ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.
ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ ಅವರು ‘ಹಿರಿಯರ ತ್ಯಾಗ ಬಲಿದಾನದ ಫಲಶೃತಿಯಾಗಿ ಪಡೆದ ಸ್ವಾತಂತ್ರ್ಯದ ಅಮೃತೋತ್ಸವ ನಮ್ಮ ಅವಧಿಯಲ್ಲಿ ಆಚರಿಸುವ ಅವಕಾಶ ದೊರೆತದ್ದು, ನಮ್ಮೆಲ್ಲರ ಸೌಭಾಗ್ಯವೇ ಸರಿ.
2021 2022 ರ ವರ್ಷದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದಡಿ ದೇಶದಲ್ಲಿ, ರಾಜ್ಯದಲ್ಲಿ ಹಲವು ಬಗೆಯ ವೈವಿಧ್ಯಮಯ ವಿವಿಧ ವಲಯಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಜಾರಿಯಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರೋಪ ಆಗಸ್ಟ್ 15ರಂದು ದೇಶದೆಲ್ಲೆಡೆ ನಡೆಯುವಂತೆ, ಬೆಳ್ತಂಗಡಿಯಲ್ಲೂ ನಡೆಯಲಿದ್ದು ಈ ಕಾರ್ಯಕ್ರಮ ಜನಮಾನಸದಲ್ಲಿ ಅವಿಸ್ಮರಣೀಯವಾಗಿ ಉಳಿಯುವಂತೆ ಮಾಡಲು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿದ್ದೇವೆ’ ಎಂದರು.
ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಪೊಲೀಸ್ ಇಲಾಖೆಯ ಶಿವಕುಮಾರ್ , ಕಂದಾಯ ಇಲಾಖೆ ಶಿಕ್ಷಣ ಇಲಾಖೆ ಪೃಥ್ವಿ ಸಾನಿಕಮ್ , ಅರಣ್ಯ ಇಲಾಖೆ EO, ಕೃಷಿ ಇಲಾಖೆ ಬೆಳ್ತಂಗಡಿಯ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.