Connect with us

LATEST NEWS

ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾ*ವು

Published

on

ಹೈದರಬಾದ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, 35 ಮಂದಿ ಸಾ*ವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 19 ಜನರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದ ಪ್ರಕೋಪಕ್ಕೆ 16 ಜನರು ಸಾ*ವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳನ್ನು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. 3.5 ಲಕ್ಷಕ್ಕೂ ಅಧಿಕ ಜನರಿಗೆ ಆಹಾರ ಪೊಟ್ಟಣಗಳು, ಕುಡಿಯುವ ನೀರು ವಿತರಿಸಲಾಗಿದೆ.

ಅದಿಲಾಬಾದ್, ಮಂಚೇರಿಯಲ್, ಖಮ್ಮಂ, ಸೂರ್ಯಪೇಟ್, ಕೊಮಾರಂ ಭೀಮ್ ಆಸಿಫಾಬಾದ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲಪಲ್ಲಿ, ಮುಲುಗು, ಭದ್ರಾದ್ರಿ ಕೊತಗುಡೆಂ, ಮತ್ತು ಮಹಬೂಬಾಬಾದ್ ಸೇರಿದಂತೆ ತೆಲಂಗಾಣದ 10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಕುರಿತು ಹವಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಸಂಭವಿಸಿದ ಪ್ರವಾಹವನ್ನು ಅದರಲ್ಲೂ ವಿಶೇಷವಾಗಿ ವಿಜಯವಾಡದಲ್ಲಿ ಅವಘಡ ರಾಜ್ಯ ಕಂಡ “ದೊಡ್ಡ ದುರಂತ” ಎಂದು ಕರೆದಿದ್ದಾರೆ. ಸದ್ಯ ಎನ್‌ಟಿಆರ್ ಜಿಲ್ಲೆಯ ಕಲೆಕ್ಟರೇಟ್‌ನಲ್ಲಿ ತಂಗಿರುವ ಅವರು ಆಂಧ್ರಪ್ರದೇಶದ ಪ್ರವಾಹವನ್ನು ನೈಸರ್ಗಿಕ ವಿಕೋಪ ಎಂದು ಘೋಷಿಸಲು ಕೇಂದ್ರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದಾಗಿ ಇದುವರೆಗೆ 5,000 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ. ಕೇಂದ್ರದಿಂದ 2,000 ಕೋಟಿ ರೂಪಾಯಿಗಳ ತಕ್ಷಣದ ಪರಿಹಾರ ನೆರವು ಕೋರಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

BIG BOSS

ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

Published

on

ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

Continue Reading

DAKSHINA KANNADA

ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

Published

on

ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

ಪ್ರಶಸ್ತಿ ವಿವರ :

ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

Continue Reading

LATEST NEWS

ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

Published

on

ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

Continue Reading

LATEST NEWS

Trending

Exit mobile version