Monday, January 24, 2022

ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿ ದುರಂತ..!

ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿ ದುರಂತ..!

ಉಡುಪಿ : ಮೀನುಗಾರಿಕಾ ಬೋಟೊಂದು ಸಮುದ್ರದ ಅಬ್ಬರದ ಅಲೆಗಳಿಗೆ ಸಿಲುಕಿ ಬಂಡೆಗೆ ಢಿಕ್ಕಿ ಹೊಡೆದು ನೀರಿನಲ್ಲಿ ಮುಳುಗಿರುವ ಘಟನೆ ಉಡುಪಿಯ ಸಮುದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಉದ್ಯಾವರ ಮುದ್ದಲಗುಡ್ಡೆಯ ಗಿರೀಶ್ ಸುವರ್ಣ ಮಾಲಕತ್ವದ ಬಾಹು ಬಲಿ ಮೀನುಗಾರಿಕಾ ಬೋಟು, ನಸುಕಿನ ವೇಳೆ 3.30ರ ಸುಮಾರಿಗೆ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರೊಂದಿಗೆ ಸಮುದ್ರಕ್ಕೆ ತೆರಳಿತ್ತು.

ಬಂದರಿನಿಂದ ಸುಮಾರು ಮೂರು ನಾಟಿಕಲ್ ದೂರದ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಬೋಟು ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಢಿಕ್ಕಿಯ ಕಾರಣಕ್ಕೆ ಬೋಟಿನ ತಳಭಾಗ ಜಖಂ ಆಗಿ ಬೋಟಿನ ಇಂಜಿನ್ ರೂಮ್ ಒಳಗೆ ನೀರು ತುಂಬಿ ಬೋಟು ಮುಳುಗಡೆ ಯಾಗುವ ಭೀತಿ ಎದುರಾಗಿತ್ತು. ಜೀವ ರಕ್ಷಣೆಗಾಗಿ ಭೋಟಿನಲ್ಲಿದ್ದ ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ.

ಕೂಡಲೇ ಸನಿಹದಲ್ಲಿದ್ದ ಬೋಟಿನವರು ಎಲ್ಲ ಮೀನುಗಾರರನ್ನು ರಕ್ಷಿಸಿ, ಬೋಟನ್ನು ಮೇಲಕ್ಕೆ ಎತ್ಕಲು ಪ್ರಯತ್ನಿಸಿದರೂ ಫಲಕಾರಿಯಾಗದೇ.ನೀರಿನಲ್ಲಿ ಮುಳುಗಿತ್ತೆನ್ನಲಾಗಿದೆ.

ಈ ಅವಘಡದಿಂದ ಬೋಟಿನಲ್ಲಿದ್ದ ಬಲೆ, ಮಂಜುಗಡ್ಡೆ, ಡಿಸೇಲ್ ಸೇರಿ ಒಟ್ಟು 80ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮಾಲಕ ಗಿರೀಶ್ ಸುವರ್ಣ ಮಲ್ಪೆ ಕರಾವಳಿ ಕಾವಲು ಪಡೆಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...