Connect with us

ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಅಮೋನಿಯಾ ಸೋರಿಕೆ..! ತಪ್ಪಿದ ಭಾರಿ ಅನಾಹುತ..

Published

on

ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಅಮೋನಿಯಾ ಸೋರಿಕೆ..! ತಪ್ಪಿದ ಭಾರಿ ಅನಾಹುತ..

ಮಂಗಳೂರು : ಮಂಗಳೂರಿನ ಹಳೇ ಬಂದರಿನ ಮೀನುಗಾರಿಕಾ ಧಕ್ಕೆಯಲ್ಲಿ ಅಮೋನಿಯಾ ಸೋರಿಕೆಯಾದ ಘಟನೆ ಸಂಭವಿಸಿದೆ.

ಇಂದು ಬೆಳಿಗ್ಗೆ ಸುಮಾರು 11 ಘಂಟೆ ಹೊತ್ತಿಗೆ ಮೀನುಗಾರಿಕಾ ಧಕ್ಕೆಯ ಪರಿಸರದಲ್ಲಿ ಅಮೋನಿಯಾ ಸೋರಿಕೆಯಾಗಿ ಘಾಟು ವಾಸನೆ ಹರಡಿ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.

ಸ್ಥಳಿಯರ ಉಸಿರಾಟಕ್ಕೂ ಸಮಸ್ಯೆ ಎದುರಾಗಿದ್ದು, ವಿಷಯವನ್ನು ಸ್ಥಳಿಯ ಶಾಸಕರಾದ ವೇದವ್ಯಾಸ್ ಕಾಮತ್‌ ಗಮನಕ್ಕೆ ತಂದಿದ್ದರು.

ಶಾಸಕರು ಸಮಸ್ಯೆಯ ಬಗ್ಗೆ ಪರೀಶೀಲಿಸಲು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹತ್ತಿರದಲ್ಲಿನ ಖಾಸಗಿ ಐಸ್ ಫ್ಯಾಕ್ಟರಿಯಿಂದ ಅಮೋನಿಯಂ ಸೋರಿಕೆಯಾಗುತ್ತಿರುವುದು ಪತ್ತೆ ಹಚ್ಚಿದ್ದಾರೆ.

ಕಾರ್ಯಪ್ರವರ್ತರಾದ ಅಗ್ನಿಶಾಮಕದಳದ ಸಿಬಂದಿಗಳು ಅಮೋನಿಯಾ ಸೋರಿಕೆಯನ್ನು ತಡೆ ಹಿಡಿದು ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

ವಿಡಿಯೋಗಾಗಿ..

Click to comment

Leave a Reply

Your email address will not be published. Required fields are marked *

LATEST NEWS

ಮುಂದಿನ 3 ದಿನ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

Published

on

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.

Continue Reading

LATEST NEWS

ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್

Published

on

ಮಂಗಳೂರು/ಮುಂಬೈ : ಟೀಂ ಇಂಡಿಯಾ ಮತ್ತು ಹಿಮಾಚಲ ಪ್ರದೇಶದ ಆಲ್ ರೌಂಡರ್, 2013ರ ಐಪಿಎಲ್ ವಿಜೇತ ರಿಷಿ ಧವನ್ ಅವರು ಭಾರತೀಯ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

34 ವರ್ಷದ ಆಲ್ ರೌಂಡರ್ ಇನ್ಮುಂದೆ ಏಕದಿನ ಮತ್ತು ಟಿ20 ಕ್ರಿಕೆಟ್ ಆಡುವುದಿಲ್ಲ. ದೇಶೀಯ ಕ್ರಿಕೆಟ್ ನಲ್ಲಿ ಹಿಮಾಚಲ ಪ್ರದೇಶದ ಪರ ಆಡುತ್ತಿರುವ ರಿಷಿ ಧವನ್, ಭಾರತಕ್ಕಾಗಿ ಮೂರು ಏಕದಿನ ಮತ್ತು ಒಂದು ಟಿ-20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

 

2016ರಲ್ಲಿ ಟೀಂ ಇಂಡಿಯಾಗೆ ಕಾಲಿಟ್ಟಿದ್ದರು. ಧವನ್ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಪ್ರಾರಂಭಿಸಿದರು. ಇನ್ನೂ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧವನ್ ದೇಶಿಯ ಕ್ರಿಕೆಟ್ ನಲ್ಲಿ ಒಟ್ಟು 9000 ರನ್ ಗಳಿಸಿದ್ದಾರೆ. 650ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ಗುಜರಾತ್ ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

ಐಪಿಎಲ್ ನಲ್ಲಿ, ಧವನ್ ಕಿಂಗ್ಸ್ ಇಲೆವೆನ್ ಪಂಜಾಬ್ (2014-2024) ಮತ್ತು ಮುಂಬೈ ಇಂಡಿಯನ್ಸ್ (2013) ಅನ್ನು ಪ್ರತಿನಿಧಿಸಿದರು. 39 ಪಂದ್ಯಗಳಲ್ಲಿ 25 ವಿಕೆಟ್ ಮತ್ತು 210 ರನ್ ಗಳಿಸಿದ್ದರು.

Continue Reading

LATEST NEWS

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

Published

on

ಬೆಂಗಳೂರು: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.

ಎಚ್​ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.

ಕೇಂದ್ರಕ್ಕೆ ಮಾಹಿತಿ:

ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.

ಏನಿದು HMPV ವೈರಸ್?

ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್​ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ. ಸದ್ಯ ಎಚ್​ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಹೇಳಿದೆ.

Continue Reading

LATEST NEWS

Trending

Exit mobile version