ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಂಗಳೂರು ಪೊಲೀಸರಿಗೊಂದು ಭಾವನಾತ್ಮಕ ಪತ್ರ..!
ಮಂಗಳೂರು: ದೇಶದಾದ್ಯಂತ ಪ್ರಳಯ ಸೃಷ್ಟಿ ಮಾಡಿರುವ ಕೊರೊನಾ ವಿರುದ್ಧ ವೈದ್ಯರು ಹಾಗೂ ಪೊಲೀಸರು ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.
ನಾಗರೀಕರ ಒಳಿತನ್ನು ಬಯಸುವ ಪೊಲೀಸರು ಸ್ವ-ರಕ್ಷಣೆ ಕೂಡ ಮಾಡಬೇಕಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಅಧೀಕ್ಷಕಕರು ಪತ್ರ ಬರೆಯುವ ಮೂಲಕ ಕಾಳಜಿ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧೀಕ್ಷಕರು ಬರೆದ ಪತ್ರದ ಸಾರಾಂಶ ಹೀಗಿದೆ…
“ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ನಮಸ್ಕಾರ….
ವಿಶ್ವಾಧ್ಯಂತ ಅತೀ ವೇಗವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ನಿಂದ ಈಗಾಗಲೇ ಸಾವಿರಾರು ಜನ ಸಾವನ್ನಪ್ಪುತ್ತಿರುವುದು ನಿಮಗೆಲ್ಲಾ ತಿಳಿದಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯಕೀಯ ಕ್ಷೇತ್ರದಷ್ಟೇ ಜವಾಬ್ದಾರಿ ಪೊಲೀಸ್ ಇಲಾಖೆಗೂ ಇರುತ್ತದೆ.
ಪ್ರತೀ ಸಲ ದೇಶದಲ್ಲಿ ನೈಸರ್ಗಿಕ ವಿಕೋಪ, ದೊಂಬಿ, ಗಲಾಟೆಗಳಾದಾಗ ಹೇಗೆ ಪೊಲೀಸ್ ಇಲಾಖೆ ಒಗ್ಗಟ್ಟಿನಿಂದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿತ್ತೋ, ಅದಕ್ಕಿಂತಲೂ ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸುವ ಅಗತ್ಯತೆ ನಮ್ಮ ಮುಂದಿದೆ.
ಒಬ್ಬ ಜಿಲ್ಲಾ ಎಸ್.ಪಿ ಯಾಗಿ ನನ್ನ ವ್ಯಾಪ್ತಿಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಇಂತಹ ಅಪಾಯಕಾರಿ ಪರಿಸ್ಥಿಯಲ್ಲಿ ಅವರ ಕುಟುಂಬದಿಂದ ದೂರ ಇರಿಸಿ.
ಅವರ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದಾದಂತಹ ಕರ್ತವ್ಯಕ್ಕೆ ನಿಯೋಜಿಸುವುದು ಅನಿವಾರ್ಯ.
ಯಾಕೆಂದರೆ ನಾವೆಲ್ಲರೂ ಇಲಾಖೆಗೆ ಸೇರುವಾಗ ಕರ್ತವ್ಯವನ್ನು ಸೇವೆಯಾಗಿ ನಿಭಾಯಿಸುತ್ತೆವೆಂದು ಪ್ರತಿಜ್ಞೆ ಮಾಡಿರುತ್ತೇವೆ.
ಈ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವುದರೊಂದಿಗೆ ತಮ್ಮ ಸುರಕ್ಷತೆಯತ್ತಲೂ ಗಮನ ಕೊಡುವುದು ಅತ್ಯಗತ್ಯವಾಗಿರುತ್ತದೆ.
ನಿಮಗೆ ಈಗಾಗಲೇ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಸ್ಯಾನಿಟರಿಗಳ ಬಳಕೆ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿ ವಿನಂತಿ.
ನಿಮ್ಮೊಂದಿಗೆ ನಿಮ್ಮ ಕುಟುಂಬದ ಸುರಕ್ಷತೆಯೂ ಮುಖ್ಯವಾಗಿರುವುದರಿಂದ ನೀವುಗಳು ಕರ್ತವ್ಯದ ಅವಧಿ ಮುಗಿದ ನಂತರ ಬಿಸಿನೀರಿನಲ್ಲಿ ಸ್ನಾನಮಾಡಿ ಶುಚಿಯಾದ ಬಳಿಕವೇ ಕುಟುಂಬದೊಂದಿಗೆ ಬೆರೆಯಿರಿ.
ನಿಮಗೆ ಅಥವಾ ನಿಮ್ಮ ಕುಟುಂಬಕ್ಕೆ ಯಾವುದೇ ರೀತಿಯ ತೊಂದರೆಯಾದಲ್ಲಿ ದಯವಿಟ್ಟು ನೇರವಾಗಿ ಸಂಪರ್ಕಿಸಿ.
ಸಾರ್ವಜನಿಕರು ಜೀವನಾವಶ್ಯಕ ವಸ್ತುಗಳ ಖರೀದಿಗಾಗಿ ದಿನಸಿ ಅಂಗಡಿ, ಮೆಡಿಕಲ್ ಶಾಪ್ ಮತ್ತಿತ್ತರೆಡೆ ಗುಂಪಾಗಿ ಸೇರುವುದನ್ನು ತಡೆದು ಅವರೆಲ್ಲರೂ ಸಾಮಾಜಿಕ ಅಂತರ (ಕನಿಷ್ಟ 1 ಮೀಟರ್) ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವುದು.
ಹಾಗೆಯೇ ಜೀವನಾವಶ್ಯಕ ವಸ್ತುಗಳ ಸಾಗಾಟ ಮತ್ತು ಪೂರೈಕೆಗೆ ಹೆಚ್ಚಿನ ಪ್ರಧಾನ್ಯತೆ ನೀಡಿ.
ಅಂತಹ ಸಾಗಾಣಿಕಾ ವಾಹನಗಳ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಯ ನಿಮಿತ್ತ ತೆರಳುವವರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿರುತ್ತದೆ.
ಉಳಿದಂತೆ ಮೆಡಿಕಲ್ ಸ್ಟೋರ್ ನ ಸಿಬ್ಬಂದಿಗಳು, ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರು, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಇತರೆ ಸರ್ಕಾರಿ ಇಲಾಖೆಯ ಸಿಬ್ಬಂದಿಗಳ ಗುರುತು ಚೀಟಿ/ಪಾಸ್ ಅಥವಾ ಅವರ ಕರ್ತವ್ಯ ಸ್ಥಳದ ಯಾವುದೇ ಪತ್ರಗಳನ್ನು ಪರಿಶೀಲಿಸಿ ಅವರ ಪ್ರಯಾಣಕ್ಕೆ ಸಹಕರಿಸಿ.
ಇದರೊಂದಿಗೆ ವಿನಾಕಾರಣ ಲಾಕ್ ಡೌನ್ ಉದ್ದೇಶವನ್ನು ಉಲ್ಲಂಘಿಸಿ ಉದ್ಧಟತನದಿಂದ ವರ್ತಿಸುವವರಿಗೆ ಕಡಿವಾಣ ಹಾಕುವುದೂ ಅತ್ಯಗತ್ಯವಾಗಿರುತ್ತದೆ. ಇದನ್ನು ನ್ಯಾಯಬದ್ದವಾಗಿ ಮಾಡುವುದು ನಮ್ಮ ಕರ್ತವ್ಯವಾಗಿದೆ.
21 ದಿನಗಳ ಲಾಕ್ ಡೌನ್ ದೀರ್ಘ ಅವಧಿಯಾಗಿರುವುದರಿಂದ ಜನರ ಜೀವನ ಕ್ರಮದ ಬದಲಾವಣೆಯಿಂದ ಮನೋಸ್ಥಿತಿ ಬದಲಾಗಿ ನಮ್ಮೊಂದಿಗೆ ಕೋಪದಿಂದ ವರ್ತಿಸುವ ಬಹಳಷ್ಟು ಸಂಗತಿ ಮುಂದಿನ ದಿನಗಳಲ್ಲಿ ಬರಬಹುದು.
ಅಂತಹ ಸಮಯದಲ್ಲಿ ತಾಳ್ಮೆಕಳೆದುಕೊಳ್ಳದೆ ವಿವೇಕ ಹಾಗೂ ಸಂಯಮದಿಂದ ಸಮಯೋಚಿತ ನಿರ್ಧಾರ ತೆಗೆದುಕೊಂಡು ಕರ್ತವ್ಯ ನಿರ್ವಹಿಸುವುದು ಅತೀ ಮುಖ್ಯವಾಗಿದೆ.
ನೆನಪಿರಲಿ ಬಲಪ್ರಯೋಗ ನಮ್ಮ ಕೊನೇಯ ಅಸ್ತ್ರವಾಗಿರಬೇಕು. ಜನರ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸುವುದು ನಮ್ಮ ಮೊದಲ ಯೋಜನೆಯಾಗಿರಬೇಕು.
ನಾವು ಕರ್ತವ್ಯ ನಿರ್ವಹಿಸುವ ವೇಳೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸಹಕಾರ ಪಡೆಯುದರೊಂದಿಗೆ ಸ್ಥಳೀಯ ನಾಯಕರನ್ನು, ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು,
ಅವರ ಮತ್ತು ಎಲ್ಲಾ ಜನರ ಸಹಕಾರದೊಂದಿಗೆ ಈ ಲಾಕ್ ಡೌನ್ ನ ಹಿಂದಿನ ಉದ್ದೇಶ ಸಫಲಗೊಳಿಸುವಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ.
ಕೊನೆಯದಾಗಿ ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ ನನ್ನ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯನಿಷ್ಟೆಗೂ ಹಾಗೂ ತ್ಯಾಗವನ್ನು ಅಭಿನಂದಿಸುತ್ತಾ ನಿಮ್ಮೆಲ್ಲರಿಗೂ ನನ್ನ ಸೆಲ್ಯೂಟ್… ಜೈ ಹಿಂದ್ – ಜೈ ಕರ್ನಾಟಕ…”
ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು
ಸದ್ಯ ಪೊಲೀಸ್ ಅಧೀಕ್ಷಕರು ಬರೆದಿರುವ ಈ ಪತ್ರದಲ್ಲಿ ಕೊರೊನಾ ವೈರಸ್ ಬಗ್ಗೆ ಬಹಳ ಜಾಗೃತರಾಗಿರುವಂತೆ ಕೋರಿದ್ದಾರೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.