Connect with us

LATEST NEWS

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿಗೆ ಒಪ್ಪಿಸಿ – ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ತಾಯಿ

Published

on

ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.


ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ ಎಂದಾಗ ಅನಿಶಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅನಿಶಾ ಸಾವಿನ ತನಿಖೆ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.


ಈಗಾಗಲೇ ಈ ಪ್ರಕರಣ ಪ್ರಮುಖ ಆರೋಪಿ ಚೇತನ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಅನಿಶಾ ಪೂಜಾರಿಯ ಸಾವಿಗೆ ಸಂಬಂಧಿಸಿದಂತೆ ದೊರಕಿರುವ ಸಾಕ್ಷ್ಯ ಮತ್ತು ದೃಶ್ಯ ಚಿತ್ರದಿಂದ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕುಟುಂಬಸ್ಥರು ಭಾವಿಸಿದ್ದರು. ಇದೀಗ ಅನಿಶಾ ಪೂಜಾರಿ ಸಾವಿನ ಕುರಿತು ಬಹಳಷ್ಟು ಸಂಶಯ ಮೂಡಿ ಬಂದಿರುವುದರಿಂದ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ. ಹೀಗಾಗಿ ಹೈ ಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.


ಎಂಬಿಎ ಉತ್ತೀರ್ಣಳಾಗಿದ್ದ ಅನಿಶಾ ಪೂಜಾರಿ ಪ್ರೀತಿ ವಿಚಾರದಲ್ಲಿ ಸೋತಿದ್ದಳು. ಪ್ರಾಣ ಅರ್ಪಣೆ ಮಾಡಿದ್ದಳು. ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಚೇತನ್ ಶೆಟ್ಟಿಗೆ ಶಿಕ್ಷೆಯಾಗಬೇಕು ಎಂದು ಆಕೆಯ ಕುಟುಂಬ ಕಣ್ಣೀರಿಡುತ್ತಿದೆ. ಇದೀಗ ತನಿಖೆ ವಿಳಂಬ ಹಿನ್ನೆಲೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಕುಟುಂಬಸ್ಥರು ರಿಟ್ ಸಲ್ಲಿಸಿದ್ದಾರೆ.

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

bangalore

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇ*ನ್ನಿಲ್ಲ

Published

on

ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ.

ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃ*ತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ

ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿ*ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂ*ತ್ಯಕ್ರಿಯೆ ನಡೆಯಲಿದೆ.

 

Continue Reading

DAKSHINA KANNADA

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

Published

on

ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

 

ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Continue Reading

LATEST NEWS

Trending

Exit mobile version