LATEST NEWS
ಕಮರಿಗೆ ಬಿದ್ದ ಸೇನಾ ವಾಹನ; ಇಬ್ಬರೂ ಯೋಧರ ಸಾವು, ಮೂವರಿಗೆ ಗಂಭೀರ ಗಾಯ
Published
2 days agoon
By
NEWS DESK3ಮಂಗಳೂರು/ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ವುಲರ್ ವ್ಯೂಪಾಯಿಂಟ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಕೆಳಗಿಳಿದು ಆಳವಾದ ಕಮರಿಗೆ ಉರುಳಿದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಸೈನಿಕರ ಸಾವು, ಮೂವರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ- ಶ್ರೀನಗರ ರಸ್ತೆಯ ಎಸ್ ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆ ಮಾಹಿತಿ !
ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.
LATEST NEWS
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು
Published
1 hour agoon
06/01/2025By
NEWS DESK4ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃ*ತ ಬಾಲಕಿ.
ಇದನ್ನೂ ಓದಿ : ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ
ತೇಜಸ್ವಿನಿ ಎಂದಿನಂತೆ ಶಾಲೆಗೆ ಹೋಗಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಿದ್ದಳು. ಈ ವೇಳೆ ಕುಸಿದುಬಿದ್ದಿದ್ದಾಳೆ. ಅಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಶಾಲಾ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ತೇಜಸ್ವಿನಿ ಕೊ*ನೆಯುಸಿರೆಳೆದಿದ್ದಳು ಎಂದು ತಿಳಿದುಬಂದಿದೆ. ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಂದೆ – ತಾಯಿ ಶೋಕಸಾಗರದಲ್ಲಿ ಮುಳುಗಿದ್ದಾರೆ.
ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.
ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.
LATEST NEWS
ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ
Published
3 hours agoon
06/01/2025By
NEWS DESK4ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂ*ದು ದಂಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃ*ತಪಟ್ಟವರು.
ರಾತ್ರಿ(ಜ.5) ಇಬ್ಬರು ಮಕ್ಕಳನ್ನು ಹ*ತ್ಯೆ ಮಾಡಿದ ದಂಪತಿ ಬಳಿಕ ಮನೆಯಲ್ಲೇ ನೇ*ಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾರಣ ಏನು?
ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮೊದ ಮಗು ಅನುಪ್ರಿಯಾಗೆ ಆರೋ*ಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು ಎನ್ನಲಾಗಿದೆ.
ಮನೆಗೆ ಮೂರು ಜನ ಕೆಲಸಗಾರರನ್ನು ನೇಮಿಸಲಾಗಿತ್ತು. ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರಂತೆ. ಹೀಗಾಗಿ ಇಂದು(ಜ.6) ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಭಾನುವಾರವೂ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರಂತೆ.
ಇದನ್ನೂ ಓದಿ : ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ
ಮೊದಲ ಮಗು ವಿಶೇಷ ಚೇತನವಾಗಿದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿರುವ ಬಗ್ಗೆ ವರದಿಯಾಗಿದೆ.
LATEST NEWS
ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಗ್ಯಾರೆಂಟಿ !
ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ
ಸೆಂಟ್ರಿಂಗ್ ಮರದ ತುಂಡು ಬಿದ್ದು ಬಾಲಕಿ ಸಾವು ಕೇಸ್: ಎಂಜಿನಿಯರ್ ಪೊಲೀಸ್ ವಶಕ್ಕೆ
ಬರ್ತ್ಡೇ ದಿನದಂದೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ‘IIM’ ವಿದ್ಯಾರ್ಥಿ ಸಾವು
ಪತ್ರಕರ್ತನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಪೊಲೀಸ್ ವಶಕ್ಕೆ
UPI ಬಳಕೆದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಯೇ ಖಾಲಿ.!
Trending
- DAKSHINA KANNADA5 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA3 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- LATEST NEWS6 days ago
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ
- BIG BOSS2 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?