bangalore
ಬಿಗ್ ಬಾಸ್ ಮನೆಯಿಂದ ಇನ್ನೊಂದು ಸ್ಪರ್ಧಿ ಔಟ್
Published
10 months agoon
By
Adminಬಿಗ್ ಬಾಸ್ ಸೀಸನ್ 10ರ ಗ್ರ್ಯಾಂಡ್ ಫಿನಲೆಯಲ್ಲಿ 6 ಜನ ಸ್ಫರ್ಧಿಗಳು ಗ್ರ್ಯಾಂಡ್ ಫಿನಲೆಗೆ ಎಂಟ್ರಿ ಕೊಟ್ಟಿದ್ದರು ಅದರಲ್ಲಿ ತುಕಾಲಿ ಸಂತೋಷ್ ಔಟ್ ಆಗಿದ್ದು, ಇದೀಗ 5 ಜನ ಸ್ಪರ್ಧಿಗಳಲ್ಲಿ ಇನ್ನೊಬ್ಬರು ಔಟ್ ಆಗುತ್ತಿದ್ದಾರೆ.
ಇದೀಗ ಬಿಗ್‌ಬಾಸ್ ಸೀಸನ್ 10ರ ಗ್ರ್ಯಾಂಡ್ ಫಿನಾಲೆಯಲ್ಲಿ ಐದೇ ಮಂದಿ ಉಳಿದಿದ್ದಾರೆ ಇದರಲ್ಲಿ ಯಾರು ಫೈನಾಲಿಸ್ಟ್ ಅನ್ನೋದು ಗೊಂದಲ ಆಗುತ್ತಿದೆ. ಯಾರು ಗೆಲ್ಲಬಹುದು ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಭಾನುವಾರದ ಫೈನಲ್ ಎಪಿಸೋಡ್‌ನಲ್ಲಿ ವಿನಯ್, ಕಾರ್ತಿಕ್, ಸಂಗೀತಾ, ಡ್ರೋನ್ ಪ್ರತಾಪ್, ವರ್ತೂರು ಈ ಐವರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಐದು ಮಂದಿ ಫೈನಲಿಸ್ಟ್‌ಗಳಲ್ಲಿ ಒಬ್ಬೊಬ್ಬರಾಗಿ ಮನೆಯಿಂದ ಹೊರ ಬರುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಫಿನಾಲೆ ಸ್ಟೇಜ್‌ನಲ್ಲಿ ಕಿಚ್ಚ ಸುದೀಪ್, ಬಿಗ್‌ಬಾಸ್ ಕಂಟೆಸ್ಟೆಂಟ್ ನಮ್ರತಾ ಅವರ ಕೈಗೆ ಒಂದು ಎನ್ವಲಪ್ ಕೊಟ್ಟಿದ್ದಾರೆ. ಅದರಲ್ಲಿ ಈಗ ಹೊರಗಡೆ ಬರುತ್ತಿರುವ ಕಂಟೆಸ್ಟೆಂಟ್‌ನ ಹೆಸರು ಬರೆದಿರುತ್ತೆ.
ನಮ್ರತಾ ಅವರು ಬಿಗ್‌ಬಾಸ್ ಮನೆಗೆ ಹೋಗಿ ಆ ಎನ್ವಲಪ್ ಅನ್ನು ಓದಿ ನಂತರ ಅವರನ್ನು ಬಿಗ್‌ಬಾಸ್ ಮನೆಯಿಂದ ಹೊರಗಡೆ ಕರೆದುಕೊಂಡು ಬರಬೇಕು. ಕಿಚ್ಚ ಸುದೀಪ್ ಹೇಳಿದಂತೆ ನಮ್ರತಾ ಬಿಗ್‌ಬಾಸ್ ಮನೆಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಉಳಿದ 5 ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಅವರು ನಿಮಗೆ ಪರಿಚಯ ಇರುವ ಒಬ್ಬರು ಮನೆಯ ಒಳಗೆ ಬರುತ್ತಾರೆ. ಒಬ್ಬರನ್ನ ಹೊರಗೆ ಕರೆದುಕೊಂಡು ಬರ್ತಾರೆ ಅನ್ನೋದು ಪ್ರೋಮೊದಲ್ಲಿ ನೋಡಬಹುದು.
ಬಿಗ್‌ಬಾಸ್ ಮನೆಯಲ್ಲಿ ಕಲರ್‌ಫುಲ್ ಆಗಿ ಎಂಟ್ರಿ ಕೊಟ್ಟ ನಮ್ರತಾ ಅದೇ ಜೋಶ್‌ನಲ್ಲಿ ಎನ್ವಲಪ್ ಓಪನ್ ಮಾಡ್ತಾರೆ. ಆದರೆ ತುಂಬಾ ಒಳ್ಳೆ ಎಕ್ಸ್‌ಪೆಕ್ಟೇಷನ್ ಇತ್ತು ಇವರು ಇದ್ದೇ ಇರ್ತಾರೆ ಅಂತ. ಟಾಪ್ 3, ಟಾಪ್ 2ರಲ್ಲಿ ಅಂದುಕೊಂಡಿದ್ದೆ ಆದರೆ ಇವ್ರು ಎಲಿಮಿನೇಟ್ ಅಂತ ಘೋಷಣೆ ಮಾಡಿದ್ದಾರೆ. ನಮ್ರತಾ ಕೈಗೆ ಕಿಚ್ಚ ಸುದೀಪ್ ಅವರು ಕೊಟ್ಟ ಎನ್ವಲಪ್‌ನಲ್ಲಿ ವಿನಯ್ ಗೌಡ ಅಥವಾ ವರ್ತೂರು ಸಂತೋಷ್ ಅವರ ಹೆಸರಿದೆ ಎನ್ನಲಾಗಿದೆ. ವಿನಯ್ ಗೌಡ ಅವರನ್ನು ಎಲಿಮಿನೇಟ್ ಮಾಡಿದ್ರೂ ಅದೊಂದು ಫ್ರಾಂಕ್ ಆಗಿರೋ ಸಾಧ್ಯತೆ ಇದೆ. ಇನ್ನು ಟಾಪ್ 5ರಲ್ಲಿ ಔಟ್ ಆಗಿರೋದು ಯಾರು ಅನ್ನೋದು ಪಕ್ಕಾ ಆಗಿಲ್ಲ. ಇಂದಿನ ಎಪಿಸೋಡ್ ನಲ್ಲಿ ಕಾದು ನೋಡಬೇಕಷ್ಟೇ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
19 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
bangalore
ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರೀತಿಯ ಘಟನೆ; ಸೆಲ್ಫಿ ಹುಚ್ಚಿಗೆ ಬಲಿಯಾಗಬೇಕಿದ್ದ ಯುವತಿ ರೋಚಕ ಪಾರು !
Published
4 weeks agoon
28/10/2024ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
bangalore
ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ
Published
4 weeks agoon
27/10/2024ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.
LATEST NEWS
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ