LATEST NEWS
ಮಗನ ರಾಜಕೀಯ ಪಕ್ಷ ಬಿಟ್ಟು ಮಗಳ ಪಾರ್ಟಿ ಸೇರಿದ ತಾಯಿ..!
ಗುಂಟೂರು: ಮಗನ ರಾಜಕೀಯ ಪಕ್ಷ ಬಿಟ್ಟು ತಾಯಿ ಮಗಳ ರಾಜಕೀಯ ಪಕ್ಷ ಸೇರಿದ ಅಪರೂಪದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವೈಆರ್ಎಸ್ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ವೈ.ಎಸ್.ವಿಜಯಮ್ಮ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ತಾಯಿ ಆಗಿರುವ ವಿಜಯಮ್ಮ,
ನನ್ನಿಂದ ಯಾರಿಗೂ ಯಾವುದೇ ಅಭ್ಯಂತರ ಉಂಟಾಗಬಾರದು ಎಂದು ನಾನು ರಾಜೀನಾಮೆ ನೀಡುವ ನಿರ್ಣಯ ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ.
ದಿ.ವೈ.ಎಸ್.ರಾಜಶೇಖರ ರೆಡ್ಡಿ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ನಾನು ತೆಲಂಗಾಣದಲ್ಲಿ ಹೊಸ ಪಕ್ಷದ ಪರವಾಗಿ ನಿಲ್ಲುವ ಅವಶ್ಯಕತೆ ಇದೆ.
ಇಂದು ಜಗನ್ ಮತ್ತು ಶರ್ಮಿಳಾ ಬೇರೆ – ಬೇರೆ ಪಕ್ಷಗಳು ಮತ್ತು ರಾಜ್ಯಗಳನ್ನು ಪ್ರತಿನಿಧಿಸುವ ಅನಿರ್ವಾಯತೆ ಯಾಕೆ ಬಂದಿದೆ ಆ ದೇವರಿಗೆ ಗೊತ್ತು.
ಕಷ್ಟದಲ್ಲಿದ್ದಾಗ ನಾನು ಜಗನ್ ಜೊತೆಗಿದ್ದೆ, ಸಂತೋಷವಾಗಿದ್ದಲೂ ನಾನು ಆತನ ಜೊತೆಗಿದ್ದರೆ ನನ್ನ ಮಗಳು ಶರ್ಮಿಳಾಗೆ ಅನ್ಯಾಯ ಮಾಡುತ್ತಿದ್ದೇನೆ ಎಂದು ನನ್ನ ಮನಸಾಕ್ಷಿ ಹೇಳುತ್ತಿದೆ ಎಂದು ವಿಜಯಮ್ಮ ಹೇಳಿದ್ದಾರೆ.
ಮಗಳಿಗೆ ಬೆಂಬಲ
ಜಗನ್ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟಿದ್ದಾರೆ. ಶರ್ಮಿಳಾ ಅವರ ಈ ನಿರ್ಧಾರವನ್ನು ಬೆಂಬಲಿಸಿ ತಾಯಿ ವಿಜಯಮ್ಮ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
LATEST NEWS
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM7 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!