Connect with us

ಕೊರೊನಾ ಔಟ್ ಬ್ರೇಕ್: ದ.ಕ ಜಿಲ್ಲೆಯ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್

Published

on

. ಜಿಲ್ಲೆಯ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢ

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಸದ್ಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ವೃದ್ದೆಯ ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಎ.21ರಂದು ಪಾಸಿಟಿವ್ ಆಗಿದ್ದ p-409 ವೃದ್ದೆಯ ಸಂಪರ್ಕದಿಂದಾಗಿ ಅವರ ಮಗಳು 39 ವರ್ಷದ ಮಹಿಳೆಗೂ ಇದೀಗ ಸೋಂಕು ದೃಢಪಟ್ಟಿದೆ.

ಬಂಟ್ವಾಳದ ಕಸಬಾ ಬಳಿಯ ನಾಲ್ಕು ಮಂದಿಗೆ ಈಗಾಗಲೇ ಪಾಸಿಟಿವ್ ಬಂದಿದ್ದು, ಇಬ್ಬರು ಈಗಾಗಲೇ ಸಾವನ್ನಪ್ಪಿದ್ದಾರೆ.

ಎ.19 ರಂದು ಬಂಟ್ವಾಳದಲ್ಲಿ ಕೊರೋನಾಗೆ ಮೊದಲ ಮಹಿಳೆ ಬಲಿಯಾಗಿದ್ದರು.

ಹಾಗಾಗಿ ಇಂದು ಪಾಸಿಟಿವ್ ಆದ ಮಹಿಳೆಗೆ ಎ.19 ರಂದೇ ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಎ.23 ರಂದು ಮೊದಲು ಮೃತಪಟ್ಟ ಮಹಿಳೆಯ ಅತ್ತೆಯೂ ಕೊರೋನಾಗೆ ಬಲಿಯಾಗಿದ್ದರು.

ಮೊದಲು ಮೃತಪಟ್ಡ ಮಹಿಳೆಯಿಂದ ನೆರೆಮನೆ ವೃದ್ದೆಗೆ ಸೋಂಕು ತಗುಲಿದ್ದು, ಇದೀಗ ವೃದ್ದೆಯ ಮಗಳಿಗೂ ಸೋಂಕು ದೃಢಪಟ್ಟಿದೆ.

ಸದ್ಯ ಒಂದೇ ಕುಟುಂಬದ ಇಬ್ಬರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಎರಡು ಕೊರೊನಾ ಕೇಸುಗಳು ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

Click to comment

Leave a Reply

Your email address will not be published. Required fields are marked *

FILM

ಜಿಮ್ ವರ್ಕೌಟ್ ಟೈಮ್ ನ ಗ್ಲಾಮರಸ್ ಫೋಟೋ ಹಂಚಿಕೊಂಡ ‘ಜೊತೆ ಜೊತೆಯಲಿ’ ನಟಿ

Published

on

ಚಂದನವನ : ಮೇಘಾ ಶೆಟ್ಟಿ ಯಾರಿಗೆ ತಾನೆ ಗೊತ್ತಿಲ್ಲ. ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿ, ಇದೀಗ ಹಿರಿತೆರೆಗೆ ಲಗ್ಗೆ ಇಟ್ಟಿರುವ ಕಲಾವಿದೆ. ಇದೀಗ ಅವರು ಜಿಮ್ ವರ್ಕೌಟ್ ಮಾಡುವ ವೇಳೆ ಕ್ಲಿಕ್ಕಿಸಿದ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.


ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ಶಾರ್ಟ್ಸ್ ತೊಟ್ಟು ಜಿಮ್ ನಲ್ಲಿ ಮೇಘಾ ಶೆಟ್ಟಿ ವರ್ಕೌಟ್ ಮಾಡಿದ್ದಾರೆ. ಮುದ್ದಾಗಿ, ಗ್ಲಾಮರಸ್ ಆಗಿ ಅವರು ಕಾಣಿಸುತ್ತಿದ್ದಾರೆ.

ಮೇಘಾ ಶೆಟ್ಟಿ ಅಂದ್ರೆ ‘ಜೊತೆ ಜೊತೆಯಲಿ’ ಧಾರಾವಾಹಿ ನೆನಪಾಗೋದು ಸಹಜ. ಈ ಧಾರಾವಾಹಿಯಲ್ಲಿ ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ನಟಿಸಿದ್ದರು. ನಟ ಅನಿರುದ್ಧ್ ಜೊತೆ ನಟಿಸಿದ್ದ ಮೇಘಾಗೆ ಈ ಧಾರಾವಾಹಿ ಜಪ್ರಿಯತೆಯ ಉತ್ತುಂಗಕ್ಕೇರಿಸಿತ್ತು.

ಈ ವೇಳೆ ಸಿನಿಮಾಗಳಿಂದಲೂ ಮೇಘಾ ಅವಕಾಶಗಳನ್ನು ಗಿಟ್ಟಿಸಿಕೊಂಡರು, ಅತ್ತ ಧಾರಾವಾಹಿ ಮುಕ್ತಾಯಗೊಂಡಿತ್ತು. ಇತ್ತು ಮೇಘಾ ಸಿನಿಮಾಗಳಲ್ಲಿ ಬಿಝಿ ಆದರು.ಮಂಗಳೂರು ಮೂಲದ ಈ ಬೆಡಗಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ತ್ರಿಬಲ್ ರೈಡಿಂಗ್’ ನಲ್ಲಿ ಕಾಣಿಸಿಕೊಂಡರು. ಡಾರ್ಲಿಂಗ್ ಕೃಷ್ಣ ಜೊತೆ ‘ದಿಲ್ ಪಸಂದ್’ನಲ್ಲಿ ನಟಿಸಿದ್ದಾರೆ. ಧನ್ವೀರ್ ಗೌಟ ಜೊತೆ ‘ಕೈವ’ ದಲ್ಲಿ ನಾಯಕಿಯಾಗಿದ್ದಾರೆ. ಸದ್ಯ ಮೇಘ, ಆಫ್ಟರ್ ಆಪರೇಷನ್ ಲಂಡನ್ ಕೆಫೆ, ಗ್ರಾಮಾಯಣ, ಚೀತಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ : ವಿಮಾನದಲ್ಲೇ ರೋಮ್ಯಾನ್ಸ್‌…ಜೋಡಿಗಳ ಫೋಟೋ ವೈರಲ್‌..!

ಇನ್ನು, ಜಿಮ್ ವರ್ಕೌಟ್ ಸಮಯದ ಫೋಟೋ ಹಂಚಿಕೊಂಡ ಮೇಘಾ ಶೆಟ್ಟಿ ಫೋಟೋಗಳಿಗೆ ಅಭಿಮಾನಿಗಳು ಲೈಕ್ಸ್ ಕೊಡುತ್ತಿದ್ದಾರೆ. ಬ್ಯೂಟಿಫುಲ್ ಎಂದು ಕಮೆಂಟ್ ಹಾಕುತ್ತಿದ್ದಾರೆ.

Continue Reading

DAKSHINA KANNADA

WATCH VIDEO : ದಪ್ಪು ಹಿಡಿದು ನೃತ್ಯ ಮಾಡಿದ ಯು.ಟಿ.ಖಾದರ್; ಹಬ್ಬದ ಸಂಭ್ರಮದ ವಿಡಿಯೋ ವೈರಲ್

Published

on

ಮಂಗಳೂರು : ವಿಧಾನ ಸಭಾ ಸ್ಪೀಕರ್ ಆಗಿದ್ರೂ ಸದಾ ಒಂದಿಲ್ಲ ಒಂದು ಕಾರಣದಿಂದ ಸ್ಪೀಕರ್ ಯು.ಟಿ ಖಾದರ್ ಅವರು ಸುದ್ದಿಯಾಗ್ತಾನೆ ಇರ್ತಾರೆ. ಅವರು ಎಲ್ಲೇ ಹೋದ್ರು ಅವರ ಅಭಿಮಾನಿಗಳು ಅವರ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡ್ತಾರೆ. ಅಂತಹ ಒಂದು ವಿಡಿಯೋ ಈಗ ವೈರಲ್ ಆಗಿದೆ.

ಎರಡು ದಿನಗಳ ಹಿಂದೆ ನಡೆದ ರಮ್ಜಾನ್ ಹಬ್ಬದಂದು ಈ ವಿಡಿಯೋ ಶೂಟ್ ಮಾಡಲಾಗಿದೆ. ಹಬ್ಬದ ಸಲುವಾಗಿ ನಡೆದಿದ್ದ ಮೆರವಣಿಗೆ ಒಂದರಲ್ಲಿ ಸ್ಪೀಕರ್ ಖಾದರ್ ಅವರು ದಪ್ಪು ಬಾರಿಸಿ ನೃತ್ಯ ಮಾಡಿದ್ದಾರೆ. ದಪ್ಪು ಅನ್ನೋದು ಮುಸ್ಲಿಂ ಸಮೂದಾಯದ ಸಾಂಪ್ರದಾಯಿಕ ನೃತ್ಯವಾಗಿದ್ದು, ಹೆಚ್ಚಾಗಿ ಇದನ್ನು ಮಕ್ಕಳು ಪ್ರದರ್ಶನ ಮಾಡುತ್ತಾರೆ.


ಇಲ್ಲಿ ಕೂಡಾ ಮೆರವಣಿಗೆಯಲ್ಲಿ ದಪ್ಪು ಪ್ರದರ್ಶನ ಮಾಡುತ್ತಿರುವ ಮಕ್ಕಳ ಜೊತೆ ಮಕ್ಕಳಾಗಿ ದಪ್ಪು ನೃತ್ಯಕ್ಕೆ ಖಾದರ್ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಖಾದರ್ ಅವರ ಅಭಿಮಾನಿಗಳು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : WATCH VIDEO : ಪುತ್ರಿಯ ಜೊತೆ ಖಾದರ್ ರೌಂಡಪ್‌.. ಮಕ್ಕಳಿಗೆ ಬಡವರ ಕಷ್ಟದ ಅರಿವು ಮೂಡಿಸಿದ ಜನನಾಯಕ

Continue Reading

DAKSHINA KANNADA

WATCH VIDEO : ಪುತ್ರಿಯ ಜೊತೆ ಖಾದರ್ ರೌಂಡಪ್‌.. ಮಕ್ಕಳಿಗೆ ಬಡವರ ಕಷ್ಟದ ಅರಿವು ಮೂಡಿಸಿದ ಜನನಾಯಕ

Published

on

ಮಂಗಳೂರು : ಸ್ಪೀಕರ್ ಯು.ಟಿ.ಖಾದರ್ ಅವರನ್ನು ಕ್ಷೇತ್ರದ ಜನ ತುಂಬಾ ಪ್ರೀತಿ ಮಾಡೋದು ಅವರ ಸಿಂಪ್ಲಿಸಿಟಿ ಹಾಗೂ ಜನರ ಜೊತೆ ಅವರ ಬೆರೆಯುವಿಕೆಯಿಂದ. ಹೀಗಾಗಿ ಖಾದರ್ ಎಲ್ಲೇ ಹೋದ್ರು ಅದೊಂದು ದೊಡ್ಡ ಸುದ್ದಿಯಾಗಿ ಜನ ಮೆಚ್ಚುಗೆ ಗಳಿಸಿಕೊಳ್ಳುತ್ತಾರೆ. ಜನ ಸೇವಕನಾಗಿರೋ ಯು.ಟಿ.ಖಾದರ್ ಈಗ ಮತ್ತೊಂದು ರೀತಿಯಲ್ಲಿ ಸುದ್ಧಿಯಾಗಿದ್ದಾರೆ.

ಮಕ್ಕಳಿಗೆ ಬಡವರ ಕಷ್ಟದ ಅರಿವು :


ಜನರ ಸಮಸ್ಯೆ ಆಲಿಸಲು ರೌಂಡ್ಸ್‌ ಹಾಕಿದ್ದ ಸ್ಪೀಕರ್ ಖಾದರ್, ತನ್ನ ಜೊತೆ ಪುತ್ರಿ ಹವ್ವಾ ನಸೀಮಾ ಹಾಗೂ ಸಹೋದರ ಇಫ್ತಿಕಾರ್ ಪುತ್ರಿ ಲಯಾ ಸಸೀಮಾ ಅವನ್ನು ಜತೆ ಕರೆದೊಯ್ದಿದ್ದಾರೆ. ಐಶಾರಾಮಿ ಬದುಕು ಸಾಗಿಸುವ ಮಕ್ಕಳಿಗೆ ಬಡವರ ಕಷ್ಟ ಅರ್ಥ ಮಾಡಿಸೋ ನಿಟ್ಟಿನಲ್ಲಿ ಸ್ಪೀಕರ್ ಖಾದರ್ ಈ ರೀತಿ ಮಾಡಿದ್ದಾರೆ. ಉಳ್ಳಾಲ ಕ್ಷೇತ್ರದ ಕೆಲವೊಂದು ಮನೆಗಳಿಗೆ ಭೇಟಿ ನೀಡಿ ಮನೆಯ ಪರಿಸ್ಥಿತಿಯನ್ನು ಖಾದರ್ ಅವಲೋಕಿಸಿದ್ರು. ಈ ವೇಳೆ ಅವರ ಸಂಕಷ್ಟಗಳನ್ನು ಕೇಳಿ ಅವರಿಗೆ ಸ್ಪಂದಿಸಿದ್ರು.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣ : ಪ.ಬಂಗಾಳದಲ್ಲಿ ಮಾಸ್ಟರ್ ಮೈಂಡ್ ಅರೆಸ್ಟ್

ಈ ವೇಳೆ ಪುತ್ರಿ ಹಾಗೂ ಸಹೋದರನ ಪುತ್ರಿಯನ್ನೂ ಜೊತೆ ಕರೆದೊಯ್ದು ಅವರಿಗೂ ಜನರ ಸಂಕಷ್ಟದ ಅರಿವು ಮೂಡಿಸಿದ್ರು. ಸ್ಪೀಕರ್ ಖಾದರ್ ಅವರ ಈ ನಡೆ ಈಗ ಜನರ ಮೆಚ್ಚುಗೆ ಗಳಿಸಿದೆ. ಮಕ್ಕಳಿಗೆ ಬಡ ಜನರ ಕಷ್ಟವನ್ನು ಅರ್ಥ ಮಾಡಿಸಿ ಅವರಿಗೆ ಸಹಾಯ ಮಾಡುವಂತಹ ಪ್ರೇರಣೆ ನೀಡಿದ್ದಾರೆ. ಇದು ಒಬ್ಬ ನೈಜ್ಯ ಸಮಾಜ ಸೇವಕನಿಗೆ ಇರಬೇಕಾದ ಗುಣ ಅಂತ ಜನರು ಗುಣಗಾನ ಮಾಡಿದ್ದಾರೆ.

Continue Reading

LATEST NEWS

Trending