Home ದೇಶ-ವಿದೇಶ ಕೊರೊನಾ ರಣಕೇಕೆ ನಡುವೆ ಅಂಫಾನ್ ಚಂಡಮಾರುತ ಅಬ್ಬರ: ಒಡಿಶಾದಲ್ಲಿ 10 ಸಾವು.!!

ಕೊರೊನಾ ರಣಕೇಕೆ ನಡುವೆ ಅಂಫಾನ್ ಚಂಡಮಾರುತ ಅಬ್ಬರ: ಒಡಿಶಾದಲ್ಲಿ 10 ಸಾವು.!!

ಕೊರೊನಾ ರಣಕೇಕೆ ನಡುವೆ ಅಂಫಾನ್ ಚಂಡಮಾರುತ ಅಬ್ಬರ: ಒಡಿಶಾದಲ್ಲಿ 10 ಸಾವು.!!

ಒಡಿಶಾ: ಕೊರೊನಾ ರಣಕೇಕೆ ನಡುವೆ ದೇಶದ ಕರಾವಳಿ ಪ್ರದೇಶಗಳಲ್ಲಿ ಅಂಪಾನ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಪಶ್ಚಿಮ ಬಂಗಾಳ, ಒಡಿಶಾದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ.

ಗಂಟೆಗೆ 190 ಕಿ.ಮೀ.ನಷ್ಟು ವೇಗದಲ್ಲಿ ಅಂಫಾನ್ ಚಂಡಮಾರುತ ಅಪ್ಪಳಿಸಿದ್ದು, ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ.

ಅಲ್ಲದೆ ಚಂಡಮಾರುತದ ರಭಸಕ್ಕೆ ಹಲವು ಕಟ್ಟಡಗಳು, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಐದು ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ.

ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದ 6.5 ಲಕ್ಷಕ್ಕೂ ಹೆಚ್ಚು ಜನರನ್ನು ಚಂಡಮಾರುತವು ಪ್ರವೇಶಿಸುವ ಮೊದಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು.

ಇನ್ನು ಪಶ್ವಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆ ಮತ್ತಿತರ ಭಾಗಗಳಲ್ಲೂ ಭಾರೀ ಮಳೆಯಾಗುತ್ತಿದ್ದು, ದಿಘಾ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಅತ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಾಂಗ್ಲಾದೇಶದ ಹಾತಿಯಾ ದ್ವೀಪದಲ್ಲಿಯೂ ಅಂಪಾನ್ ಹಾವಳಿ ಹೆಚ್ಚಿತ್ತು.

ಒಡಿಶಾ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಈಗಾಗಲೇ NDRFನ 40 ತುಕಡಿಗಳನ್ನು ಎರಡೂ ರಾಜ್ಯಗಳಿಗೆ ರವಾನಿಸಲಾಗಿದ್ದು, ಅಂಫಾನ್ ಒಡ್ಡುವ ಸವಾಲುಗಳನ್ನು ಎದುರಿಸಲು ಸಜ್ಜಾಗಿರುವುದಾಗಿ NDRF ಸ್ಪಷ್ಟಪಡಿಸಿದೆ.

ಇನ್ನು ಅಂಫಾನ್ ಚಂಡಮಾರುತವನ್ನು1999ರ ಬಳಿಕ ಬಂಗಾಳ ಕೊಲ್ಲಿಯಲ್ಲಿ ಉದ್ಭವಿಸಿರುವ ಎರಡನೇ ಸೂಪರ್ ಚಂಡಮಾರುತ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥ ಎಂ.ಮೋಹಾಪಾತ್ರ ತಿಳಿಸಿದ್ದಾರೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...