Monday, January 24, 2022

 ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿ ದುರಂತ..!

 ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿ ದುರಂತ..!

ಉಡುಪಿ : ಉಡುಪಿಯಲ್ಲಿ ಮತ್ತೆ ದೋಣಿ ದುರಂತವಾಗಿದೆ. ಶ್ರೀನಿವಾಸ ಕಾರ್ವಿ ಮಾಲೀಕತ್ವದ ಆದಿ ಆಂಜನೇಯ ದೋಣಿ ಮಗುಚಿದ ಪರಿಣಾಮ ದೋಣಿ ಮಾಲೀಕ ಶ್ರೀನಿವಾಸ್ ಖಾರ್ವಿ ಕಾಲಿಗೆ ಗಂಭೀರ ಗಾಯವಾಗಿದ್ದು ಕುಂದಾಪುರದ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದಾರೆ.

ನಾಡ ದೋಣಿಯ ಎರಡು  ಇಂಜಿನ್  ಸಮುದ್ರ ಪಾಲಾಗಿದೆ. ಹಾಗೂ ಇದು ಗಂಗೊಳ್ಳಿ ಬಂದರಿನ ಆದಿ ಆಂಜನೇಯ ದೋಣಿಯಾಗಿದ್ದು  ನಾಲ್ಕು ಜನ ಮೀನುಗಾರರು ಮರವಂತೆಯಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದಾಗ ತೆರೆಯ ರಭಸಕ್ಕೆ ದಿಬ್ಬಕ್ಕೆ ಹೊಡೆದು ದೋಣಿ ಮಗುಚಿದ ಘಟನೆ ಇಂದು ತ್ರಾಸಿ ಮರವಂತೆಯಲ್ಲಿ ನಡೆದಿದೆ.

ಅದೃಷ್ಟವಶಾತ್ ಮೀನುಗಾರರು ಸಮುದ್ರದಲ್ಲಿ ಈಜಿ ತಮ್ಮ ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ.

ದೋಣಿ ಮಾಲೀಕನ ಕಾಲು ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಏಟಾಗಿದೆ. ಉಡುಪಿ ಜಿಲ್ಲೆಯಲ್ಲಿ ಸರಣಿ ದೋಣಿ ದುರಂತ ಕಾಣಿಸಿಕೊಳ್ಳುತ್ತಿರುವುದು ಒಂದು ರೀತಿ ವಿಪರ್ಯಾಸವಾಗಿದೆ,

ಪದೇಪದೇ ಇಂತಹ ದುರ್ಘಟನೆಗಳು ನಡೆಯುತ್ತಿರುವುದರಿಂದ ಮತ್ತೆ ಮೀನುಗಾರರಲ್ಲಿ ಆತಂಕ ಮನೆಮಾಡಿದೆ.

Hot Topics

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...