Connect with us

DAKSHINA KANNADA

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ : ನಳಿನ್ ಕುಮಾರ್ ಕಟೀಲ್..!

Published

on

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡಿದ ಆಶ್ವಾಸನೆಯಂತೆ ಜನರಿಗೆ ಅಕ್ಕಿ ನೀಡುತ್ತಿಲ್ಲ ಬದಲಾಗಿ ಕಾಂಗ್ರೆಸ್ ಅಕ್ಕಿ ವಿಚಾರದಲ್ಲಿ ರಾಜಕಾರಣದ ಮಾಡುವ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡಿದ ಆಶ್ವಾಸನೆಯಂತೆ ಜನರಿಗೆ ಅಕ್ಕಿ ನೀಡುತ್ತಿಲ್ಲ ಬದಲಾಗಿ ಕಾಂಗ್ರೆಸ್ ಅಕ್ಕಿ ವಿಚಾರದಲ್ಲಿ ರಾಜಕಾರಣದ ಮಾಡುವ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಕಾಂಗ್ರೆಸ್ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಸರಕಾರದ ಭರವಸೆಯಂತೆ ಜನರಿಗೆ ಅಕ್ಕಿ ಕೊಟ್ಟಿಲ್ಲ ಆದ್ದರಿಂದ ಇದರ ವಿರುದ್ದ ಬಿಜೆಪಿ ರಾಜ್ಯಾದ್ಯಂತ ಮಂಗಳವಾರ ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್ ಅಕ್ಕಿ ವಿಚಾರದಲ್ಲಿ ರಾಜಕಾರಣದ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಅವರು 2 ಲಕ್ಷ ಟನ್ ಅಕ್ಕಿ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರಕ್ಕೆ ನೀಡಿಲ್ಲ,

ಈ ಬಗ್ಗೆ ಪ್ರಧಾನಿ ಯವರಿಗೆ ಅಥವಾ ಆಹಾರ‌ ನಾಗರಿಕ ಸರಬರಾಜು ಸಚಿವರಿಗೆ ಕಾಂಗ್ರೆಸ್ ನಾಯಕರು ಮಾತನಾಡದೆ ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಗೋಬೆ ಕೂರಿಸುವ ಯತ್ನ ಮಾಡುತ್ತಿದೆ.

ಕೋವಿಡ್ ಸಂದರ್ಭದಲ್ಲಿ ದೇಶದ‌ ಜನರಿಗೆ 10 ಕೆಜಿ ಅಕ್ಕಿ ಪ್ರಧಾನಿ ನೀಡಿದ್ದಾರೆ. ದೇಶದ 84 ಕೋಟಿ ಜನರಿಗೆ ಪ್ರಧಾನಿ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ.

ಕಳೆದ 9 ವರ್ಷದಿಂದ 5 ಕೆ ಜಿ ಅಕ್ಕಿಯನ್ನು ಕೇಂದ್ರ ಸರಕಾರ ನೀಡುತ್ತಿದೆ ಇದರ ನಡುವೆ ಕಾಂಗ್ರೆಸ್ ಅಕ್ಕಿ ರಾಜಕಾರಣ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಸಂದರ್ಭದಲ್ಲಿ ಜನರಿಗೆ 10 ಕೆ ಜಿ ಅಕ್ಕಿ ನೀಡುತ್ತೇವೆ ಎಂದಿದ್ದರು.

ಅಕ್ಕಿ ವಿತರಿಸುತ್ತೆವೆ ಖಂಡಿತ ಎಂದು ಗ್ಯಾರಂಟಿ ಕಾಂಗ್ರೆಸ್ ನೀಡಿತ್ತು. ಈ ಹತ್ತು ಕೆ ಜಿ ಯಾರನ್ನು ನಂಬಿ ಹೇಳಿದ್ದೀರಿ ? ಈಗ ಜನರಿಗೆ ನಿಡಿದ ಭರವಸೆಯಂತೆ 10 ಕೆ ಜಿ ಅಕ್ಕಿ ನೀಡಬೇಕು ಮತ್ತು ಕೇಂದ್ರದಿಂದ ಬರುವ 5 ಕೆ ಜಿ ಸೇರಿಸಿ ಒಟ್ಟು 15 ಕೆ ಜಿ ಅಕ್ಕಿ ನೀಡಬೇಕು.

ಜನರಿಗೆ ಮೋಸ ವಂಚನೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.

ಗ್ಯಾರಂಟಿಗಳನ್ನು ಮುಂದಿಟ್ಟು ಚುನಾವಣೆ ಬಳಿಕ ಈಗ ಕಾಂಗ್ರೆಸ್ ಅಧಿಕಾರಕ್ಕೆ ಏರಿದೆ ಆದ್ರೆ ಈಗ ಗ್ಯಾರೆಂಟಿ ಗಳಿಗೆ ಮಾರ್ಗಸೂಚಿಗಳನ್ನು ತರುತ್ತಿದ್ದಾರೆ ಎಂದು ಆರೋಪಿಸಿದ ಕಟೀಲ್ ಅನುಭವಿ ರಾಜಕಾರಣಿ ಸಿದ್ದರಾಮಯ್ಯ ಈ ರೀತಿ ಮಾತಾಡುದು ಸರಿಯಲ್ಲವೆಂದ ಅವರು ಕಾಂಗ್ರೆಸ್ ಗೆ ನೈತಿಕತೆ ಮಾನ ಮರ್ಯಾದೆ ಇದ್ರೆ 10 ಕೆ ಜಿ ಅಕ್ಕಿ ನೀಡಬೇಕು.

ವಿದ್ಯುತ್ ಬಿಲ್ ಏರಿಕೆ ಮಾಡಿ ಗಾಯದ ಮೇಲೆ ಈಗಾಗಲೇ ಬರೆ ಎಳೆದಿದೆ ಇದರಿಂದ ಮದ್ಯಮ ವರ್ಗದ ಕುಟುಂಬ- ಉದ್ಯಮ‌ಗಳಿಗೆ ಭಾರೀ ಹೊಡೆತ ನೀಡಿದೆ.

ಉದ್ಯಮಿಗಳು ರಸ್ತೆಗಿಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇದು ರಾಜ್ಯದಲ್ಲಿ ಅರಾಜಕತೆ ತರಲಿದೆ ಮತ್ತು ಆರ್ಥಿಕ ಕುಸಿತದಿಂದ ರಾಜ್ಯ ಶ್ರೀಲಂಕಾ ಪಾಕಿಸ್ತಾನದ ಸ್ಥಿತಿಗೆ ತಲುಪಲಿದೆ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

bangalore

ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್‌ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!

Published

on

ಬೆಂಗಳೂರು:  ತುಳುನಾಡಿನ ದೈವರಾಧನೆಯನ್ನು ಇದೀಗ  ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.

 

Continue Reading

BANTWAL

Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ

Published

on

ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.

ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ  ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,  ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.

124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

LATEST NEWS

Trending