Connect with us

    BELTHANGADY

    ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಎಫ್‌ಐಆರ್

    Published

    on

    ಬೆಳ್ತಂಗಡಿ: ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

    ಕಲ್ಲಿನ ಆಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧ ಎದುರು ಸೋಮವಾರ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಇಲಾಖೆಯಿಂದ ಯಾವೂದೇ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಲಾಗಿತ್ತು.

    ಈ ಸಂದರ್ಭ ಶಾಸಕ ಹರೀಶ್ ಪೂಂಜ ಹಾಗೂ ಇತರರು ಜನರನ್ನು ಗುಂಪು ಸೇರಿಸಿ ಪ್ರತಿಭಟನಾ ಸಭೆ ನಡೆಸಿರುವ ಬಗ್ಗೆ ಹಾಗೂ ಈ ಪ್ರತಿಭಟನಾ ಸಭೆಯಲ್ಲಿ ಹರೀಶ್ ಪೂಂಜ ಅವರು ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ಧ ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗಳಿಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಸಾರ್ವಜನಿಕ ನೌಕರರಾದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾರೆ.

    ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 58/2024 ಕಲಂ 143, 147, 34 , 504, 506, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

    BELTHANGADY

    ಬೆಳ್ತಂಗಡಿ: ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ

    Published

    on

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ದೇಶದ ಗ್ರಾಮಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಯ ಒಲವು ಹೆಚ್ಚಿಸುವುದಕ್ಕಾಗಿ ಪ್ರವಾಸೋದ್ಯಮ ಸಚಿವಾಲಯವು ಕಳೆದ ವರ್ಷ ‘ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೀಷನ್’ ಆರಂಭಿಸಿತ್ತು. ಇದರ ಅಡಿಯಲ್ಲಿ ಪ್ರತಿ ಕೆಟಗರಿಯಿಂದ ಅತ್ಯುತ್ತಮ ಐದು ಗ್ರಾಮೀಣ ಪ್ರವಾಸೋದ್ಯಮ ಗ್ರಾಮಗಳನ್ನು ಗುರುತಿಸಲಾಗುತ್ತದೆ.

    ಸ್ಪರ್ಧೆಯು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೂರು ಹಂತಗಳಲ್ಲಿ ನಡೆಯುತ್ತದೆ. ಕುತ್ಲೂರಿನ ಸಾಫ್ಟ್‌ವೇರ್ ಇಂಜಿನಿಯರ್ ಹರೀಶ್ ಡಾಕಯ್ಯ ಅವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕತಾರ್‌ನಲ್ಲಿ ಕೆಲಸ ಮಾಡುವ ಅದೇ ಗ್ರಾಮದ ಸಂದೀಪ್ ಪೂಜಾರಿ ಮತ್ತು ಶಿವರಾಜ್ ಜತೆಗೂಡಿ ಸ್ನೇಹಿತರೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು

    ಸ್ಪರ್ಧಿಗಳು ಅಪ್​ಲೋಡ್ ಮಾಡಿದ ಫೋಟೊ, ವಿಡಿಯೋಗಳು, ಮಾಹಿತಿಗಳನ್ನು ಪರಿಶೀಲನೆ ಮಾಡಿ ನಂತರ ಗ್ರಾಮಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

    Continue Reading

    BELTHANGADY

    ಬೆಳ್ತಂಗಡಿ: 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು

    Published

    on

    ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.

    ಬೆಳ್ತಂಗಡಿ ಹಳೇಕೋಟೆ ನಿವಾಸಿ ಪ್ರಸನ್ನ ಕುಮಾರ್ ಎಂಬವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ. ಸೆ. 13ರಿಂದ ಸೆ.24 ರ, ಬೆಳಿಗ್ಗಿನ ಜಾವದ ಅವಧಿಯಲ್ಲಿ ಕಳ್ಳರು ಈ ಕೃತ್ಯ ನಡೆಸಲಾಗಿದೆ.

    ಮನೆಯೊಳಗೆ ಪ್ರವೇಶಿಸಿದ ಕಳ್ಳರು ಮನೆಯ ಹಾಲ್ ನ ಟಿ.ವಿ ಸ್ಟಾಂಡ್ ನಲ್ಲಿಟ್ಟಿದ್ದ ರೂಪಾಯಿ 5,05,000 ಮೌಲ್ಯದ ಚಿನ್ನಾಭರಣಗಳು ಹಾಗೂ ರೂ. 500000/- ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಪ್ರಸನ್ನ ಕುಮಾರ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 82/2024 ಕಲಂ: 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

    Continue Reading

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending