Connect with us

DAKSHINA KANNADA

ದಕ್ಷಿಣ ಕನ್ನಡದ ಕಲ್ಲೆಂಬಿಯಲ್ಲಿ ಮೆಗಾಲಿಥಿಕ್ ಕಾಲದ ಪ್ರಾಚೀನ ಗುಹೆ ಪತ್ತೆ..!

Published

on

ಸುಳ್ಯ: ದಕ್ಷಿಣ ಕನ್ನಡದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಕೃಷಿ ಉದ್ದೇಶಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವಾಗ ಪುರಾತನ ಗುಹೆಯೊಂದು ಪತ್ತೆಯಾಗಿದೆ.


ಗುಹೆಯನ್ನು ಸಂಶೋಧಿಸಿದಾಗ ಮಣ್ಣಿನ ಮಡಿಕೆಗಳು ಮತ್ತು ಕುಂಬಾರಿಕೆಗಳ ತುಣುಕುಗಳು ಸೇರಿದಂತೆ ಮತ್ತಿತರ ವಸ್ತು-ಮ ಪದಾರ್ಥಗಳು ದೊರೆತಿವೆ.

ಪುರಾತತ್ವ ವಸ್ತುಗಳ ಸಂಶೋಧಕ ಹಾಗೂ ಮುಲ್ಕಿ ಸುಂದರರಾಮ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಪ್ರಾಧ್ಯಾಪಕರಾದ ಪ್ರೋ.ಟಿ.ಮುರುಗೇಶಿ ಪ್ರಕಾರ ಕಬ್ಬಿಣದ ಯುಗ ಅಥವಾ ಮೆಗಾಲಿಥಿಕ್ ಕಾಲದ ಗುಹೆಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಹಿಂದೆ ಮೂಡುಬಿದಿರೆಯ ಸಮೀಪದ ಮೂಡು ಕೊಣಾಜೆಯಲ್ಲಿ ಮತ್ತು ಕೊಡಗಿನ ಹೆಗ್ಗಡೆಹಳ್ಳಿ ಹಾಗೂ ಸಿದ್ದಲಿಂಗಪುರದ ಸಮಾಧಿಯಲ್ಲಿ ಪತ್ತೆಯಾದ ಮಡಿಕೆಗಳನ್ನು ಇದು ಹೋಲುತ್ತವೆ.

ಜೊತೆಗೆ, ಅವುಗಳ ನಿರ್ಮಾಣ ಶೈಲಿಯು ಕೇರಳದ ಮೆಗಾಲಿಥಿಕ್ ಸಮಾಧಿಗಳಿಗೆ ಹೆಚ್ಚು ಹೋಲುತ್ತಿದೆ ಎಂದು ಶಂಶೋಧಕರು ಮಾಹಿತಿ ನೀಡಿದ್ದಾರೆ.

ಮೆಗಾಲಿಥಿಕ್ ಎಂದರೆ ದೊಡ್ಡ ಕಲ್ಲುಗಳಿಂದ ಮಾಡಿದ ಅಥವಾ ಕಲ್ಲು ಹೊಂದಿರುವ ಇತಿಹಾಸಪೂರ್ವ ಸ್ಮಾರಕಗಳಿಗೆ ಸಂಬಂಧಿಸಿದ ದೊಡ್ಡ ಕಲ್ಲುಗಳಿಂದ ಅಥವಾ ಬೃಹತ್ ಏಕಶಿಲೆಯಲ್ಲಿ ನಿರ್ಮಾಣವಾಗಿರುವ ನಿರ್ಮಾಣಗಳಿಗೆ ಮೆಗಾಲಿಥಿಕ್ ಅಥವಾ ಬೃಹತ್ ಶೀಲಾಯುಗ ಎನ್ನಲಾಗುತ್ತದೆ.

ಆದರೆ ಕೇರಳದ ಸಮಾಧಿಗಳ ಸಾಮಾನ್ಯ ಲಕ್ಷಣವಾಗಿರುವ ಮೇಲ್ಭಾಗದ ತೆರೆಯುವಿಕೆಯೊಂದಿಗೆ ಪಾರ್ಶ್ವ ತೆರೆಯುವಿಕೆ ಮತ್ತು ಭೂಗತ ಮಾರ್ಗವನ್ನು ಇಲ್ಲಿ ಪತ್ತೆಹಚ್ಚಲಾಗಿಲ್ಲ.

ಕೆಂಪು ಮಡಿಕೆಗಳ ಮೇಲ್ಮೈಯಲ್ಲಿ ಕಂಡು ಬರುವ ಸಿಪ್ಪೆಯ ಸಣ್ಣ ಕಣಗಳು, ಬಹುಶಃ ರಾಗಿಯ ಕಣಗಳಂತೆ ಇದ್ದು ಎಚ್ಚರಿಕೆಯಿಂದ ಸಂಗ್ರಹಿಸಲಾಗಿದೆ ಮತ್ತು ಹೆಚ್ಚಿನ ಅಧ್ಯಯನಕ್ಕಾಗಿ ಅವುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು.

ಮತ್ತು ಇದಕ್ಕೆ ಇನ್ನು ಹೆಚ್ಚಿನ ಸಂಶೋಧನೆ ಅಗತ್ಯವಿದೆ ಪ್ರೋ.ಟಿ.ಮುರುಗೇಶಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending