Connect with us

    DAKSHINA KANNADA

    ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

    Published

    on

    ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.


    ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಬಂಟ ಸಮುದಾಯದ ವಿದ್ಯಾರ್ಥಿಗಳು ಇಂದು ಕ್ರೀಡೆ ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

    ಅವರಿಗೆ ಸಿಗುವ ಪ್ರೋತ್ಸಾಹ ಕಡಿಮೆಯಿದೆ. ಸರಕಾರ ಮತ್ತು ಸಾಮಾಜಿಕ ಸಂಘಟನೆಗಳು ಎಷ್ಟು ಸಹಾಯ ಕೊಟ್ಟರೂ ಸಾಲದು. ಯಾಕೆಂದರೆ ಇಂದು ಖರ್ಚು ವೆಚ್ಚಗಳು ಜಾಸ್ತಿಯಾಗಿವೆ. ಆದ್ದರಿಂದ ಎಲ್ಲರೂ ಪ್ರತಿಭೆಗಳನ್ನು ಪ್ರೋತ್ಸಾಹಿಸೋಣ. ಈ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯೋಣ” ಎಂದರು.


    ಬಳಿಕ ಮಾತಾಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, “ಸುರತ್ಕಲ್ ಭಾಗದಲ್ಲಿ ಬಂಟ ಸಮುದಾಯದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಸುರತ್ಕಲ್ ಬಂಟರ ಸಂಘ ಶ್ಲಾಘನೀಯ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಭಾಗದ ಹತ್ತಾರು ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಮಹಾನಗರ ಪಾಲಿಕೆ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಕ್ರೀಡಾಪಟುಗಳು ಪಡೆದುಕೊಳ್ಳಬೇಕು. ಸುರತ್ಕಲ್ ಬಂಟರ ಸಂಘ ಇದೇ ರೀತಿ ಸಾಮಾಜಿಕ ಚಟುವಟಿಕೆಗಳಲ್ಲಿ ನಿತ್ಯ ನಿರಂತರವಾಗಿ ತೊಡಗಿಕೊಳ್ಳಲಿ” ಎಂದರು.


    ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಮಾತನಾಡಿ, “ಸುರತ್ಕಲ್ ಬಂಟರ ಸಂಘ ಸದಾ ಕಾರ್ಯ ಚಟುವಟಿಕೆಯಿಂದ ಕೂಡಿರುತ್ತದೆ. ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಸಂಘ ಹಮ್ಮಿಕೊಳ್ಳುತ್ತಿರುವುದು ಖುಷಿಯ ವಿಚಾರ. ಇಂತಹ ಸಮಾಜಮುಖಿ ಕಾರ್ಯಗಳು ನಿತ್ಯ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತಾಡುತ್ತಾ, “ಸುರತ್ಕಲ್ ಬಂಟರ ಸಂಘದ ಕಾರ್ಯಕ್ರಮಗಳಿಗೆ ಬರುವಾಗ ಖುಷಿಯಾಗುತ್ತದೆ.

    ಇಲ್ಲಿ ಪಕ್ಷ ಭೇದ ಮರೆತು ಆತ್ಮೀಯವಾಗಿ ಸ್ವಾಗತಿಸುತ್ತಾರೆ. ಇಲ್ಲಿಗೆ ಬರುವಾಗ ಪಕ್ಷ ಬದಿಗಿಟ್ಟು ಒಬ್ಬ ಬಂಟನಾಗಿ ಬರುತ್ತೇನೆ. ಸಮುದಾಯದ ಸಂಘಟನೆಗಳಲ್ಲಿ ರಾಜಕೀಯ ರಹಿತವಾಗಿ ನಾವೆಲ್ಲರೂ ದುಡಿದಲ್ಲಿ ಇಡೀ ಸಮುದಾಯ ಅಭಿವೃದ್ಧಿಯಾಗುತ್ತದೆ” ಎಂದರು.


    ವೇದಿಕೆಯಲ್ಲಿ ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರವಿರಾಜ್ ಶೆಟ್ಟಿ ನಿಟ್ಟೆ ಗುತ್ತು, ಮನಪಾ ತೆರಿಗೆ ಹಣಕಾಸು ನಿರ್ವಹಣೆ ಮತ್ತು ಅಫೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸ್ಥಾಪಕಾಧ್ಯಕ್ಷ ಕುಳಾಯಿಗುತ್ತು ರೋಹಿತಾಕ್ಷ ರೈ ಮಾಜೀ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್. ಪೂಂಜಾ, ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಶಿಶಿರ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಎ. ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಚೇಳಾಯರು, ಸುಜೀರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು. ಅನೂಪ್ ಶೆಟ್ಟಿ ಪ್ರಾರ್ಥನೆಗೈದರು. ಲೀಲಾಧರ ಶೆಟ್ಟಿ ಸ್ವಾಗತಿಸಿದರು. ಪುಷ್ಪರಾಜ ಶೆಟ್ಟಿ ಕುಡುಂಬೂರು ವಂದಿಸಿದರು. ರಾಜೇಶ್ವರಿ ಡಿ ಶೆಟ್ಟಿ ಮತ್ತು ಸುಧಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸುರತ್ಕಲ್ ಬಂಟರ ಸಂಘದ ವ್ಯಾಪ್ತಿಯಲ್ಲಿ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ, ಸ್ಪರ್ಧೆಯ ಜೊತೆಗೆ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending