Connect with us

    LATEST NEWS

    ಅಂಕೋಲಾ ಗುಡ್ಡ ಕುಸಿತ ದುರಂ*ತ : ಲಾರಿ ಚಾಲಕನ ಮೊಬೈಲ್ ಸ್ವಿಚ್ ಆನ್; ಯಜಮಾನನಿಗಾಗಿ ಕಾಯುತ್ತಿದೆ ನಾಯಿ!

    Published

    on

    ಮಂಗಳೂರು/ ಅಂಕೋಲಾ : ಇಡೀ ರಾಜ್ಯವನ್ನೇ ಮನಕಲಕುವ ಘಟನೆ ಅಂಕೋಲಾದಲ್ಲಿ ನಡೆದಿದೆ. ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಲ್ಲಿ ಅನೇಕ ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಮೃ*ತದೇಹಗಳನ್ನು ಪತ್ತೆ ಮಾಡುವುದೇ ಸಾಹಸವಾಗಿದೆ. 5 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಕಠಿಣ ಭೂ ಪ್ರದೇಶ ಮತ್ತು ಭಾರಿ ಮಳೆ ರಕ್ಷಣಾ ತಂಡಕ್ಕೆ ಸವಾಲೆಸೆದಿದೆ.


    ರಾಷ್ಟ್ರೀಯ ಹೆದ್ದಾರಿ 66ನ್ನು ತೆರವುಗೊಳಿಸುವ ಮತ್ತು ಕಾಣೆಯಾದವರ ಹುಡುಕಾಟದ ಕೆಲಸ ಮುಂದುವರೆದಿದೆ. ದುರ್ಗಮ ಪ್ರದೇಶ, ಪ್ರತಿಕೂಲ ಹವಾಮಾನ, ಗಂಗಾವಳಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಹೆಚ್ಚಿನ ಭೂಕುಸಿತದ ಸಾಧ್ಯತೆಯನ್ನು ಪರಿಗಣಿಸಿ, ಜಿಲ್ಲಾಡಳಿತವು ಭಾರತೀಯ ಕಡಲ ರಕ್ಷಣಾ ಪಡೆ ಸಹಾಯ ಕೋರಿ ಶುಕ್ರವಾರ ಪತ್ರ ಬರೆದಿದೆ.

    ಲಾರಿ ಚಾಲಕನಿಗಾಗಿ ಶೋಧ :


    ಗುಡ್ಡ ಕುಸಿತದಲ್ಲಿ ಸಿಲುಕಿರುವ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಂಜ್ ಲಾರಿ ಮತ್ತು ಚಾಲಕ ಅರ್ಜುನ್ ಗುಡ್ಡ ಕುಸಿತದಿಂದ ಕಣ್ಮರೆಯಾಗಿದ್ದಾರೆ. ಸದ್ಯ, ರಾಡಾರ್ ಮೂಲಕ ಲಾರಿ ಇರುವ ಜಾಗ ಪತ್ತೆ ಮಾಡಲಾಗಿದ್ದು, ಅಲ್ಲಿ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ.  ಅರ್ಜುನ್ ಮೊಬೈಲ್ ಸ್ವಿಚ್ ಆನ್ ಆಗೇ ಇದ್ದು, ರಿಂಗಣಿಸುತ್ತಿದೆ. ಹೀಗಾಗಿ ಆತ ಬದುಕಿದ್ದಾನೆ ಎಂಬ ಭರವಸೆ ಮನೆಯವರದ್ದು. ಎನ್ ಡಿ ಆರ್ ಎಫ್, ನೇವಿ ಮೊದಲಾದ ರಕ್ಷಣಾ ಪಡೆಗಳು ಬಿರುಸು ಕಾರ್ಯಾಚರಣೆ ನಡೆಸುತ್ತಿವೆ. ಇದೀಗ ಮಿಲಿಟರಿ ಪಡೆಯನ್ನೂ ಕರೆಸಲಾಗಿದೆ. ಶತಪ್ರಯತ್ನ ನಡೆಸಿ ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಪಣ ತೊಟ್ಟಿದೆ.

    ಮಾಲಕನಿಗಾಗಿ ಕಾಯುತ್ತಿದೆ ನಾಯಿ :

    ಶಿರೂರಿನಲ್ಲಿ ನಡೆದ ಈ ದುರಂತದಲ್ಲಿ ಮಣ್ಣಿನಡಿ ಯಾರು ಸಿಲುಕಿದ್ದಾರೆ? ಎಷ್ಟು ಮಂದಿ ಸಿಲುಕಿದ್ದಾರೆ? ಯಾವುದೂ ಗೊತ್ತಿಲ್ಲ. ಅಲ್ಲಿ ಟೀ ಅಂಗಡಿ ಇತ್ತು. ಅದರ ಮಾಲಕ ಲಕ್ಷ್ಮಣ ನಾಯ್ಕ್​, ಪತ್ನಿ ಶಾಂತಿ, ಪುತ್ರ ರೋಷನ್, ಟ್ರಕ್​ ಚಾಲಕನ ಮೃತದೇಹ ಸಿಕ್ಕಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಸಾಕು ನಾಯಿಯೊಂದು ಮಾಲಕನಿಗೆ ಕಾಯುತ್ತಿರುವ ದೃಶ್ಯ ಎಂತಹ ಹೆಬ್ಬಂಡೆ ಹೃದಯವನ್ನೂ ಕರಗಿಸುವಂತಿದೆ.


    ಹೌದು, ಪ್ರಾಣಿಗಳೇ ಹಾಗೇ ತನ್ನ ಹೊಟ್ಟೆ ಪೊರೆದವನ ಮರೆಯುವುದಿಲ್ಲ. ಅದರಲ್ಲೂ ನಾಯಿಯ ನಿಯತ್ತಿನ ಬಗ್ಗೆ ಹೇಳಬೇಕಿಲ್ಲ. ಇಲ್ಲೂ ನಾಯಿ ತನ್ನೊಡೆಯನ ಬರುವಿಕೆಗೆ ಕಾದು ಅತ್ತಿಂದಿತ್ತ ಅಲೆಯುತ್ತಿದೆ. ಮನೆ ಮಂದಿ ಎಲ್ಲಿ ಹೋದರೆಂಬ ತೊಳಲಾಟ ಆ ನಾಯಿಯ ನಡಿಗೆಯಲ್ಲಿ ಕಾಣಬಹುದು. ಈ ದೃಶ್ಯ ನೋಡುತ್ತಿದ್ದರಂತೂ, ಛೆ! ದುರ್ವಿಧಿಯೇ! ಎಂದು ಕಣ್ಣಂಚು ನೆನೆವಂತೆ ಮಾಡುತ್ತದೆ.

    ಇದನ್ನೂ ಓದಿ : ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
    ಮುಂದುವರಿದ ಗುಡ್ಡ ತೆರವು ಕಾರ್ಯಾಚರಣೆ:


    ಈ ಮಹಾದುರಂ*ತದಲ್ಲಿ 500 ಮೀಟರ್ ದೂರದಲ್ಲಿರುವ ಮನೆಗಳಿಗೂ ಹಾನಿಯಾಗಿದೆ. ಎರಡು ಮನೆಗಳು ನೆಲದಲ್ಲಿ ಹೂತು ಹೋಗಿವೆ. ಓರ್ವ ವೃದ್ಧೆ ಇಹಲೋಕ ತ್ಯಜಿಸಿದ್ದು, ಮನೆಯಲ್ಲಿದ್ದ 6 ಮಂದಿ ಪಾರಾಗಿದ್ದಾರೆ. ಇನ್ನು ಗುಡ್ಡ ಕುಸಿತ ತೆರವು ಕಾರ್ಯಾಚರಣೆ ದೊಡ್ಡ ಸವಾಲಾಗಿದೆ. ಅರ್ಧದಷ್ಟು ಮಣ್ಣು ರಸ್ತೆಗೆ ಬಿದ್ದಿದೆ. ಇನ್ನರ್ಧದಷ್ಟು ಮಣ್ಣು, ಬಂಡೆ ನದಿಗೆ ಬಿದ್ದಿದೆ. ಗಂಗಾವಳಿಯ ಅಬ್ಬರ ಜೋರಾಗಿದ್ದು, ನದಿಗೆ ಬಿದ್ದಿರುವ ಮಣ್ಣಲ್ಲಿ ಕೆಲವರು ಸಿಲುಕಿರುವ ಶಂಕೆ ಇದೆ. ನೀರಲ್ಲಿ ಕೊಚ್ಚಿ ಹೋಗಿರಲೂಬಹುದಾದ ಅನುಮಾನವೂ ಇದೆ.

    4 Comments

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending