Connect with us

DAKSHINA KANNADA

ಇಂಡಿಯಾನ ಆಸ್ಪತ್ರೆಯಿಂದ ಸಾಧನೆಯ ಮತ್ತೊಂದು ಮೈಲಿಗಲ್ಲು : ಬೈಪಾಸ್ ಸರ್ಜರಿ ಇಲ್ಲದೇ ಹೃದಯ ಕವಾಟು ಬದಲಿಸಿದ ವೈದ್ಯರು..!

Published

on

ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು ಸಾಧನೆಯನ್ನು ಮೆರೆದಿದೆ.

ಮಂಗಳೂರು : ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು ಸಾಧನೆಯನ್ನು ಮೆರೆದಿದೆ.

 

ಬೈಪಾಸ್ ಸರ್ಜರಿ ಇಲ್ಲದೆಯೇ ರೋಗಿಯೊಬ್ಬರ ಹೃದಯದ ಕವಾಟು ಬದಲಿಸುವ ಚಿಕಿತ್ಸೆಯನ್ನು ಯಶಸ್ವಿಯಾಗಿ ನೀಡಲಾಗಿದೆ. ಆಸ್ಪತ್ರೆಯ ಮುಖ್ಯಸ್ಥ ಡಾ.ಯೂಸುಫ್ ಎ. ಕುಂಬ್ಳೆ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಜನವರಿ 8ರಂದು ಇಂಡಿಯಾನ ಆಸ್ಪತ್ರೆಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ದಾಖಲಾಗಿದ್ದ ದೂರದ ಕೀನ್ಯಾದ ರೋಗಿಯೊಬ್ಬರಿಗೆ ಬೈ ಪಾಸ್ ಸರ್ಜರಿ ಇಲ್ಲದೆಯೇ ಯಶಸ್ವಿಯಾಗಿ ಹೃದಯದ ಕವಾಟವನ್ನು ಬದಲಿಸಲಾಯಿತು.

ಆಕೆಗೆ ಟ್ರಾನ್ಸ್‌ಕ್ಯಾಥೆಟರ್ ಎಂಬ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು, ಕನಿಷ್ಠ ಅಪಾಯದ ಕಾರ್ಯವಿಧಾನದ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಕೇವಲ ಒಂದು ಗಂಟೆಯ ಅವಧಿಯಲ್ಲಿ ಈ ಅತ್ಯಾಧುನಿಕ ಚಿಕಿತ್ಸೆಯನ್ನು ನಮ್ಮ ವೈದ್ಯರ ತಂಡ ಯಶಸ್ವಿಯಾಗಿ ಮಾಡಿ ಮುಗಿಸಿದೆ. ಇನ್ನೊಂದು ಹೊಸ ಸಾಧನೆ ಮಾಡಿದ ಶ್ರೇಯಸ್ಸಿಗೆ ಪಾತ್ರವಾಯಿತು.

ಇಂಡಿಯಾನ ಆಸ್ಪತ್ರೆಯ ಎರಡನೇ ಸಾಧನೆ. ಈ ಅತ್ಯಾಧುನಿಕ ಚಿಕಿತ್ಸೆಯನ್ನು ಭಾರತದಲ್ಲೇ ಮೊದಲ ಬಾರಿ 2019ರಲ್ಲಿ ಇಂಡಿಯಾನ ಆಸ್ಪತ್ರೆಯಲ್ಲಿ ಮಾಡಲಾಗಿತ್ತು ಎಂಬುದೂ ಇಲ್ಲಿ ಉಲ್ಲೇಖನೀಯ ಎಂದರು.

ವೈದ್ಯಕೀಯ ಭಾಷೆಯಲ್ಲಿ ಮೈಟ್ರಲ್ ವಾಲ್ವ್’ ಎಂದು ಕರೆಯಲಾಗುವ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೀನ್ಯಾದ 65 ವರ್ಷದ ಮಹಿಳಾ ರೋಗಿಯು ಈ ಮೊದಲು 2014ರಲ್ಲಿ ಅಹ್ಮದಾಬಾದ್ ನಲ್ಲಿ ಬೈಪಾಸ್ ಹಾರ್ಟ್ ಸರ್ಜರಿಗೆ ಒಳಗಾಗಿ, ಹೃದಯಕ್ಕೆ ಕೃತಕ ಕವಾಟನ್ನು ಅಳವಡಿಸಿಕೊಂಡಿದ್ದರು.

8 ವರ್ಷಗಳ ಬಳಿಕ ಆಕೆಯ ಹೃದಯದ ಕೃತಕ ಕವಾಟು ಕಾರ್ಯನಿರ್ವಹಿಸುವಲ್ಲಿ ಸಮಸ್ಯೆ ಕಾಣಿಸಿಕೊಂಡಿತು.

ಇದರಿಂದಾಗಿ ಆಕೆಗಿದ್ದ ಹೃದಯ ಸಂಬಂಧಿ ಕಾಯಿಲೆ ಮತ್ತಷ್ಟು ಉಲ್ಬಣಗೊಂಡು, ತೀವ್ರತರದ ಉಸಿರಾಟದ ಸಮಸ್ಯೆ, ಮತ್ತು ತೀವ್ರ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳತೊಡಗಿತ್ತು.

ಈ ಹಿನ್ನೆಲೆಯಲ್ಲಿ ರೋಗಿ ಈ ಮೊದಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಹ್ಮದಾಬಾದ್‌ನ ಅದೇ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಅಲ್ಲಿನ ವೈದ್ಯರು ಪುನಃ ಓಪನ್ ಹಾರ್ಟ್ ಬೈಪಾಸ್ ಸರ್ಜರಿ (ತೆರೆದ ಹೃದಯ ಶಸ್ತ್ರಚಿಕಿತ್ಸೆ) ಮಾಡಬೇಕು.

ಇದರ ಹೊರತು ಬೇರೆ ಯಾವುದೇ ದಾರಿ ಇಲ್ಲ ಎಂದಾಗ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯ ಮುಖ್ಯಸ್ಥ ಡಾ.ಯೂಸುಫ್ ಕುಂಬ್ಳೆಯನ್ನು ಸಂಪರ್ಕಿಸಿ, ರೋಗಿಯ ಗಂಭೀರ ಸ್ಥಿತಿಯ ಕುರಿತು ಮಾಹಿತಿ ನೀಡಿದೆವು.

ಆಗ, ಡಾ.ಯೂಸುಫ್ ಕುಂಬ್ಳೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗದೆ, ಇಂಟರ್ ವೆನ್ಷನಲ್ ಟೆಕ್ನಿಕ್ ನ ಮೂಲಕ (ಹಳೆಯ ಕವಾಟನ್ನು ತೆಗೆಯದ ಬೇರೆ ಕವಾಟನ್ನು ಅಳವಡಿಸುವ ಮಧ್ಯಂತರ ಪರ್ಯಾಯ ಚಿಕಿತ್ಸೆ) ವಾಲ್ಟ್ ಅನ್ನು ಬದಲಾಯಿಸಬಹುದು ಎಂಬುದಾಗಿ ನಮಗೆ ಭರವಸೆ ನೀಡಿದ್ದರು ಮತ್ತು ಅದು ಇಂದು ಯಶಸ್ವಿಯೂ ಆಗಿದೆ ಎಂದು ಕೀನ್ಯಾದ ಮಹಿಳೆಯ ಪುತ್ರ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ಡಾ.ಅಲಿ ಕುಂಬ್ಳೆ, ತಜ್ಞರಾದ ಡಾ.ಅಪೂರ್ವ ಜಯದೇವ್ ಮತ್ತು ಡಾ.ಸಂಧ್ಯಾರಾಣಿ ಉಪಸ್ಥಿತರಿದ್ದರು.

bangalore

“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್  ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.

ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.

ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.

ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.


ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.

ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.

ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.

Continue Reading

BELTHANGADY

Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

Published

on

ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Continue Reading

DAKSHINA KANNADA

Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!

Published

on

ಮಂಗಳೂರು:  ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್‌ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.

ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್‌ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading

LATEST NEWS

Trending