Friday, July 1, 2022

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕ್ವಿಜ್ ಸ್ಪರ್ಧೆ ಕೆಬಿಸಿ ವಿಶೇಷ  ಕಾರ್ಯಕ್ರಮದಲ್ಲಿ ಉಡುಪಿಯ ಬಾಲಕ ಅನಾಮಯ..! 

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕ್ವಿಜ್ ಸ್ಪರ್ಧೆ ಕೆಬಿಸಿ ವಿಶೇಷ  ಕಾರ್ಯಕ್ರಮದಲ್ಲಿ ಉಡುಪಿಯ ಬಾಲಕ ಅನಾಮಯ..! 

ದೆಹಲಿ: ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಅತ್ಯಂತ ಜನಪ್ರಿಯ ಕ್ವಿಝ್ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ಯಲ್ಲಿ ವಿದ್ಯಾರ್ಥಿಗಳ ವಿಶೇಷ ಸಂಚಿಕೆಯಲ್ಲಿ ಉಡುಪಿಯ ಬಾಲಕ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೇಶ್ ದಿವಾಕರ್  ಆ ವಿದ್ಯಾರ್ಥಿಯಾಗಿದ್ದಾನೆ. ಡಿ.14ರಿಂದ 17ರವರೆಗೆ ಕೆಬಿಸಿಯ ‘ಸ್ಟೂಡೆಂಟ್ಸ್  ಸ್ಪೆಷಲ್’ನಲ್ಲಿ ಅಮಿತಾಬ್ ಬಚ್ಚನ್ ಎದುರು ಹಾಟ್‌ ಸೀಟ್‌ನಲ್ಲಿ ಕುಳಿತುಕೊಳ್ಳುವ ಅರ್ಹತೆ ಪಡೆದ ದೇಶದ ಎಂಟು ಮಂದಿ ಫೈನಲಿಸ್ಟ್ ವಿದ್ಯಾರ್ಥಿಗಳಲ್ಲಿ ಉಡುಪಿಯ ಅನಾಮಯ ಯೋಗೇಶ್ ದಿವಾಕರ್ ಸಹ ಒಬ್ಬರಾಗಿದ್ದಾರೆ. ಇದಕ್ಕಾಗಿ ದೇಶಾದ್ಯಂತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟು 1.5 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.                ಆರಂಭಿಕ ಸ್ಪರ್ಧೆಯ ಬಳಿಕ ಅಂತಿಮ ಸುತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸರದಿ ಕ್ವಿಝ್ ಪರೀಕ್ಷೆಗೊಳಪಡಿಸಿ, ಸಂದರ್ಶನ ಗಳನ್ನು ನಡೆಸಿ, ಅಂತಿಮವಾಗಿ ಡಿ.14ರಿಂದ 17ರವರೆಗೆ ಪ್ರಸಾರಗೊಳ್ಳುವ ‘ಕೆಬಿಸಿ ಸ್ಟೂಡೆಂಟ್ ಸ್ಪೆಷಲ್’ಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಅನಾಮಯ ಯೋಗೇಶ್ ಸಹ ಒಬ್ಬರಾಗಿದ್ದಾರೆ.

ಸೋನಿ ಟಿವಿಯಲ್ಲಿ ಡಿ.14ರಿಂದ 17ರವರೆಗೆ ಪ್ರತಿದಿನ ರಾತ್ರಿ 9 ಗಂಟೆಗೆ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.

 

LEAVE A REPLY

Please enter your comment!
Please enter your name here

Hot Topics

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...

ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.ಪ್ರವಾದಿ...