LATEST NEWS
ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್..!
ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂ.15ರ ರಾತ್ರಿ ನಡೆದಿದೆ ಎನ್ನಲಾಗಿದ್ದು, ಪುತ್ತೂರಿನ ಸೆಲೂನ್ ನೌಕರ ಚರಣ್ ಎಂಬಾತ ಶಬರಿ ಎಂಬವನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ನನ್ನು ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದರು.
ಚರಣ್ ತನ್ನ ಮೂವರು ಸ್ನೇಹಿತರ ಜೊತೆ ಸ್ಥಳಕ್ಕೆ ಹೋಗಿದ್ದಾನೆ. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್ ಟೀಂ ಏಕಾಏಕಿ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More..; ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತ; 8 ಮಂದಿ ಸಾವು
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಎರಡು ಗ್ಯಾಂಗ್ ವಾರ್ ಪ್ರಕರಣ ವರದಿಯಾಗಿದೆ. ಹೆಚ್ಚುತ್ತಿರುವ ಗ್ಯಾಂಗ್ ವಾರ್ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ. ಕೆಲ ತಿಂಗಳ ಹಿಂದೆ ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ವೇಳೆಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ವಾರ್ ನಡೆಸಿದ್ದರು. ತಲವಾರು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದರು. ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್ ನಿವಾಸಿಗಳು ವೀಡಿಯೋ ಮಾಡಿದ್ದರು. ಈ ಘಟನೆಯಿಂದ ಉಡುಪಿ ಜಿಲ್ಲೆಯೆ ಬೆಚ್ಚಿ ಬೀಳುವಂತಾಗಿತ್ತು.
DAKSHINA KANNADA
ಜಿಲ್ಲೆಯಲ್ಲಿ ರೆಡ್ ಅಲರ್ಟ್..! ಜೂನ್ 27 ಶಾಲೆಗೆ ರಜೆ ಘೋಷಣೆ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.
ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ 0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.
LATEST NEWS
500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್..!
ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್ ಇನ್ನೂ ಅನೇಕ ನೌಕರರ ಲಿಸ್ಟ್ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಡಿಜಿಟಲೀಕರಣದಿಂದ ಕಾಸ್ಟ್ ಕಟ್ಟಿಂಗ್ ..!
Yes ಬ್ಯಾಂಕ್ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.
Yes ಬ್ಯಾಂಕ್ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.
LATEST NEWS
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಬೆಂಗಳೂರು : ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್ ಹೈಕೋರ್ಟ್ ಮೆಟ್ಟಿಲೇರಬೇಕಿದೆ.
ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?
ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್ಐಟಿ ಕಸ್ಟಡಿಗೆ ನೀಡಿದೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- DAKSHINA KANNADA2 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- DAKSHINA KANNADA6 days ago
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Pingback: ಕಾಸರಗೋಡು : ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಅವಳಿ ಮಕ್ಕಳಿಬ್ಬರು ಸಾ*ವು - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ಪತ್ನಿಯನ್ನು ಗುಂಡಿಕ್ಕಿ ಕೊಂ*ದು ಆತ್ಮಹ*ತ್ಯೆ ಮಾಡಿಕೊಂಡ ಪತಿ! - NAMMAKUDLA NEWS - ನಮ್ಮಕುಡ್ಲ ನ್ಯೂಸ್