ಮಂಗಳೂರು : 2024-25 ನೇ ಸಾಲಿನ ಮಂಗಳೂರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ (ಕೆಸಿಸಿಐ) ನೂತನ ಅಧ್ಯಕ್ಷರಾಗಿ ಆನಂದ್ ಜಿ.ಪೈ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 27 ರಂದು ಶುಕ್ರವಾರ ನಡೆದ ಕೆಸಿಸಿಐನ 84 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.
ಭಾರತ್ ಗ್ರೂಪ್‌ನ ಕಾರ್ಯತಂತ್ರದ ಯೋಜನೆ ಮತ್ತು ವೈವಿಧ್ಯೀಕರಣದ ಉಸ್ತುವಾರಿ ವಹಿಸಿಕೊಂಡರು. ಇವರು ಯುಎಸ್‌ನ ಮಿಚಿಗನ್ ನಲ್ಲಿರುವ ಆಂಡ್ರ್ಯೂಸ್ ವಿಶ್ವವಿದ್ಯಾಲಯದಿಂದ ಇಂಡಸ್ಟ್ರಿಯಲ್ ಪ್ರೊಡಕ್ಷನ್ ಇಂಜಿನಿಯರ್ ಆಗಿ ಪದವಿ ಪಡೆದರು. ನಂತರ ಅದೇ ವಿಶ್ವವಿದ್ಯಾಲಯದಿಂದ ಸಾಫ್ಟ್‌ವೇರ್ ಇಂಜಿನಿಯರ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಉಪಾಧ್ಯಕ್ಷರಾಗಿ ಪಿ.ಬಿ.ಅಹ್ಮದ್ ಮುದಸ್ಸರ್, ಗೌರವ ಕೋಶಾಧಿಕಾರಿಯಾಗಿ ಅಬ್ದುರ್ ರಹಮಾನ್ ಮುಸ್ಬಾ , ಗೌರವ ಕಾರ್ಯದರ್ಶಿಯಾಗಿ ಅಶ್ವಿನ್ ಪೈ ಮಾರೂರ್, ಆದಿತ್ಯ ಪದ್ಮನಾಭ ಪೈ ಜೊತೆಗೆ 12 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.
ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿಬರುತ್ತಿದೆ. ಬಸ್ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.
ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.
ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.
ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃ*ತರು ಎಂದು ಗುರುತಿಸಲಾಗಿದೆ.
ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಡಿ*ಕ್ಕಿ ಹೊಡೆದಿದೆ.
ಈ ಸಂದರ್ಭ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರು ಮೃ*ತಪಟ್ಟಿದ್ದು, ಘಟನೆಯಲ್ಲಿ ರಿಕ್ಷಾದೊಳಗಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾ*ಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.