ಬೈಕ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ; ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು..!
ಕಲಬುರಗಿ:ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ರಾವೂರ ಬಳಿ ನಡೆದಿದೆ.ರಾವೂರ ಗ್ರಾಮದ ನಿವಾಸಿ ಭೀಮಾಶಂಕರ ಸುಭಾಷ್ ಪ್ಯಾಟಿ (28), ಅಕ್ಬರ್ ಪಟೇಲ್ (26) ಹಾಗೂ 20 ವರ್ಷದ ಯುವತಿ ಮೃತಪಟ್ಟಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ.
ಮೃತ ಯುವಕರಿಬ್ಬರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಪಿ.ಎಸ್.ಐ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.