Connect with us

LATEST NEWS

ಕಾರ್ಕಳ: ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ-ಪ್ರಕರಣ ದಾಖಲು

Published

on

ಉಡುಪಿ: ಅನ್ನಭಾಗ್ಯದ ಪಡಿತರವನ್ನು ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಕಾರ್ಕಳ ತಾಲೂಕು ಆಹಾರ ನಿರೀಕ್ಷಕರು ದಾಳಿ ನಡೆಸಿ ವಶಪಡಿಸಿಕೊಂಡು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಜೂ.1ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಕಣಜಾರಿನಿಂದ ಕಣಜಾರು ಪೇಟೆ ಕಡೆಗೆ ಟಾಟಾ ಏಸ್ ಟೆಂಪೋದಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿರುವುದಾಗಿ ಆಹಾರ ನಿರೀಕ್ಷಕರಿಗೆ ಮಾಹಿತಿ ಬಂದಿದೆ.

ಈ ಬಗ್ಗೆ ಸ್ಥಳಕ್ಕೆ ಸ್ಥಳೀಯ ಗ್ರಾಮ ಲೆಕ್ಕಿಗ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಹಿರಿಯಡ್ಕ ಪೊಲೀಸ್‌ ಸಿಬ್ಬಂದಿ ಜೊತೆ ಹೋಗಿ ದಾಳಿ ನಡೆಸಿದ್ದಾರೆ.

ಆಗ ಟಾಟಾ ಏಸ್ ವಾಹನ ಪರೀಶಿಲಿಸಿದಾಗ ಬಿಳಿ ಪಾಲಿಥಿನ್ ಚೀಲ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ತುಂಬಿಸಿರುವುದು ಕಂಡು ಬಂದಿದ್ದು, ವಾಹನದ ಚಾಲಕ ಮೊಹಮ್ಮದ್ ಅಬ್ದುಲ್ ರಹಿಮಾನ್‌ನಲ್ಲಿ ಅಕ್ಕಿ ಸಾಗಾಟ ಮಾಡುವ ಪರವಾನಿಗೆ ಬಗ್ಗೆ ವಿಚಾರಿಸಿದಾಗ ಪರವಾನಿಗೆ ಇಲ್ಲವೆಂದು ತಿಳಿಸಿದ್ದು,

ಬಳಿಕ ಟೆಂಪೋದಲ್ಲಿದ್ದ ಅಕ್ಕಿ ಚೀಲಗಳನ್ನು ಪರಿಶೀಲಿಸಿದಾಗ 07 ಗೋಣಿ ಚೀಲಗಳಲ್ಲಿ ಹಾಗೂ 34 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು1184.100 ಕೆಜಿ. ಕುಚ್ಚಿಗೆ ಅಕ್ಕಿ 260.600 ಕೆ ಜಿ ಬೆಳ್ತಿಗೆ ಅಕ್ಕಿ, ಒಟ್ಟು 41 ಚೀಲಗಳಲ್ಲಿ 1444.700 ಕೆಜಿ ತೂಕದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ಕಂಡುಬಂದಿದೆ. ಅಕ್ಕಿಯ ಒಟ್ಟು ಮೌಲ್ಯ 31 ಸಾವಿರ ರೂಪಾಯಿ ಆಗಿರುತ್ತದೆ.

ವಾಹನದಲ್ಲಿದ ಒಟ್ಟು 41 ಚೀಲ ಅಕ್ಕಿ, ಟಾಟಾ ಏಸ್ ವಾಹನ, ಬ್ಯಾಟರಿ ಚಾಲಿತ ಮಾಪನ ಹಾಗೂ ವಾಹನದಲ್ಲಿದ್ದ ಖಾಲಿ 6 ಗೋಣಿ ಚೀಲಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

FILM

ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?

Published

on

ಮಂಗಳೂರು/ಮುಂಬೈ : ಸೈಫ್ ಅಲಿ ಖಾನ್ ಮೇಲೆ ನಡೆದ ಚೂ*ರಿ ಇ*ರಿತ ಪ್ರಕರಣ ಇಡೀ ಬಾಲಿವುಡನ್ನೇ ಬೆಚ್ಚಿ ಬೀಳಿಸಿದೆ. ಆರು ಕಡೆಗಳಿಗೆ  ಚೂ*ರಿ ಇರಿ*ತಕ್ಕೊಳಗಾಗಿ ತೀ*ವ್ರ ರ*ಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ  ಪ್ರಾ*ಣಾಪಾಯದಿಂದ ಅವರು ಪಾರಾಗಿದ್ದಾರೆ.  ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.

ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್?

ಸದ್ಯ ಈ ಪ್ರಕರಣ ಹಲವು ಅನುಮಾನ ಹುಟ್ಟು ಹಾಕಿದೆ. ಏನೇನೋ  ವದಂತಿಗಳು ಹರಿದಾಡುತ್ತಿವೆ.  ಈ ನಡುವೆ ಗಮನಕ್ಕೆ ಬಂದ ಮತ್ತೊಂದು ವಿಚಾರವಂದ್ರೆ ಅದು ಸೈಫ್ ಆಸ್ಪತ್ರೆ ಸೇರಿದ್ದು ಹೇಗೆ ಎಂಬುದು.

ಹೇಳಿ ಕೇಳಿ ಸಿನಿಮಾ ನಟ. ಅದರಲ್ಲೂ ಶ್ರೀಮಂತ ಮನೆತನದ ನಟ. ಭವ್ಯವಾದ ಮನೆ, ಆಳು ಕಾಳು ಇದ್ದಾರೆ.  ಸಿನಿಮಾ ಮಂದಿಗೆ ಕಾರಿನ ಕ್ರೇಜ್ ಇದ್ದೇ ಇದೆ. ಸೈಫ್ ಬಳಿಯೂ ಕೋಟಿಗಟ್ಟಲೆ ಬೆಲೆ ಬಾಳುವ ಕಾರುಗಳಿವೆ. ಆದ್ರೆ, ಹ*ಲ್ಲೆಗೊಳಗಾದ ವೇಳೆ ಅವರು ಆಟೋದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.

ಸದ್ಯ ವೀಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಆಟೋ ಹಾಗೂ ಅದರ ಪಕ್ಕದಲ್ಲಿ ಕರೀನಾ ಕಪೂರ್ ನಿಂತಿರೋದನ್ನು ಕಾಣಬಹುದಾಗಿದೆ.  ವರದಿಗಳ ಪ್ರಕಾರ, ಸೈಫ್ ಅಲಿ ಖಾನ್ ದಾ*ಳಿಗೊಳಗಾದಾಗ ಕಾರು ರೆಡಿ ಇರಲಿಲ್ಲ. ತೀವ್ರ ರ*ಕ್ತಸ್ರಾವದಿಂದ ಪರದಾಡುತ್ತಿದ್ದಾಗ ಆಟೋ ಹಿಡಿದು ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.

ಸೈಫ್ ಹಿರಿಯ ಪುತ್ರ ಇಬ್ರಾಹಿಂ  ಸೈಫ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದು, ಕಾರಿನಲ್ಲಿ ಹೋದ್ರೆ ಹೆಚ್ಚು ಸಮಯವಾಗುತ್ತೆ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿತ್ತು ಎಂದೂ ಹೇಳಲಾಗಿದೆ.

ಸೈಫ್ ಔಟ್ ಆಫ್ ಡೇಂ*ಜರ್ :

ಸದ್ಯ ಲೀಲಾವತಿ ಆಸ್ಪತ್ರೆಯಲ್ಲಿ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಖಾನ್ ಅವರ ದೇಹಕ್ಕೆ 6 ಬಾರಿ ಇರಿಯಲಾಗಿದೆ. ಎರಡು ಕಡೆ ಆಳವಾದ ಗಾ*ಯಗಳಾಗಿದ್ದು, ತುರ್ತು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಜೀ*ವಕ್ಕೆ ಯಾವುದೇ ಅ*ಪಾಯವಿಲ್ಲ.

ಇದನ್ನೂ ಓದಿ : ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ

ಬೆನ್ನು ಮೂಳೆಯಿಂದ ಚಾ*ಕುವಿನ ತುದಿಯನ್ನು ಹೊರತೆಗೆಯಲಾಗಿದೆ. ಖಾನ್ ಆರೋಗ್ಯ ಸ್ಥಿರವಾಗಿದೆ. ನಾಳೆ ಬೆಳಿಗ್ಗೆ ಐಸಿಯುವಿನಿಂದ ಹೊರತರುತ್ತೇವೆ ಎಂದು ಆಸ್ಪತ್ರೆಯ ವೈದ್ಯ ನಿತಿನ್ ಡಾಂಗೆ ಮಾಹಿತಿ ನೀಡಿದ್ದಾರೆ.

 

 

 

Continue Reading

LATEST NEWS

2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ

Published

on

ಮಂಗಳೂರು/ಚಿಕ್ಕಮಗಳೂರು: ಮಗು ಹುಟ್ಟಿದ ಎರಡನೇ ದಿನವೇ ಹೆತ್ತ ತಾಯಿ ಕಾಫಿ ತೋಟದಲ್ಲಿ ಕಂದಮ್ಮನನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.


ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಚಂದ್ರಮ್ಮ ಎಂಬುವವರು ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಪಾಪುವನ್ನು ಬಿಟ್ಟು ಹೋಗಿದ್ದು, ಇಂದು (ಜ.16) ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಸ್ಥಳೀಯ ಮಹಿಳೆಯೊಬ್ಬಳಿಗೆ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತೋಟಕ್ಕೆ ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.

 

ಇದನ್ನೂ ಓದಿ : ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?

 

ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.

Continue Reading

LATEST NEWS

ಬಾಂಬೆ ಐಐಟಿಯ ಅಭಯ್ ಸಿಂಗ್ ನಾಗಸಾಧು ಆಗಿದ್ದು ಹೇಗೆ ?

Published

on

ಮಂಗಳೂರು/ಪ್ರಯಾಗ್‌ರಾಜ್ : ಮಕರ ಸಂಕ್ರಾಂತಿ ಹಬ್ಬದ ದಿನದಂದು ಮಹಾಕುಂಭ ಮೇಳದಲ್ಲಿ ಕೋಟಿಗಟ್ಟಲೆ ಭಾರತೀಯರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.

ಈಗಗಾಲೇ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ 40 ಕೋಟಿ ಜನರು ಭಾಗವಹಿಸಿದರೂ ಪ್ರಮುಖ ಆಕರ್ಷಣೆ ಮಾತ್ರ ನಾಗಸಾಧುಗಳು. ಆಧ್ಯತ್ಮಿಕತೆಯ ಒಲವನ್ನು ಹೊಂದಿರುವ ಹಲವಾರು ನಾಗಸಾಧುಗಳು ಈ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಇವರಲ್ಲಿ ಇಂಜಿನಿಯರ್ ಕೆಲಸಕ್ಕೆ ಗುಡ್‌ಬೈ ಹೇಳಿದ ಬಾಬಾ ಕೂಡ ಒಬ್ಬರಾಗಿದ್ದಾರೆ.

ಐಐಟಿ ಬಾಂಬೆಯಲ್ಲಿ ಕಲಿತ ಬಾಬಾ ಅಭಯ್ ಸಿಂಗ್ ಅವರು ಮೂಲತ: ಹರಿಯಾಣದವರು. ವೈಜ್ಞಾನಿಕ ಅನ್ವೇಷಣೆಗಳನ್ನು ತೊರೆದು ಆಧ್ಯಾತ್ಮಿಕದತ್ತ ವಾಲಿದ್ದಾರೆ. ಅಂದರೆ ವಿಜ್ಞಾನದಿಂದ ಆಧ್ಯಾತ್ಮಿಕತೆಗೆ ವಾಲಿದ್ದಾರೆ. ಇವರು ಏರೋಸ್ಪೇಸ್ ಇಂಜಿನಿಯರ್ ಮುಖ್ಯಸ್ಥರಾಗಿದ್ದರು. ಇವರನ್ನು ಇಂಜಿನಿಯರ್ ಬಾಬಾ ಎಂತಲೂ ಕರೆಯುತ್ತಾರೆ. ಪ್ರತಿಷ್ಠಿತ ಕಂಪನಿಯ ಉದ್ಯೋಗವನ್ನು ತೊರೆದು ಆಧ್ಯಾತ್ಮಿಕತೆ ಕಡೆಗೆ ಒಲವು ಹರಿಸಿ ಈಗ ಬಾಬಾ ಆಗಿದ್ದಾರೆ.

ಇದನ್ನೂ ಓದಿ: ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?

ಅಭಯ್ ಸಿಂಗ್ ಅವರು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಬಾಂಬೆ (ಐಐಟಿ ಬಾಂಬೆ) ಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅಲ್ಲದೆ ಕಾಲೇಜಿನಲ್ಲಿ ಇರುವಾಗಲೇ ಕ್ಯಾಂಪಸ್‌ನಲ್ಲಿ ಆಯ್ಕೆ ಆಗಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಪಡೆದುಕೊಂಡಿದ್ದರು. ಕಾರ್ಪೊರೇಟ್ ಜಗತ್ತಿನಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು.

ಮಾಸ್ಟರ್ ಇನ್ ಡಿಸೈನ್ (MDes) ಅಧ್ಯಯನ ಮಾಡಿದರು ಮತ್ತು ಛಾಯಾಗ್ರಾಹಕರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ನಂತರ ಅದರಲ್ಲೂ ಯಶಸ್ಸು ಕಾಣದೇ ಕೋಚಿಂಗ್ ಸೆಂಟರ್ ಓಪನ್ ಮಾಡಿ ಭೌತಶಾಸ್ತ್ರದ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಕೊನೆಗೆ ಇಂಜಿನಿಯರಿಂಗ್, ಫೋಟೋಗ್ರಾಫಿ, ಕೋಚಿಂಗ್ ಎಲ್ಲವನ್ನು ತ್ಯಜಿಸಿ ಆಧ್ಯಾತ್ಮಿಕತೆಯನ್ನು ಆಯ್ಕೆ ಮಾಡಿಕೊಂಡರು. ಆಧ್ಯಾತ್ಮಿಕತೆ ಸ್ವೀಕರಿಸಿದ ಬಳಿಕ ಅಭಯ್ ಅವರು ಶಿವನ ಪರಮ ಭಕ್ತರಾಗಿದ್ದಾರೆ.

ಅಭಯ್ ಸಿಂಗ್ ಬಾಬಾ ಆಗಿದ್ದು ಹೇಗೆ?
ಜೀವನದ ನಿಜವಾದ ಅರ್ಥವನ್ನು ಕಂಡುಹಿಡಿಯಲು ಅವರು ಸಾಕ್ರೆಟೀಸ್, ಪ್ಲೇಟೋ ಮತ್ತು ಆಧುನಿಕ ಪರಿಕಲ್ಪನೆಗಳ ಪುಸ್ತಕಗಳನ್ನು ಓದಲು ಶುರು ಮಾಡಿದರು. ಈ ಬಗ್ಗೆ ಅಭಯ್ ಸಿಂಗ್, ‘ಇದು ನಿಜವಾದ ಜ್ಙಾನ ಎಂದು ನಾನು ಈಗ ಅರ್ಥಮಾಡಿಕೊಂಡಿದ್ದೇನೆ. ನೀವು ಮನಸ್ಸು ಅಥವಾ ಮಾನಸಿಕ ಆರೋಗ್ಯವನ್ನು ಅರ್ಥಮಾಡಿಕೊಳ್ಳಬೇಕಾದರೆ, ನೀವು ಆಧ್ಯಾತ್ಮಿಕತೆಯ ಮೂಲಕ ಮಾಡಬಹುದು. ಯಾಕೆಂದರೆ ಈ ಹಂತವು ಅತ್ಯುತ್ತಮ ಹಂತವಾಗಿದೆ’ ಎಂದು ಹೇಳಿದ್ದಾರೆ.

 

Continue Reading

LATEST NEWS

Trending

Exit mobile version