Connect with us

    bangalore

    ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲು; 590 ಪುಟ, 53 ಸಾಕ್ಷಿ

    Published

    on

    ಮಂಗಳೂರು/ಬೆಂಗಳೂರು:  ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕನ ವಿರುದ್ಧ ಮತ್ತೊಂದು ಬ್ಲ್ಯಾಕ್‌ಮೇಲ್ ಕೇಸ್ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ.

    ಅ*ಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಶನಿವಾರ (ನ.30) ಎಫ್‌ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ನಾಳೆ (ಡಿ.2) ಮುನಿರತ್ನ ಜಾಮೀನು ಕೋರಿ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಆರೋಪ ಏನು ?

    ಮುನಿರತ್ನ ವಿರುದ್ಧ ಮತ್ತೊಂದು ಕೇಸ್ :

    ಜಾತಿ ನಿಂದನೆ ಪ್ರಕರಣದ ತನಿಖೆ ಪೂರ್ಣಗೊಳಿಸಿ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ದೋಷಾರೋಪ ಪಟ್ಟಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ (ನ.30) ಸಲ್ಲಿಸಿದೆ.

    ‘ತಮಗೆ ಜಾತಿ ನಿಂದನೆ ಮಾಡಿ ಬೆದರಿಸಿದ್ದಾರೆ’ ಎಂದು ಆರೋಪಿಸಿ ಮುನಿರತ್ನ ವಿರುದ್ದ ವೈಯಾಲಿಕಾವಲ್‌ ಠಾಣೆಗೆ ಲಕ್ಷ್ಮೀದೇವಿ ನಗರ ವಾರ್ಡ್‌ನ ಮಾಜಿ ಕಾರ್ಪೋರೇಟರ್ ವೇಲು ದೂರು ನೀಡಿದರು. ‘ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿ ಸಾಕ್ಷಿದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಸಿರುವ ಹಾಗೂ ಜಾತಿಗಳ ನಡುವೆ ವೈಷಮ್ಯವನ್ನುಂಟು ಮಾಡಿರುವ ಆರೋಪ ತನಿಖೆಯಲ್ಲಿ ಸಾಬೀತಾಗಿದೆ’ ಎಂದು ಎಸ್‌ಐಟಿ ಹೇಳಿದೆ. ಮುನಿರತ್ನ ವಿರುದ್ಧ ಅತ್ಯಾಚಾರ, ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಮಾಜಿ ಕಾರ್ಪೋರೇಟರ್‌ಗೆ ಜಾತಿ ನಿಂದನೆ ಆರೋಪ ಸಂಬಂಧ 3 ಎಫ್‌ಐಆರ್‌ಗಳು ದಾಖಲಾಗಿದ್ದು, ಈಗ ಜಾತಿನಿಂದನೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಗಿಸಿದೆ. ಇನ್ನುಳಿದ ಪ್ರಕರಣಗಳ ತನಿಖೆ ಭಾಗಶಃ ಮುಕ್ತಾಯವಾಗಿದ್ದು, ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಕೆಯಾಗಲಿದೆ.

    590 ಪುಟಗಳ ಆರೋಪಕ್ಕೆ 53 ಸಾಕ್ಷಿ :

    ಜಾತಿ ನಿಂದನೆ ದೂರಿನ ಅನ್ವಯ ಮುನಿರತ್ನ ವಿರುದ್ಧ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989 ಮತ್ತು ಕಲಂ 153, 153ಎ(1) (ಎ)(ಬಿ), 504, 509 2.2.4. ರಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಮುನಿರತ್ನ ವಿರುದ್ದ ಪ್ರಕರಣಗಳ ತನಿಖೆಗೆ ಎಸ್‌ಐಟಿಯನ್ನು ಸರ್ಕಾರವು ರಚಿಸಿತು. ಅಂತೆಯೇ ತನಿಖೆಗಿಳಿದ ಎಸ್‌ಐಟಿ, ಜಾತಿ ನಿಂದನೆ ಪ್ರಕರಣದ ತನಿಖೆ ಮುಗಿಸಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಆರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ 53 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿದೆ. ಈ ಸಾಕ್ಷಿಗಳ ಪೈಕಿ ಮೂವರು ಪ್ರತ್ಯಕ್ಷದರ್ಶಿಗಳು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಎಸ್‌ಐಟಿ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    bangalore

    ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ

    Published

    on

    ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್​​ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್​ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್​ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್​ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.

    52ನೇ ವಾರದ ಟಿಆರ್​ಪಿ ಪ್ರಕಾರ, ಬಿಗ್ ಬಾಸ್​ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್​ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್​ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್​ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.

    ಸೀರಿಯಲ್‌ಗಳ ಟಿಆರ್​ಪಿ

    ಸೀರಿಯಲ್‌ಗಳ ಟಿಆರ್​ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.

    Continue Reading

    bangalore

    ಸರಿಗಮಪ ಜ್ಯೂರಿ ಎಸ್ ಬಾಲಿ ವಿಧಿವಶ

    Published

    on

    ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.

    ಮೃದಂಗ, ತಬಲಾ, ಢೋಲಕ್‌ , ಢೋಲ್ಕಿ, ಖಂಜರಿ, ಕೋಲ್‌ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.

    ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್‌ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್‌. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್‌, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.

    ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

    ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.

    ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್‌ ಅವರ ಸಂಕೇತ್‌ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.

    ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

    Continue Reading

    bangalore

    ಮಾಜಿ ಸಚಿವ ಮುನಿರತ್ನ ತಲೆಗೆ ಮೊಟ್ಟೆ ಹೊಡೆತ !

    Published

    on

    ಮಂಗಳೂರು/ಬೆಂಗಳೂರು: ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಆಚೆ ಬಂದಿರುವ ಮಾಜಿ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷೀದೇವಿನಗರದಲ್ಲಿ ನಡೆದಿದೆ.

    ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ; ಉಡುಪಿ ಮೂಲದ ಯೋಧ ಸೇರಿ ಐವರು ಹುತಾತ್ಮ

    ಈ ವೇಳೆ ಶಾಸಕ ಮುನಿರತ್ನ ಅವರು ತಮ್ಮ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ ಹಲವರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಶಾಸಕ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    Continue Reading

    LATEST NEWS

    Trending