Connect with us

LATEST NEWS

CAA ಕಾಯ್ದೆ ವಾಪಾಸ್‌ ಪ್ರಶ್ನೆಯೇ ಇಲ್ಲ… ಅಮಿತ್ ಶಾ ಖಡಕ್ ಹೇಳಿಕೆ!

Published

on

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಿರುಗಿ ಬಿದ್ದಿದ್ದು, ಇದೊಂದು ಚುಣಾವಣಾ ಗಿಮಿಕ್ ಎಂದು ಆರೋಪಿಸ್ತಾ ಇವೆ. ಅಷ್ಟೇ ಅಲ್ಲದೆ, ಈ ಕಾಯ್ದೆಯನ್ನು ವಾಪಾಸು ಪಡೆಯಬೇಕು ಅನ್ನೋ ಒತ್ತಾಯ ಕೂಡಾ ಮಾಡಿದೆ. ಆದ್ರೆ ಯಾವುದೇ ಕಾರಣಕ್ಕೂ ಕಾಯ್ದೆಯನ್ನು ವಾಪಾಸು ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೇಶದಲ್ಲಿ ಭಾರಿ ವಿವಾದ ಸೃಷ್ಟಿ ಮಾಡಿದ್ದ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇದೀಗ ಕೇಂದ್ರ ಸರ್ಕಾರ ಜಾರಿ ಮಾಡಿದೆ. ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಇದಾಗಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಪಘಾನಿಸ್ತಾನದ ವಲಸಿಗ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವ ನೀಡಲಾಗುತ್ತದೆ. ಆದ್ರೆ ಇದು ದೇಶದಲ್ಲಿ ವಾಸವಾಗಿರುವ ಅಲ್ಪಸಂಖ್ಯಾತರ ಮೇಲೆ ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷಗಳ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಆದ್ರೆ, ಯಾವುದೇ ವಿರೋಧ ಇದ್ರೂ ನಿರ್ಧಾರದಲ್ಲಿ ರಾಜಿ ಮಾಡಿಕೊಳ್ಳದೆ ಕಾಯ್ದೆ ಜಾರಿಯಾಗಲಿದೆ ಎಂದು ಅಮಿತ್ ಶಾ ಸ್ಪಷ್ಟ ಪಡಿಸಿದ್ದಾರೆ.

ನಮ್ಮ ದೇಶದ ಪೌರತ್ವ ನೀಡುವುದು ನಮ್ಮ ಸಾರ್ವಭೌಮ ಹಕ್ಕಾಗಿದೆ. ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವುದಿಲ್ಲ ಎಂದು ಹೇಳಿರುವ ಅವರು,  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಎ (CAA) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಆದ್ರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಅನುಮಾನ ಎಂದು ಲೇವಡಿ ಮಾಡಿರುವ ಶಾ,  ಅದು ಇಂಡಿಯಾ ಒಕ್ಕೂಟದ ನಾಯಕರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.  ಅಷ್ಟಕ್ಕೂ, ಅಧಿಕಾರಕ್ಕೆ ಬಂದರೂ ಸಿಎಎ (CAA) ಯನ್ನು ರದ್ದುಗೊಳಿಸಲು ಆಗುವುದಿಲ್ಲ ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಏನಿದೆ ? ವಿರೋಧ ಯಾಕೆ ?

ಇದು ಪಾಕಿಸ್ತಾನ , ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ವಲಸೆ ಬಂದಿರೋ ಆ ದೇಶದ ಅಲ್ಪಸಂಖ್ಯಾತ ಹಿಂದುಗಳು, ಸಿಖ್ಖರು, ಕ್ರೈಸ್ತರು, ಬೌದ್ಧರು, ಜೈನರು, ಮತ್ತು ಪಾರ್ಸಿಗಳಿಗೆ ಪೌರತ್ವ ನೀಡುವ ಕಾಯ್ದೆ. 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು 2014 ರ ಡಿಸೆಂಬರ್ 31 ರ ಮೊದಲು ದೇಶಕ್ಕೆ ಬಂದು ನೆಲೆಸಿರುವ ನೆರೆಯ ದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲಾಗುತ್ತದೆ.

2019 ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ತಿದ್ದುಪಡಿ ಮಾಡುವ ಬರವಸೆಯನ್ನು ಎನ್‌ಡಿಎ ಸರ್ಕಾರ ನೀಡಿತ್ತು. ಹೀಗಾಗಿ ಅಧಿಕಾರಕ್ಕೆ ಬಂದ ತಕ್ಷಣ 2019 ರಲ್ಲಿ ಈ ತಿದ್ದುಪಡಿ ಮಾಡಿ ಜಾರಿಗೂ ಮುಂದಾಗಿತ್ತು.  ಆದರೆ, ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದ ಕಾರಣ ತಾತ್ಕಾಲಿಕವಾಗಿ ಆದೇಶವನ್ನು ಹಿಂಪಡೆದಿತ್ತು. ಆದ್ರೆ, ಇದೀಗ ಚುನಾವಣೆಯ ಹೊಸ್ತಿಲಿನಲ್ಲೇ ಈ ಆದೇಶವನ್ನು ಜಾರಿಗೆ ತಂದು, ಯಾವುದೇ ಕಾರಣಕ್ಕೂ ಹಿಂದೆ ಪಡೆಯುವುದಿಲ್ಲ ಎಂದು ಅಮಿತ್ ಶಾ ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

Trending