Tuesday, January 26, 2021

ರಾಜ್ಯದಲ್ಲಿ ಮತ್ತೊಂದು ದುರಂತ: ಔತಣಕೂಟಕ್ಕೆ ಬಂದಿದ್ದ ಐವರು ಜಲಸಮಾಧಿ..!

ರಾಜ್ಯದಲ್ಲಿ ಮತ್ತೊಂದು ದುರಂತ: ಔತಣಕೂಟಕ್ಕೆ ಬಂದಿದ್ದ ಐವರು ಜಲಸಮಾಧಿ..!

ಚಿಕ್ಕಮಗಳೂರು: ಬೀಗರ ಊಟಕ್ಕೆ ಆಗಮಿಸಿ ಕೆರೆಗೆ ಈಜಲು ಹೋದ ಐವರು ಯುವಕರು ನೀರುಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಓರ್ವನ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರು ನಾಪತ್ತೆಯಾಗಿದ್ದಾರೆ.ಚಿಕ್ಕಮಗಳೂರು ತಾಲ್ಲೂಕು ವಸ್ತಾರೆಯ ಹಿರೇಕೆರೆಯಲ್ಲಿ ಈ ಘಟನೆ ನಡೆದಿದೆ.  ಐವರು ಯುವಕರಲ್ಲಿ ಇಬ್ಬರು ಸ್ಥಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ.ರಘು (22), ದಿಲೀಪ್ (24), ಸಂದೀಪ್ (23), ದೀಪಕ್ (25) ಸುದೀಪ್ (22) ನೀರುಪಾಲಾದ ಯುವಕರು.

ಇವರಲ್ಲಿ ಸಂದೀಪ್ ಎಂಬಾತನ ಮೃತದೇಹ ಪತ್ತೆಯಾಗಿದ್ದು, ನಾಲ್ವರ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ.ಮೂವರು ವಸ್ತಾರೆ ಗ್ರಾಮದಲ್ಲಿ ಬೀಗರ ಊಟಕ್ಕೆಂದು ಬಂದಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.