ಆ್ಯಂಕರ್ ಅನುಶ್ರೀ ವಿಚಾರಣೆ ಅಂತ್ಯ – ನಾನು ಯಾವುದೇ ಪಾರ್ಟಿ ಮಾಡಿಲ್ಲ..!
ಮಂಗಳೂರು: ಕೊನೆಗೂ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಸಿಸಿಬಿ ಪೊಲೀಸರ ಎದುರು ಆ್ಯಂಕರ್ ಕಂ ನಟಿ ಅನುಶ್ರೀ ಹಾಜರಾಗಿದ್ದಾರೆ.
ಅನುಶ್ರೀಯವರನ್ನು ಸತತ ಮೂರು ಗಂಟೆಗಳ ಕಾಲ ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶಿವಪ್ರಕಾಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅನುಶ್ರೀ, ಇಂದು ವಿಚಾರಣೆಗೆ ಬಂದು ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ.
ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ. ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ.
ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ. ಅವರ ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಮಾಡಿಕೊಟ್ಟಿದ್ದೆ. ಅದು ಬಿಟ್ಟರೆ ಅವರ ಪರಿಚಯ ನನಗೆ ಅಷ್ಟೇನೂ ಇಲ್ಲ ಎಂದು ತಿಳಿಸಿದ್ದಾರೆ.
ನಾನು ಅವರೊಟ್ಟಿಗೆ ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ಅನುಶ್ರೀ ಸ್ಪಷ್ಟ ಪಡಿಸಿದರು.
ಡ್ರಗ್ಸ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದು ಇದೇ ವೇಳೆ ತಿಳಿಸಿದರು.