ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ, ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಅಮಿತ್ ಶಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ ಅಂತ ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಮಿತ್ ಶಾ ಅವರನ್ನು ಸಮಾಧಾನಿಸಲು ಸಿಎಂ ಯತ್ನಿಸಿದ್ದಾರೆ.
ಆದರೆ ಇದಕ್ಕೆ ಸಮಾಧಾನಗೊಳ್ಳದ ಅಮಿತ್ ಶಾ, ಇದು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಅವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ, ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.