Saturday, August 20, 2022

  ಪಡುಬಿದ್ರಿಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ವೃದ್ಧ ಮಹಿಳೆ ..! 

  ಪಡುಬಿದ್ರಿಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ವೃದ್ಧ ಮಹಿಳೆ ..!

ಉಡುಪಿ:ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಹೆಜಮಾಡಿಯ ,ಶಿವನಗರದಲ್ಲಿ  ನಡೆದಿದೆ.ಸ್ಥಳೀಯ ನಿವಾಸಿ ಕುಸುಮ(63) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.ನಿನ್ನೆ ಬೆಳಗ್ಗೆ ಸುಮಾರು 11 ಗಂಟೆಯಿಂದ ಇವರು ನಾಪತ್ತೆಯಾಗಿದ್ದರು. ರಾತ್ರಿಯವರೆಗೂ ಮನೆಯವರು ಸಾಕಷ್ಟು ಹುಡುಕಾಟ ನಡೆಸಿದರೂ ಕೂಡ ಇವರ ಸುಳಿವು ಪತ್ತೆಯಾಗಿರಲಿಲ್ಲ.ಇಂದು ಬೆಳಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಸಿದಾಗ, ಮನೆಯ ಬಾವಿಯಲ್ಲಿ ಕುಸುಮ ಅವರ ಮೃತ ದೇಹ ಪತ್ತೆಯಾಗಿದೆ. ಮಕ್ಕಳಿಲ್ಲದ ಕುಸುಮ ಪತಿ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ನನ್ನ ಸಾವಿಗೆ ನಾನೇ ಕಾರಣ ಎಂಬ ಡೆತ್ ನೋಟ್ ಲಭ್ಯವಾಗಿದ್ದು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ .

LEAVE A REPLY

Please enter your comment!
Please enter your name here

Hot Topics