿಕಿತ್ಸೆ ನೀಡಿ ರೋಗಿಯ ಯೋಗ ಕ್ಷೇಮದೊಂದಿಗೆ ಆರೋಗ್ಯ ಭಾಗ್ಯ ರಕ್ಷಣೆಯೇ ವೈದ್ಯರ ಗುರಿಯಾಗಬೇಕು ಎಂದು ಸಲಹೆ ನೀಡಿದರು.

ಆದುದರಿಂದ ವಿಶ್ವದಲ್ಲೇ ಪ್ರಥಮವಾಗಿ ತಾವು ಧರ್ಮಸ್ಥಳದಲ್ಲಿ ಮತ್ತು ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯನ್ನು ಆರಂಭಿಸಿರುವುದಾಗಿ ಹೇಳಿದರು. ನಮ್ಮಧರ್ಮ, ಸಂಸ್ಕೃತಿ ಮತ್ತು ಪರಂಪರೆಯನ್ನು ಕಡೆಗಣಿಸಬಾರದು. ಧರ್ಮಸ್ಥಳದಲ್ಲಿ ಜನರ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯ ಭಾಗ್ಯ ರಕ್ಷಣೆಗೆ ನಿರಂತರ ಮಾರ್ಗದರ್ಶನದೊಂದಿಗೆ ಅಭಯದಾನ ನೀಡಲಾಗುತ್ತದೆ ಎಂದು ಹೇಳಿದರು.

ಭಾರತೀಯ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅರಿವು, ಜಾಗೃತಿ ಮೂಡಿಸಿ ಲೋಕ ಕಲ್ಯಾಣವಾಗುವಂತೆ ನಾವೆಲ್ಲರೂ ಶ್ರಮಿಸೋಣ ಎಂದು ಅವರು ಸಲಹೆ ನೀಡಿದರು. ಈ ಸಂದರ್ಭ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆನ್‌ಲೈನ್‌ಮೂಲಕ ಶುಭಾಶಂಸನೆ ಮಾಡಿ ಹೆಗ್ಗಡೆಯವರನ್ನು ಅಭಿನಂದಿಸಿದರು.

ಬೆಂಗಳೂರು ವಿವಿ ಉಪಕುಲಪತಿ ಡಾ ಕೆ ಆರ್‌ ವೇಣುಗೋಪಾಲ್‌, ಮಣಿಪಾಲದ ಮಾಹೆ ವಿವಿಯ ಉಪಕುಲಪತಿ ಎ ಡಿ ವೆಂಕಟೇಶ್‌, ಸುರತ್ಕಲ್‌ ಎನ್‌ಐಟಿಕೆಯ ಪ್ರೊ ಶ್ರೀಪತಿ ಆಚಾರ್ಯ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಹೇಮಾವತಿ ವಿ. ಹೆಗಡೆ, ಡಿ. ಹರ್ಷೇ೦ದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್‌, ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್‌ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ದಿ. ಭಾಗವತ ಬಲಿಪ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಮೂಲ್ಕಿ: ಅನಾರೋಗ್ಯದ ಕಾರಣದಿಂದ ಅಸಂಖ್ಯಾತ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ ಕಟೀಲು ಮೇಳದ ಪ್ರಸಿದ್ಧ ಭಾಗವತರಾದ ಪ್ರಸಾದ್ ಭಟ್ ಬಲಿಪ ಕುಟುಂಬಕ್ಕೆಕಟೀಲು ಮೇಳದ ಪತ್ತನಾಜೆಯ ಯಕ್ಞಗಾನ ಸಂದರ್ಭ ಅತಿಥಿ -ಗಣ್ಯರ ಸಮ್ಮುಖದಲ್ಲಿ "ಸಾಂತ್ವನ ಸಂತಾಪ"...

ಕ್ರೈಸ್ತರ ಕಾಲೇಜಿನಲ್ಲಿ ಕಲಿತವರು ಮತಾಂತರಗೊಂಡಿದ್ದಾರೆಯೇ: ಮಾಜಿ ಶಾಸಕ ಜೆ.ಆರ್‌ ಲೋಬೊ ಪ್ರಶ್ನೆ

ಮಂಗಳೂರು: ಕ್ರೈಸ್ತ ಧರ್ಮದ ಕಾಲೇಜಿನಲ್ಲಿ ಕಲಿತವರು ಮತಾಂತರಗೊಂಡಿದ್ದಾರೆಯೇ? ಬೇರೆ ಧರ್ಮದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರು ಮತಾಂತರ ಆಗಿದ್ದಾರೆಯೇ? ಎಂದು ಮಾಜಿ ಶಾಸಕ ಜೆ.ಆರ್‌ ಲೋಬೋ ಪ್ರಶ್ನಿಸಿದ್ದಾರೆ.ಮತಾಂತರ ನಿಷೇಧ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ...

ಮಳಲಿ ವಿವಾದ: ಮಸೀದಿ ಜಾಗವನ್ನು ಹಿಂದೂಗಳಿಗೆ ಮರಳಿಸುವಂತೆ ವಿಎಚ್‌ಪಿ ರಾಷ್ಟ್ರೀಯ ಪ್ರ.ಕಾ. ಆಗ್ರಹ

ಮಂಗಳೂರು: ಮಳಲಿಯಲ್ಲಿರುವ ದೇವಸ್ಥಾನವನ್ನು ಒಡೆದು ಮಸೀದಿ ನಿರ್ಮಾಣ ಮಾಡಲಾಗಿದೆ. ಅಲ್ಲಿ ದೇವಸ್ಥಾನದ ಅವಶೇಷಗಳು ಸಿಕ್ಕಿವೆ. ಆದ್ದರಿಂದ ಅದನ್ನು ಮರಳಿ ಹಿಂದುಗಳಿಗೆ ನೀಡಲೇಬೇಕು ಎಂದು ವಿಎಚ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಸುರೇಂದ್ರ ಕುಮಾರ್ ಜೈನ್‌...